ಅರಣ್ಯದಂಚಿನ ಗ್ರಾಮಗಳ ಜಾನುವಾರುಗಳಿಗೆ ಲಸಿಕೆ
Team Udayavani, Oct 16, 2021, 12:38 PM IST
ಹುಣಸೂರು: ನಾಗರಹೊಳೆ ಉದ್ಯಾನ ದಂಚಿನ ಗ್ರಾಮಗಳಲ್ಲಿ ಪಶು ವೈದ್ಯಕೀಯ ಇಲಾಖೆ, ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ಹಾಗೂ ಮೈಮುಲ್ ನೆರವಿನಿಂದ ಜಾನುವಾರುಗಳಿಗೆ ಕಾಲು-ಬಾಯಿ ಜ್ವರದ ಲಸಿಕೆ ನೀಡುವ ಕಾರ್ಯಕ್ಕೆ ಉಡುವೆಪುರದಲ್ಲಿ ಚಾಲನೆ ನೀಡಲಾಯಿತು. ಈ ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದಿವೆ.
ಹನಗೋಡು ಪಶು ಆಸ್ಪತ್ರೆ ವೈದ್ಯ ಡಾ| ದರ್ಶನ್ ನೇತೃತ್ವದಲ್ಲಿ ಸಿಬ್ಬಂದಿ ರಾಸುಗಳಿಗೆ ಲಸಿಕೆ ನೀಡುವ ಮೂಲಕ ರೈತರಿಗೆ ಆರೋಗ್ಯ ಮಾಹಿತಿ ನೀಡಿದರು. ಸರ್ಕಾರ ದಿಂದ ಲಸಿಕೆ ಬಾರದ ಹಿನ್ನೆಲೆಯಲ್ಲಿ ನಾಗರಹೊಳೆ ಹುಲಿ ಯೋಜನೆ ಹಾಗೂ ಮೈಮುಲ್‌ನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಲಸಿಕೆ ಒದಗಿಸಲಾಗಿದೆ.
ಆದ್ಯತೆ ಮೇರೆಗೆ ನಾಗರಹೊಳೆ ಉದ್ಯಾನ ದಂಚಿನ ಉಡುವೆಪುರ, ನೇರಳಕುಪ್ಪೆ, ಬಿಲ್ಲೇನಹೊಸಹಳ್ಳಿ, ಕಾಳಬೂಚನಹಳ್ಳಿ, ಕಚುವಿನಹಳ್ಳಿ, ಕಡೇಮನುಗನಹಳ್ಳಿ, ಸಿಂಡೇನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಲಸಿಕೆ ಪಶುವೈದ್ಯರು ನೀಡಿದರು. ಈ ಭಾಗದಲ್ಲಿ ನಿತ್ಯವೂ ಲಸಿಕೆ ಹಾಕಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಲಸಿಕೆ ನೀಡುವ ವೇಳೆ ಅರಣ್ಯ ಸಿಬ್ಬಂದಿ ಹಾಗೂ ಡೇರಿ ಕಾರ್ಯದರ್ಶಿಗಳು ಉಪಸ್ಥಿತರಿ ದ್ದರು. ಉದಯವಾಣಿಯಲ್ಲಿ ಅ.10ರಂದು ತಾಲೂಕಿನಲ್ಲಿ ಕಾಲುಬಾಯಿ ಜ್ವರ ಉಲ್ಬಣ ಗೊಂಡಿರುವ ಕುರಿತು ಸಮಗ್ರ ವರದಿ ಪ್ರಕಟಿಸಿ ಬೆಳಕು ಚೆಲ್ಲಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.