ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ
Team Udayavani, Oct 17, 2021, 4:09 PM IST
ಹಾವೇರಿ: ರಾಜ್ಯದ ಉಪ ಚುನಾವಣೆ ಕಣ ರಂಗೇರುತ್ತಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ಲಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಸವಾಲೆಸೆದರು.
“ಹಾನಗಲ್ಲಿನಲ್ಲಿ ಉದಾಸಿ ಏನು ಮಾಡಿದ್ದಾರೆ ಎಂದು ಕೇಳುತ್ತಿದ್ದೀರಿ, ಕ್ಷೇತ್ರದ ಹಳ್ಳಿ ಹಳ್ಳಿಗೆ ಹೋಗಿ ನೋಡು ಸಿದ್ರಾಮಣ್ಣ. ನೀರಾವರಿ ಯೋಜನೆ ಮಾಡಿದ್ದು ನಮ್ಮ ಅವಧಿಯಲ್ಲಿ. ಕೋವಿಡ್ ಆಸ್ಪತ್ರೆಗೆ ಹೋಗಿ ನೋಡಿ, ರಾಜ್ಯದಲ್ಲೇ ಅತಿಹೆಚ್ಚು ಬೆಳೆ ವಿಮೆ ಪಡೆಯುತ್ತಿರುವುದು ಹಾನಗಲ್ಲಿನಲ್ಲಿ. ನೀವು ಐದು ವರ್ಷ ಏನು ಕೊಟ್ಟಿದ್ದೀರಿ ಹೇಳಿ” ಎಂದರು.
“ನಿನ್ನೆ ಮೊನ್ನೆ ಕ್ಷೇತ್ರಕ್ಕೆ ಬಂದು ಸಾಧನೆ ಮಾಡಿದ್ದೇವೆ ಎನ್ನುತ್ತೀರಿ. ನಾವು ಇಲ್ಲೇ ಇದ್ದವರು, ಇಲ್ಲಿಯೇ ಜೀವನ, ಇಲ್ಲೇ ಸಾಯುತ್ತೇವೆ. ನಾವು ಮಾತು ತಪ್ಪುವವರಲ್ಲ. ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು. ಕಾಂಗ್ರೆಸ್ ಭ್ರಷ್ಟಾಷಾರದ ಗಂಗೋತ್ರಿ” ಎಂದು ಟೀಕಿಸಿದರು.
ಇದನ್ನೂ ಓದಿ:ಉಪಚುನಾಣೆ ತಮಗೆ ಪ್ರತಿಷ್ಠೆಯ ಪ್ರಶ್ನೆಯಲ್ಲ: ಸಿಎಂ ಬಸವರಾಜ್ ಬೊಮ್ಮಾಯಿ
ಮೋದಿ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ದೊಡ್ಡವರಾಗುತ್ತೇವೆ ಎಂದುಕೊಂಡಿದ್ದಾರೆ. ಅಚ್ಚೇ ದಿನ್ ನಿಮಗಂತೂ ಬರಲು ಸಾಧ್ಯವಿಲ್ಲ. ಆದರೆ ಜನರಿಗೆ ಅಚ್ಚೇದಿನ ಬಂದಿದೆ ಎಂದರು.
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ಗೆ ಮತ ನೀಡಿದರೆ ವ್ಯರ್ಥ. ಕಾಗ್ರೆಸ್ಸಿಗರು ಬೆಂಜ್ ಕಾರ್ ಗಿರಾಕಿಗಳು. ಸೈಕಲ್ ಮೇಲೆ, ಚಕ್ಕಡಿ ಮೇಲೆ ವಿಧಾನಸೌಧಕ್ಕೆ ಬಂದರು ಎಂದ ಸಿಎಂ ಬೊಮ್ಮಾಯಿ, ಈ ಚುನಾವಣೆ ಜಿಲ್ಲೆಯ ಗೌರವದ ಪ್ರಶ್ನೆ. ಸಜ್ಜನರ ಗೆದ್ದರೆ ನಿಮ್ಮ ಮನೆ ಮಗ ಬೊಮ್ಮಾಯಿ ಗೆದ್ದಂತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.