ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್ ಶೆಟ್ಟಿ
Team Udayavani, Oct 18, 2021, 12:14 PM IST
ನವಿಮುಂಬಯಿ: ರಕ್ತದಾನ ಶ್ರೇಷ್ಠ ದಾನ. ರಕ್ತದಾನದಿಂದ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಿದೆ. ಈ ದಾನಕ್ಕೆ ಯಾವುದೇ ಜಾತಿ, ಧರ್ಮಗಳ ಭೇದದ ಬಂಧನವಿಲ್ಲ. ಇಲ್ಲಿ ಒಬ್ಬ ವ್ಯಕ್ತಿಯ ಆರೋಗ್ಯ ಕಾಪಾಡುವ, ಜೀವ ಉಳಿಸುವ ಕೆಲಸ ಮಾತ್ರ ಮುಖ್ಯವಾಗಿರುತ್ತದೆ. ಇದೊಂದು ಮಾನವೀಯತೆಯನ್ನು ಸಾರುವ ಪುಣ್ಯದ ಕೆಲಸ ಎಂದು ಬಂಟರ ಸಂಘ ಮುಂಬಯಿ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ ತಿಳಿಸಿದರು.
ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿ ಆಶ್ರಯದಲ್ಲಿ ಥಿಂಕ್ ಫೌಂಡೇಶನ್ ಹಾಗೂ ಎಂಜಿಎಂ ಹಾಸ್ವಿಟಲ್ ಕಾಮೋಟೆ ಇವರ ಸಹಯೋಗದಲ್ಲಿ ಅ. 10ರಂದು ನೆರೂಲ್ ಶ್ರೀ ಶನೀಶ್ವರ ಮಂದಿರದ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬಂಟ್ಸ್ ಹೆಲ್ತ್ ಕೇರ್ ಆಶ್ರಯದಲ್ಲಿ ಇದು ನಾಲ್ಕನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಈಗಾಗಲೇ ಜರಗಿದ ಎಲ್ಲ ಶಿಬಿರಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿವೆ. ಈ ಶಿಬಿರದ ಹಿಂದೆ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಬಹಳಷ್ಟು ಶ್ರಮ ವಹಿಸುತ್ತಿ¨ªಾರೆ. ಅವರ ಬಳಗ ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ತಿಳಿಸಿ ಅಭಿನಂದಿಸಿದರು.
ಡಾ| ಸತ್ಯಪ್ರಕಾಶ್ ಶೆಟ್ಟಿ ಅವರನ್ನು ಬಂಟರ ಸಂಘ ಮುಂಬಯಿ ನವಿ ಮುಂಬಯಿ ಪ್ರಾದೇಶಿಕ ಸಮಿತಿ ವತಿಯಿಂದ ಗಣ್ಯರು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯೊಂದಿಗೆ ಸಮ್ಮಾನಿಸಿ ಅಭಿನಂದಿಸಿದರು.
ನೆರೂಲ್ ಶ್ರೀ ಶನೀಶ್ವರ ಮಂದಿರದ ಧರ್ಮದರ್ಶಿ ರಮೇಶ್ ಎಂ. ಪೂಜಾರಿ ಮಾತನಾಡಿ, ನಮ್ಮ ದೇಹದಲ್ಲಿ ಹರಿಯುವ ರಕ್ತಕ್ಕೆ ಯಾವ ಜಾತಿಯೂ ಇಲ್ಲ. ಮನುಷ್ಯರ ಜೀವನದಲ್ಲಿ ಅಮೂಲ್ಯವಾದ ಈ ರಕ್ತದ ಸಂಗ್ರಹಕ್ಕೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಯಶಸ್ವಿಯಾಗಲಿ, ಅಗತ್ಯವಿರುವವರಿಗೆ ಉಪಯೋಗಕ್ಕೆ ಬರಲಿ ಎಂದು ಶುಭ ಹಾರೈಸಿದರು.
