ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ
Team Udayavani, Oct 17, 2021, 11:00 PM IST
ಢಾಕಾ : ಕಳೆದ ಬುಧವಾರದಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲಿನ ದಾಳಿ ಪ್ರಕರಣ ಹಾಗೂ ಮೂವರು ಅಲ್ಪಸಂಖ್ಯಾತರ ಹತ್ಯೆಯನ್ನು ಖಂಡಿಸಿ ಹಿಂದೂ ಸಮುದಾಯ ದೇಶವ್ಯಾಪಿ ನಿರಶನ ನಡೆಸಲು ನಿರ್ಧರಿಸಿದೆ.
ಚಿತ್ತಗಾಂಗ್ನ ಬಾಂಗ್ಲಾದೇಶ್ ಹಿಂದೂ ಬುದ್ಧಿಸ್ಟ್ ಕ್ರಿಶ್ಚಿಯನ್ ಯುನಿಟಿ ಕೌನ್ಸಿಲ್ ಅ.23ರಿಂದ ಧರಣಿ ಹಾಗೂ ಉಪವಾಸ ನಡೆಸುವುದಾಗಿ ಘೋಷಿಸಿದೆ. ರಾಜಧಾನಿ ಢಾಕಾದ ಶಾಹ್ಬಾಘ್ ಮತ್ತು ಚಿತ್ತಗಾಂಗ್ನ ಅಂದರ್ಕಿಲ್ಲಾದಲ್ಲಿ ಪ್ರತಿಭಟನೆಗಳು ನಡೆಯಲಿವೆ ಎಂದು ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿ, ವಕೀಲ ರಾಣಾ ದಾಸ್ಗುಪ್ತಾ ಹೇಳಿದ್ದಾರೆ. ಶನಿವಾರವೂ ಈ ಸಂಘಟನೆ 6 ಗಂಟೆಗಳ ಪ್ರತಿಭಟನೆ ನಡೆಸಿದೆ.
ನಾಲ್ವರ ಬಂಧನ :
ದೇಗುಲಗಳ ಮೇಲೆ ದಾಳಿ ಹಾಗೂ ಲೂಟಿ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಒಬ್ಬ ಇಮಾಮ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ, ಢಾಕಾ ಪೊಲೀಸರು ಹಿಂಸಾಚಾರ ಸಂಬಂಧ ಸುಮಾರು 4 ಸಾವಿರಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರವಷ್ಟೇ ಕಾಳಿ ದೇವಾಲಯ ಹಾಗೂ ಇಸ್ಕಾನ್ ದೇಗುಲದ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳ ಗುಂಪು, ಮೂವರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.