ಭಾಗವತ್‌ರ ಹೇಳಿಕೆ ಅರ್ಚಕರ ಬದುಕಿಗೆ ಕೊಳ್ಳಿ ಇಡಲಿದೆ : ದಿನೇಶ್ ಗುಂಡೂರಾವ್
Team Udayavani, Oct 17, 2021, 1:39 PM IST
ಬೆಂಗಳೂರು : ಮುಜರಾಯಿ ದೇವಸ್ಥಾನಗಳನ್ನು ಭಕ್ತರ ಸುಪರ್ದಿಗೆ ನೀಡಬೇಕು ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯಲ್ಲಿ ಅರ್ಥವಿಲ್ಲ.ಇದು ಪೂಜಾವೃತ್ತಿಯನ್ನು ನಂಬಿರುವ ಅಸಂಖ್ಯಾತ ಅರ್ಚಕ ಸಮುದಾಯದ ಬದುಕಿನ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಭಾನುವಾರ ಟ್ವೀಟ್ ಮಾಡಿದ್ದಾರೆ.
ಖಾಸಗಿ ವ್ಯಕ್ತಿಗಳಿಗೆ ದೇಗುಲ ನಿರ್ವಹಣೆ ನೀಡಿದರೆ ಅರ್ಚಕರ ಬದುಕಿಗೆ ಭದ್ರತೆ ಒದಗಿಸುವರ್ಯಾರು? ನಮ್ಮ ರಾಜ್ಯವೊಂದರಲ್ಲೇ ಎಬಿಸಿ ಕೆಟಗರಿಯ 36 ಸಾವಿರ ದೇವಸ್ಥಾನಗಳಿವೆ. ಇವುಗಳ ಆಸ್ತಿ ಮೌಲ್ಯ ಸುಮಾರು 10 ಲಕ್ಷ ಕೋಟಿ.ಈ ದೇವಸ್ಥಾನಗಳ ಸುಪರ್ದಿ ಖಾಸಗಿ ವ್ಯಕ್ತಿಗಳ ಪಾಲಾದರೆ ದೇಗುಲದ ಆಸ್ತಿಗಳ ರಕ್ಷಣೆಯ ಹೊಣೆ ಯಾರದ್ದು? ಇದು ಭೂ ಅವ್ಯವಹಾರಕ್ಕೆ ಆಸ್ಪದ ನೀಡಿದಂತಲ್ಲವೆ? ಹಾಗಾಗಿ ದೇಗುಲಗಳ ನಿರ್ವಹಣೆ ಸರ್ಕಾರದ ಬಳಿಯೇ ಇರುವುದು ಸಮಂಜಸ.ಭಾಗವತ್‌ರ ಹೇಳಿಕೆಯನ್ನು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ,ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ಅಧ್ಯಕ್ಷನಾಗಿ ಖಂಡಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
ಅರ್ಚಕ ವೃತ್ತಿ ಲಾಭದಾಯಕ ವೃತ್ತಿಯಲ್ಲ. ಅರ್ಚಕರಿಗೆ ಸಂಭಾವನೆಯೂ ಇಲ್ಲ.ಭಾಗವತ್‌ರ ಹೇಳಿಕೆ ಅರ್ಚಕರಷ್ಟೇ ಅಲ್ಲದೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಲಕ್ಷಾಂತರ ಹೊರಾಂಗಣ ನೌಕರರ ಬದುಕಿಗೂ ಕೊಳ್ಳಿ ಇಡಲಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.