ಭೂಕಂಪನ ಭಯಗ್ರಸ್ತ ಹೊಸಳ್ಳಿ-ಹೆಚ್ ನಲ್ಲಿ ಕಲಬುರಗಿ ಡಿಸಿ ವಿ.ವಿ. ಜ್ಯೋತ್ಸ್ನಾ ಗ್ರಾಮವಾಸ್ತವ್ಯ
Team Udayavani, Oct 16, 2021, 2:57 PM IST
ಕಲಬುರಗಿ: ಭೂಕಂಪನದಿಂದ ತೊಂದರೆಗೆ ಒಳಗಾಗಿರುವ ಗಡಿಕೇಶ್ವಾರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸಬೇಕು ಎಂದು ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಸಲಹೆ ನೀಡಿದರು.
ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಹೊಸಳ್ಳಿ-ಹೆಚ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾಧಿಕಾರಿಗಳ ನಡೆ- ಹಳ್ಳಿ ಕಡೆ’ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂಕಂಪನಕ್ಕೆ ಅಂಜದೆ ಧೈರ್ಯದಿಂದ ಇರಬೇಕು ಎಂದು ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ತುಂಬಿದರು.
ಪ್ರವಾಹದಂತೆ ಭೂಕಂಪನದ ಮುನ್ಸೂಚನೆಯನ್ನು ಮೊದಲೇ ಅರಿಯಲು ಸಾಧ್ಯವಿಲ್ಲ. ಎಂತಹ ವಿಜ್ಞಾನಿಗಳೂ ಅಥವಾ ಯಾವುದೇ ಭಾರಿ ಯಂತ್ರಗಳೂ ಕೂಡ ಸಂಭವಿಸಬಹುದಾದ ಭೂಕಂಪವನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಭೂಕಂಪನದ ಗ್ರಾಮಗಳ ಮನೆಗಳ ಸುರಕ್ಷಿತವಾಗಿರುವ ಬಗ್ಗೆ ಸರ್ವೇ ನಡೆಯುತ್ತಿದೆ. ಗಟ್ಟಿ ಮುಟ್ಟಾಗಿರುವ ಮನೆಗಳ ಜನರು ಅವರವರ ಮನೆಗಳಲ್ಲೇ ಉಳಿದು ಕೊಳ್ಳಬಹುದು. ಅಸುರಕ್ಷಿತ ಮನೆಗಳ ಸದಸ್ಯರು ಸರ್ಕಾರದ ವತಿಯಿಂದ ನಿರ್ಮಿಸಿರುವ ತಾತ್ಕಾಲಿಕ ಶೆಡ್ ಗಳಲ್ಲಿ ತಂಗಬಹುದು ಎಂದರು.
ಮನೆಗಳ ಸಮೀಕ್ಷೆ ಸಂದರ್ಭದಲ್ಲಿ ಉಳ್ಳವರು ಕೋಣೆ ಮತ್ತಿತರವುಗಳ ಮಾರ್ಪಾಡು ಮಾಡಿಕೊಳ್ಳಬೇಕು ಎಂದು ತಿಳಿಸಿದ ಅವರು ಆರ್ಥಿಕವಾಗಿ ಸದೃಢವಿಲ್ಲದವರ ಮನೆಗಳ ರಚನೆಯನ್ನು ಸರ್ಕಾರಿ ವೆಚ್ಚದಲ್ಲೇ ಮಾರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.
ಪ್ರವಾಹ, ಕೋವಿಡ್ ಮುಂತಾದ ಸಂದರ್ಭದಲ್ಲಿ ಜಿಲ್ಲೆಯನ್ನು ಸುತ್ತಿದ್ದೇನೆ. ಆದರೆ, ಹೊಸಳ್ಳಿ- ಹೆಚ್ ಗ್ರಾಮದಲ್ಲಿನ ಜನರ ಪ್ರೀತಿಯಾದರಗಳನ್ನು ಎಲ್ಲಿಯೂ ಕಂಡಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.
ಭೂಕಂಪನ ಸಂದರ್ಭದಲ್ಲಿ ಜನರಲ್ಲಿ ಭಯ-ಆತಂಕ ಮನೆ ಮಾಡಿರುತ್ತದೆ. ಆದರೆ, ನಿಮ್ಮಲ್ಲಿ ಅದೆಲ್ಲಾ ಮರೆಯಾಗಿ ಪ್ರೀತಿಯ ಭಾವ ಕಾಣುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಇದನ್ನೂ ಓದಿ:ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್
ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಪಿಂಚಣಿ ಸಮಸ್ಯೆ, ಪಹಣಿ, ಆಧಾರ್, ಚುನಾವಣಾ ಗುರುತಿನ ಪತ್ರ ತಿದ್ದುಪಡಿ ಮುಂತಾದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಇದರ ಸದುಪಯೋಗ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಶಶಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಶೇಕಡ 100ರಷ್ಟು ಕೋವಿಡ್ ವ್ಯಾಕ್ಸಿನ್ ಲಸಿಕೆ ಹಾಕುವ ಗುರಿಹೊಂದಲಾಗಿದೆ. ಅದ್ದರಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೇಡಂ ಉಪವಿಭಾಗದ ಸಹಾಯಕ ಅಯುಕ್ತೆ ಮೋನಾ ರೂಟ್, ಭೂ ದಾಖಲೆಗಳ ಉಪ ನಿರ್ದೇಶಕ ಶಂಕರ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್ ಪಟೇಲ್, ತಹಶೀಲ್ದಾರ ನಾಗನಾಥ ತರಗೆ, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅನೀಲ್ ರಾಠೋಡ, ಹಲಚೇರಾ ಗ್ರಾ.ಪಂ. ಅಧ್ಯಕ್ಷ ಶಿವಗಂಗಾ ಅಂಬ್ರೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಶರಣಗೌಡ ಮಾಲಿಪಾಟೀಲ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೆಬೂಬ ಪಟೇಲ್ ಸೇರಿದಂತೆ ಇನ್ನಿತರ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.