ಸರ್ಕಾರಿ ಕೆಲಸ ಕೊಡಿಸುವುದಾಗಿ 500 ಮಂದಿಗೆ ವಂಚನೆ

ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

Team Udayavani, Oct 17, 2021, 9:53 AM IST

1

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸಂಚಾರಿ ನಿರೀಕ್ಷರ ಹುದ್ದೆ ಕೊಡಿಸುವುದಾಗಿ ನಂಬಿಸಿ ನೂರಾರು ಮಂದಿ ಯಿಂದ ಕೋಟ್ಯಂತರ ರೂ. ವಂಚಿಸಿದ ಕೆಎಸ್‌ ಆರ್‌ಟಿಸಿ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಮಾಗಡಿ ರಸ್ತೆ ಠಾಣೆ ಪೊಲೀಸುರು ಬಂಧಿಸಿದ್ದಾರೆ. ಬಳ್ಳಾರಿಯ ಹಗರಿಬೊಮ್ಮನಹಳ್ಳಿ ಮೂಲದ ಮಂಜುನಾಥ್‌ ಬಿಲ್ಲಾ ನಾಯಕ್‌ (45) ಹಾಗೂ ಆತನ ಸ್ನೇಹಿತ ಅನಿಲ್‌ (41) ಬಂಧಿತರು.

ಆರೋಪಿಗಳು ಸುಮಾರು 500ಕ್ಕೂ ಅಧಿಕ ಮಂದಿಗೆ ಸುಮಾರು 15-18 ಕೋಟಿ ರೂ. ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಆದರೆ, ಆತನ ಖಾತೆ ಪರಿಶೀಲಿಸಿದಾಗ ಸುಮಾರು 2.5 ಕೋಟಿ ರೂ. ಹಣ ಇರುವುದು ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಆರೋಪಿಗಳ ಪೈಕಿ ಮಂಜು ನಾಥ್‌ ಬಿಲ್ಲಾ ನಾಯಕ್‌ ಕೆಎಸ್‌ಆರ್‌ಟಿಸಿ ಚಾಲಕನಾಗಿದ್ದು, ತನ್ನ ಸ್ನೇಹಿತರನ್ನು ಮಧ್ಯವರ್ತಿಗಳ ನ್ನಾಗಿ ಮಾಡಿಕೊಂಡು ದಂಧೆ ನಡೆಸುತ್ತಿದ್ದ.

ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ವಿ.ಎಸ್‌.ಅರಗಿಶೆಟ್ಟಿ ಎಂಬುವರಿಗೆ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವು ದಾಗಿ 11 ಲಕ್ಷರೂ. ವಂಚಿಸಿದ್ದರು. ಬೆಂಗಳೂರಿನಲ್ಲಿ ಬಿಡೂÉéಎಸ್‌ಎಸ್‌ಬಿಯಲ್ಲಿ ಎಸ್‌ಡಿಎ ಆಗಿರುವ ಅವರ ಸಹೋದರ ವೀರೇಶ್‌ ಮನೆಗೆ ಹೋಗಿ ವಾಪಸ್‌ ಹೋಗುವಾಗ ಆರೋಪಿ ಮಂಜುನಾಥ್‌ ಪರಿಚಯವಾಗಿದೆ. ಈ ವೇಳೆ ಆರೋಪಿ ತನಗೆ ಇಲಾಖೆ ಯಲ್ಲಿ ಹಿರಿಯ ಅಧಿಕಾರಿಗಳು ಪರಿಚಯವಿದ್ದಾರೆ ಎಂದು ಹೇಳಿ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಹುದ್ದೆ ಕೊಡಿಸುವುದಾಗಿ ನಂಬಿಸಿದ್ದಾನೆ.

ಇದನ್ನೂ ಓದಿ;- ಸಂಗೂರ ಸಕ್ಕರೆ ಕಾರ್ಖಾನೆ ಮುಚ್ಚುವುದರಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ: ಸಿಎಂ ಬೊಮ್ಮಾಯಿ

ನಂತರ 2018ರಲ್ಲಿ ಬೆಂಗಳೂರಿನ ಹೋಟೆಲ್‌ವೊಂದಕ್ಕೆ ಕರೆಸಿಕೊಂಡು 2019ರವರೆಗೆ ವಿವಿಧ ಹಂತದಲ್ಲಿ 11 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದಾನೆ. ಈ ಸಂಬಂಧ ಮಾಗಡಿ ರಸ್ತೆ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆ ಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಮಂಜುನಾಥ್‌ ವಂಚಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾನೆ.

ಅದಕ್ಕಾಗಿ ಕಾರೊಂದನ್ನು ಖರೀದಿಸಿ ಅದಕ್ಕೆ ಕರ್ನಾಟಕ ಸರ್ಕಾರದ ನಾಮಫ‌ಲಕ ಹಾಕಿಕೊಂಡು ಉತ್ತರ ಕರ್ನಾಟಕದಲ್ಲಿ ತನ್ನ ಸ್ನೇಹಿತರ ಜತೆ ಸುತ್ತಾಡುತ್ತಿ ದ್ದ. ಈ ವೇಳೆ ಪರಿಚಯವಾಗುವ ಮತ್ತು ಕರ್ತವ್ಯದ ವೇಳೆಯಲ್ಲಿ ಪರಿಚಯವಾಗುವ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಕೆಎಸ್‌ ಆರ್‌ಟಿಸಿಯಲ್ಲಿ ಟ್ರಾಫಿಕ್‌ ಇನ್ಸ್‌ಪೆಕ್ಟರ್‌ ಉದ್ಯೋಗ ಕೊಡಿಸುವುದಾಗಿ ನಂಬಿಸುತ್ತಿದ್ದ.

ಬಳಿಕ ಅವರಿಂದ ಹಣ ವಸೂಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಇದುವರೆಗೂ ಸುಮಾರು 500 ಮಂದಿಗೆ ಸುಮಾರು 15ರಿಂದ 18 ಕೋಟಿ ರೂ. ವಂಚಿಸಿದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಮಧ್ಯವರ್ತಿಗಳಿಂದ ವಸೂಲಿ–  ಹಣ ವಸೂಲಿಗೆಂದೇ ಆರೋಪಿ ಸುಮಾರು 30 ಮಂದಿ ಸ್ನೇಹಿತರನ್ನು ಮಧ್ಯವರ್ತಿಗಳನ್ನಾಗಿ ನೇಮಿಸಿಕೊಂಡಿದ್ದಾನೆ. ಸರ್ಕಾರ ಮತ್ತು ಇಲಾಖೆಯಲ್ಲಿಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು  ಪರಿಚಯವಿದ್ದಾರೆ ಎಂದು ನಂಬಿಸುತ್ತಿದ್ದ.

ನಂಬಿದ ಸಾರ್ವಜನಿಕರಿಂದ ಹಣ ವಸೂಲಿಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದ. ನಂತರ ಸ್ನೇಹಿತರಿಗೆ ಇಂತಿಷ್ಟು ಹಣ ಕೊಡುತ್ತಿದ್ದ. ಆದರೆ, ಆರೋಪಿ ಬಳಿ ಯಾವುದೇ ಆಸ್ತಿ-ಪಾಸ್ತಿ ಇಲ್ಲ. ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮೋಜು-ಮಸ್ತಿ ಮಾಡಿ ಕಳೆದಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.