ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

Team Udayavani, Oct 17, 2021, 12:42 PM IST

ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ತಹಶೀಲ್ದಾರ್‌ ಚಾಲನೆ

ದೇವನಹಳ್ಳಿ: ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಜಾಲಿಗೆ ಗ್ರಾಪಂ ಕಚೇರಿಯ ಆವರಣ ದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಕಾರ್‌ ಬಂದ್‌ ತಾಳೆಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಮುಂಜಾಗ್ರತೆ ಕ್ರಮ, ಎ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ದೊರೆತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್‌ ಕಾರ್ಡ್‌ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಗುಮಾಸ್ತರನ್ನು ಹೊರತುಪಡಿಸಿ ಉಳಿದ ಅಧಿಕಾರಿ ಸಿಬ್ಬಂದಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಹಳ್ಳಿಗಳಿಗೆ ಭೇಟಿ ನೀಡಿ, ಹಳ್ಳಿ ವಾಸ್ತವ್ಯ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ, ಎಸ್‌ಸಿ ಹಾಗೂ ಎಸ್‌ಟಿ ವಸತಿ ನಿಲಯದಲ್ಲಿ ಭೋಜನ ಸ್ವೀಕರಿಸಬೇಕು.

ಕಾರ್ಯಕ್ರಮದ ಒಂದು ವಾರದ ಮೊದಲೇ ಕಂದಾಯ ಇಲಾಖೆಯ ಅಧಿಕಾರಿಗಳು, ಹಳ್ಳಿಗಳಿಗೆ ಭೇಟಿ ನೀಡಿ, ಸರ್ಕಾರದಿಂದ ನೀಡಿರುವ ಕಾರ್ಯ ಸೂಚಿಗಳನ್ವಯ -ಫ‌ಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ, ಅರ್ಜಿಗಳ ಬಗ್ಗೆ ಯಾರ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೊದಲೇ ಪ್ರಕ್ರಿಯೆ ಪೂರ್ಣಗೊಳಿಸಿ, ಹಳ್ಳಿಗಳಿಗೆ ಭೇಟಿ ನೀಡಿದ ಸಂದರ್ಭ ದಲ್ಲಿ ಅರ್ಜಿಗಳು ವಿಲೇವಾರಿಯಾಗಿರುವ ಬಗ್ಗೆ ಸಂಬಂ ಧಪಟ್ಟ ಫ‌ಲಾನುಭವಿಗಳಿಗೆ ಮಾಹಿತಿ ನೀಡಬೇಕು.

ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು. ತಹಶೀಲ್ದಾರ್‌ ಅನಿಲ್‌ ಕುಮಾರ್‌ ಅರೋಲಿಕರ್‌ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗುವಂತಾಗಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಇಲಾಖಾವಾರು ಅಧಿಕಾರಿಗಳಿಂದ ಮಾಹಿತಿ ಪಡೆದಕೊಂಡು ಯಾರೂ ಸಹ ವಂಚಿತರಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮವನ್ನು ಇಡೀ ರಾಜ್ಯಾದ್ಯಂತ ಮಾಡಲಾಗುತ್ತಿದೆ.

ಈಗಾಗಲೇ ಈ ಭಾಗದಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿದೆ. ಪಿಂಚಣಿ ಅದಾಲತ್‌ ಮಾಡಲಾಗಿದೆ. ಎಲ್ಲಾ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವಂತದ್ದು. ಫ‌ಲಾನುಭವಿಗಳಿಗೆ ಸವಲತ್ತು ವಿತರಿಸಲಾಗುವುದು ಎಂದರು. ಬೆಟ್ಟೇನಹಳ್ಳಿ ಗ್ರಾಮದ ನಿವಾಸಿ ಮುನಿರತ್ನ ಮಾತ ನಾಡಿ, ಬೆಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಕಳೆದ ಮೂರ್‍ನಾಲ್ಕು ಬಾರಿ ಗ್ರಾಪಂ ಮತ್ತು ವಿಶ್ವನಾಥಪುರ ಪೊಲೀಸರಿಗೆ ಮನವಿ ಮಾಡಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ. ಮನೆ ಮತ್ತು ಅಂಗಡಿಗಳಲ್ಲಿ ಮದ್ಯ ಮಾರಾಟ ಆಗುತ್ತಿದೆ.

ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿದೆ. ಕೂಡಲೇ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು. ದೊಡ್ಡಬಳ್ಳಾಪುರ ಡಿವೈಎಸ್‌ಪಿ ರಂಗಪ್ಪ ಮಾತನಾಡಿ, ಪೊಲೀಸ್‌ ಠಾಣೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಜನರು ನಿರ್ಭಿತಿಯಿಂದ ಸಲ್ಲಿಸಬೇಕು, ಅವುಗಳನ್ನು ಪರಿಶೀಲನೆ ಮಾಡಿ, ಬಾಧಿತರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ಹೇಳಿದರು. ಗ್ರಾಪಂ ಅಧ್ಯಕ್ಷ ದೀಪ್ತಿ ವಿಜಯಕುಮಾರ್‌ ಮಾತ ನಾಡಿ, ಗ್ರಾಪಂ ವ್ಯಾಪ್ರಿಯಲ್ಲಿ ಬರುವಂತಹ ಎಲ್ಲಾ ಸ್ಮಶಾನ ಜಾಗಗಳನ್ನು ತಕ್ಷಣ ಸರ್ವೆ ಮಾಡಿಕೊಡಬೇಕು. ಸುಮಾರು ದಿನಗಳಿಂದ ಪ್ರತಿ ಗ್ರಾಮದಲ್ಲಿ ಸ್ಮಶಾನವನ್ನು ಗುರ್ತಿಸಿಕೊಡಬೇಕು.

ಪ್ರತಿ ಜನರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿ ಸಬೇಕು ಎಂದು ಹೇಳಿದರು. ತಾಪಂ ಇಒ ಎಚ್‌.ಡಿ.ವಸಂತ್‌ ಕುಮಾರ್‌ ಮಾತ ನಾಡಿ, ಗ್ರಾಪಂಗಳಲ್ಲಿ ಸಿಗಬೇಕಾಗಿರುವ ಸೌಲಭ್ಯಗಳಲ್ಲಿ ಲೋಪದೋಷವಾಗಿದ್ದರೆ, ನೇರವಾಗಿ ದೂರು ಕೊಡಿ, ಸೌಲಭ್ಯಗಳು ಸಿಗದಿದ್ದಲ್ಲಿ ಅವುಗಳನ್ನು ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ:- ವಾರದಲ್ಲಿ ವಿದ್ಯುತ್ ಸಂಪರ್ಕಕ್ಕೆ  ಶಾಸಕ ಮಂಜುನಾಥ್ ಆದೇಶ

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಬೆಸ್ಕಾಂ, ಮೀನುಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವಂತಹ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ವೃದ್ಧರಿಗೆ ಪಿಂಚಣಿ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿದರು. ಆರೋಗ್ಯ ಇಲಾಖೆಯಿಂದ ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಿದರು.

ಶ್ರೀರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾಪಂ ಉಪಾಧ್ಯಕ್ಷ ಬಾಲಸುಬ್ರಮಣ್ಯ, ಗ್ರಾಪಂ ಪಿಡಿಒ ಉಷಾ, ಉಪತಹಶೀಲ್ದಾರ್‌ ಚೈತ್ರಾ, ರಾಜಸ್ವ ನಿರೀಕ್ಷಕ ಚಿದಾನಂದ, ಗ್ರಾಪಂ ಮಾಜಿ ಅಧ್ಯಕ್ಷ ಶ್ರೀರಾಮಪ್ಪ, ತಾಲೂಕು ಸೊಸೈಟಿ ನಿರ್ದೇಶಕ ಕಾಮೇನಹಳ್ಳಿ ರಮೇಶ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌. ಮುನೇಗೌಡ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೊಣ್ಣಪ್ಪ ಹಾಗೂ ಗ್ರಾಪಂ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.