![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 17, 2021, 8:15 PM IST
ದಾವಣಗೆರೆ : ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ, ನಾವೆಲ್ಲರೂ ಒಟ್ಟಾಗಿಯೇ ಇದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಂತರ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಸಚಿವ ಸೋಮಣ್ಣ ನನ್ನ ಆತ್ಮೀಯ ಸ್ನೇಹಿತರು. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ. ಬೆಂಗಳೂರಿನ ಶಾಸಕರು ಹೈಕಮಾಂಡ್‌ಗೆ ನನ್ನ ವಿರುದ್ಧ ದೂರು ಕೊಟ್ಟಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಉಪಾಹಾರ ಸೇವಿಸಿದ ತಟ್ಟೆ ಸ್ವತಃ ತೊಳೆದರು!
ದಾವಣಗೆರೆ: ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಾವು ಉಪಾಹಾರ ಸೇವಿಸಿದ ತಟ್ಟೆಯನ್ನು ಸ್ವತಃ ತೊಳೆಯುವ ಮೂಲಕ ಗಮನ ಸೆಳೆದಿದ್ದಾರೆ. ಭಾನುವಾರ ಬೆಳಗ್ಗೆ ಗ್ರಾಮದ ದಲಿತ ಕೇರಿಯ ಶಾಂತರಾಜು ಹಾಗೂ ಶಾರದಮ್ಮ ಎಂಬುವವರ ಮನೆಯಲ್ಲಿ ಕುಟುಂಬ ಸದಸ್ಯರ ಜತೆ ರಾಗಿ ತಾಲಿಪಟ್ಟು, ತರಕಾರಿ ಉಪ್ಪಿಟ್ಟು, ಜಾಮೂನು, ಕೆಂಪಿಂಡಿ, ಶೇಂಗಾ ಚಟ್ನಿ, ಮೊಳಕೆಕಾಳು ಉಪಾಹಾರ ಸವಿದರು. ನಂತರ ಇಬ್ಬರೂ ತಮ್ಮ ತಟ್ಟೆ ತಾವೇ ತೊಳೆಯುವ ಮೂಲಕ ಸರಳತೆ ಮೆರೆದರು. ತಟ್ಟೆ ತೊಳೆದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ :ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ
You seem to have an Ad Blocker on.
To continue reading, please turn it off or whitelist Udayavani.