ಕೋವಿಡ್‌ ಮರಣ: ಕುಟುಂಬದವರಿಗೆ ಪರಿಹಾರ

Team Udayavani, Oct 17, 2021, 7:47 PM IST

ಕೋವಿಡ್‌ ಮರಣ: ಕುಟುಂಬದವರಿಗೆ ಪರಿಹಾರ

ಉಡುಪಿ: ಸರಕಾರದ ಆದೇಶದಂತೆ ಕೋವಿಡ್‌ -19ನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ಧ ವಾರಸುದಾರರ ಅಥವಾ ಕುಟುಂಬದ ಓರ್ವ ಸದಸ್ಯರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೋವಿಡ್‌ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್‌ ಕುಟುಂಬಕ್ಕೆ ಒಂದು ಬಾರಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರದ ಸಂಧ್ಯಾಸುರಕ್ಷಾ ಯೋಜನೆ ಲೆಕ್ಕ ಶೀರ್ಷಿಕೆಯ ಅನುದಾನದಿಂದ 1 ಲ.ರೂ., ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬ ಮೃತರ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ ಲೆಕ್ಕ ಶೀರ್ಷಿಕೆಯ ಅನುದಾನದಿಂದ ತಲಾ 50,000 ರೂ. ಪರಿಹಾರ ನೀಡಲಾಗುತ್ತದೆ.

ಪರಿಹಾರವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡಲು ಪರಿಷ್ಕೃತ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಸಂಬಂಧಪಟ್ಟವರು ಪರಿಹಾರ ಪಡೆಯಲು ತಾಲೂಕು ಕಚೇರಿ, ಎಲ್ಲ ನಾಡ ಕಚೇರಿ, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿದಾರರು ತಮ್ಮ ವ್ಯಾಪ್ತಿಯ ತಾಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1ರಲ್ಲಿ ಮಾಹಿತಿ ಹಾಗೂ ನಮೂನೆ -2ರಲ್ಲಿ ಸ್ವಯಂ ಘೋಷಣ ಪತ್ರ, ನಮೂನೆ -3ರಲ್ಲಿ ನಿರಾಕ್ಷೇಪ ಣ ಪತ್ರವನ್ನು ಭರ್ತಿ ಮಾಡಿ ತಾಲೂಕು ಕಚೇರಿಗೆ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:ಪರಿಸ್ಥಿತಿಯ ಆಧಾರದ ಮೇಲೆ ಮಕ್ಕಳಿಗೆ ಕೋವಿಡ್ ಲಸಿಕೆ :ವಿ.ಕೆ.ಪಾಲ್

ಸಲ್ಲಿಸಬೇಕಾದ ದಾಖಲೆಗಳು
ಕೋವಿಡ್‌ -19 ಪಾಸಿಟಿವ್‌ ವರದಿ ಮತ್ತು ಕೋವಿಡ್‌ ರೋಗಿ ಸಂಖ್ಯೆ, ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ, ಮೃತ ವ್ಯಕ್ತಿಯ ಆಧಾರ್‌ ಕಾರ್ಡ್‌ ಅಥವಾ ಗುರುತಿನ ಚೀಟಿ, ಮೃತ ವ್ಯಕ್ತಿಯ ಬಿಪಿಎಲ್‌ ಪಡಿತರ ಚೀಟಿ, ಅರ್ಜಿದಾರರ ಆಧಾರ್‌ ಪ್ರತಿ, ಅರ್ಜಿದಾರರ ಬಿಪಿಎಲ್‌ ಪಡಿತರ ಚೀಟಿ, ಅರ್ಜಿದಾರರ ಬ್ಯಾಂಕ್‌/ಅಂಚೆ ಖಾತೆ ಪಾಸ್‌ ಬುಕ್‌, ಅರ್ಜಿದಾರರ ಸ್ವಯಂ ಘೋಷಣಾ ಪತ್ರ (ನಮೂನೆ-2), ಕುಟುಂಬ ಸದಸ್ಯರ ನಿರಾಕ್ಷೇಪಣ ಪತ್ರ (ನಮೂನೆ-3) ಅರ್ಜಿ ನಮೂನೆಗಳನ್ನು ವೆಬ್‌ ಸೈಟ್‌ ವಿಳಾಸ www.udupi.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅರ್ಹತೆ
ಪರಿಹಾರ ಪಾವತಿಗೆ ಪರಿಗಣಿಸುವ ಎಲ್ಲ ಮೃತ ವ್ಯಕ್ತಿಗಳು ಕೋವಿಡ್‌-19 ಕಾರಣಗಳಿಂದಾಗಿ ಮೃತಪಟ್ಟಿರಬೇಕು. ಈ ಕುರಿತು ಅಧಿಕೃತ ಮರಣ ಪ್ರಮಾಣಪತ್ರವಿರಬೇಕು. ರಾಜ್ಯ ಸರಕಾರವು ಘೋಷಿಸಿರುವ 1 ಲ.ರೂ. ಪರಿಹಾರ ಪಡೆಯಲು ಪರಿಗಣಿಸುವ ಮೃತ ವ್ಯಕ್ತಿಯು ಬಿ.ಪಿ.ಎಲ್‌. ಕುಟುಂಬದ ದುಡಿಯುವ ಸದಸ್ಯರಾಗಿರಬೇಕು. ಅರ್ಜಿದಾರರೂ ಸಹ ಅದೇ ಬಿ.ಪಿ.ಎಲ್‌. ಕುಟುಂಬದ ಸದಸ್ಯರಾಗಿರಬೇಕು. ಸೋಂಕಿನಿಂದ ಮೃತಪಟ್ಟಿರುವ ಕುರಿತು ವೈದ್ಯಕೀಯ ಪ್ರಮಾಣ ಪತ್ರ ಲಭ್ಯವಿಲ್ಲದಿದ್ದಲ್ಲಿ ಕೋವಿಡ್‌-19 ಮರಣ ದೃಢೀಕರಣ ಸಮಿತಿ ನೀಡುವ ನಿಗದಿತ ಮರಣ ಪ್ರಮಾಣ ಪತ್ರವನ್ನು ಪರಿಗಣಿಸುವುದು. ರಾಜ್ಯ ಸರಕಾರದಿಂದ ನೀಡಲಾಗುವ 1 ಲ.ರೂ. ಮರಣ ಪರಿಹಾರ ಧನ ಪಡೆಯಲು ಅರ್ಹವಾಗುವ ಬಿಪಿಎಲ್‌ ಕುಟುಂಬದ ಮೃತ ವ್ಯಕ್ತಿಯ ವಯಸ್ಸು ಕನಿಷ್ಠ 18 ವರ್ಷ ತುಂಬಿರಬೇಕು.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.