ಬಂಟರ ಸಂಘ ಮುಂಬಯಿ ಇದರ ಪೂರ್ವ ವಲಯದ ಸಮನ್ವಯಕ ಸುಬ್ಬಯ್ಯ ಎ. ಶೆಟ್ಟಿ ಮಾತನಾಡಿ, ಬಂಟ್ಸ್ ಹೆಲ್ತ್ ಕೇರ್ ಇದರ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡಾ| ಸತ್ಯಪ್ರಕಾಶ್ ಶೆಟ್ಟಿ ಅವರು ಅಲ್ಲಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿ ಉತ್ತಮ ಕೆಲಸವನ್ನು ಮಾಡುತ್ತಿ¨ªಾರೆ. ಈಗಾಗಲೇ 560 ಯುನಿಟ್ ರಕ್ತವನ್ನು ಸಂಗ್ರಹಿಸಿರುವುದು ಮಹತ್ತರ ಸಾಧನೆ. ಇವರಿಂದ ಇನ್ನೂ ಹೆಚ್ಚಿನ ಈ ರೀತಿಯ ಕಾರ್ಯ ನಡೆಯಲಿ ಎಂದು ಹಾರೈಸಿದರು.
ರಕ್ತದಾನ ಶಿಬಿರದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಥಿಂಕ್ ಫೌಂಡೇಶನ್‌ನ ವಿನಯ್ ಶೆಟ್ಟಿ ಮಾತನಾಡಿ, ಡಾ| ಸತ್ಯಪ್ರಕಾಶ್ ಶೆಟ್ಟಿ ನೇತೃತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ಆಶ್ರಯದಲ್ಲಿ ರಕ್ತದಾನ ಶಿಬಿರದ ಆಯೋಜನೆಯಂತಹ ಒಳ್ಳೆಯ ಕಾರ್ಯ ನಡೆಯುತ್ತಿದೆ. ಅವರ ಈ ಯೋಜನೆಗೆ ಎಲ್ಲ ಬಂಟ ಸಮುದಾಯದವರಿಂದ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರುವುದು ಅಭಿನಂದ ನಾರ್ಹ ಎಂದು ತಿಳಿಸಿ, ಕಾರ್ಯಕ್ರಮ ವನ್ನು ಆಯೋಜಿಸಿದ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಎಲ್ಲ ಪದಾಧಿಕಾರಿ ಗಳಿಗೆ ಕೃತಜ್ಞತೆ ಸಲ್ಲಿಸಿದರು.
ಬಂಟರ ಸಂಘ ಮುಂಬಯಿ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್. ಕೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಮುಂದಾಳತ್ವ ವಹಿಸಿದ್ದರು.
ಸಮಾರಂಭದಲ್ಲಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಡಿ. ಶೆಟ್ಟಿ, ಭಾಸ್ಕರ್ ಶೆಟ್ಟಿ ತಾಳಿಪಾಡಿಗುತ್ತು, ಪ್ರಾದೇಶಿಕ ಸಮಿತಿಯ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್ ಅರಿಗ, ಜತೆ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೈಕಾಡಿ ಹೆದ್ದಾರಿ ಮನೆ, ಜತೆ ಕೋಶಾಧಿಕಾರಿ ಭಾಸ್ಕರ್ ಶೆಟ್ಟಿ ಪದ್ಮ, ಸಲಹೆಗಾರರಾದ ದಯಾನಂದ ಶೆಟ್ಟಿ ಶಿಮಂತೂರುಭಾವ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ಸಿ. ಶೆಟ್ಟಿ, ಮಹಿಳಾ ವಿಭಾಗದ ಸಲಹಾ ಸಮಿತಿಯ ಕಾರ್ಯಾಧ್ಯಕ್ಷೆ ರೂಪಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರಾದ ಗುಣವತಿ ವೈ. ಶೆಟ್ಟಿ, ವೀಣಾ ಎ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನವಿಮುಂಬಯಿ ಪ್ರಾದೇಶಿಕ ಸಮಿತಿಯ ವತಿಯಿಂದ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿ ಅವರು ರಕ್ತದಾನಗೈದು ಶಿಬಿರಕ್ಕೆ ಚಾಲನೆ ನೀಡಿದರು. ಸಮನ್ವಯಕರಾದ ಜಗದೀಶ್ ಶೆಟ್ಟಿ ನಂದಿಕೂರು, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಖಾಂದೇಶ್ ಭಾಸ್ಕರ್ ಶೆಟ್ಟಿ, ಉಪಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ, ಕೋಶಾಧಿಕಾರಿ ರವೀಶ್ ಜಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ನಿಶ್ಮಿತಾ ಎಸ್. ಶೆಟ್ಟಿ, ಮಾಜಿ ಕಾರ್ಯಾಧ್ಯಕ್ಷರಾದ ಸಂತೋಷ್ ಡಿ. ಶೆಟ್ಟಿ, ಸಂಜೀವ ಎನ್. ಶೆಟ್ಟಿ, ಸಲಹೆಗಾರರಾದ ಧರ್ಮದರ್ಶಿ ಆಣ್ಣಿ ಸಿ. ಶೆಟ್ಟಿ, ರವಿ ಆರ್. ಶೆಟ್ಟಿ, ದಯಾನಂದ ಶೆಟ್ಟಿ ಶಿಮಂತೂರುಭಾವ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಬಂಟ್ಸ್ ಹೆಲ್ತ… ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಬಾಲೇಶ್ ಅರಿಗ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರೇಣುಕಾ ಭಂಡಾರಿ, ಸಲಹೆಗಾರರಾದ ಸರಿತಾ ಕೆ. ಶೆಟ್ಟಿ, ಅನಿತಾ ಎಸ್. ಶೆಟ್ಟಿ, ಸ್ಮಿತಾ ಎಚ್. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಒಟ್ಟು 175 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ ಅವರು ಬಂಟರ ಸಂಘದ ಎಲ್ಲ ಪದಾಧಿಕಾರಿಗಳನ್ನು ಪರಿಚಯಿಸಿ, ಸ್ವಾಗತಿಸಿ, ಗೌರವಿಸಿದರು. ಪ್ರಾದೇಶಿಕ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ರಕ್ತ ಮನುಷ್ಯನ ಪಾಲಿಗೆ ಅದೆಷ್ಟು ಮುಖ್ಯವಾಗಿದೆ ಎನ್ನುವುದನ್ನು ಎಲ್ಲರೂ ಕೊರೊನಾ ಮಹಾಮಾರಿಯ ಸಮಯದಲ್ಲಿ ಅರ್ಥೈಸಿಕೊಂಡಿದ್ದಾರೆ. ಒಂದು ಯುನಿಟ್ ರಕ್ತ ಓರ್ವ ವ್ಯಕ್ತಿಯ ಪ್ರಾಣವನ್ನು ಉಳಿಸಬಲ್ಲದು. ಅಂತಹ ಒಂದು ಉತ್ತಮ ಕೆಲಸವನ್ನು ಇಂದು ಬಂಟರ ಸಂಘದ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿಯವರು ಮಾಡುತ್ತಿದ್ದಾರೆ. ನಿಜವಾಗಿಯೂ ಇದು ದೇವರು ಮೆಚ್ಚುವ ಕೆಲಸ. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರಿಯವರ ಪರಿಶ್ರಮವನ್ನು ಮೆಚ್ಚಲೇಬೇಕು. ಬಹಳಷ್ಟು ಶ್ರದ್ಧೆಯಿಂದ ಶ್ರಮಿಸುತ್ತಿದ್ದಾರೆ ಎನ್ನುವುದಕ್ಕೆ ಈ ಶಿಬಿರದ ಆಯೋಜನೆಯೇ ನಿದರ್ಶನವಾಗಿದೆ. ಈ ಸಮಿತಿಯಯವರಿಂದ ಹರೀಶ್ ಶೆಟ್ಟಿ ಪಡುಬಿದ್ರೆಯವರ ಮುಂದಾಳತ್ವದಲ್ಲಿ ಇನ್ನಷ್ಟು ಈ ರೀತಿಯ ಸಮಾಜಪರ ಸೇವಾ ಕಾರ್ಯ ನಡೆಯುತ್ತಿರಲಿ.-ಡಾ| ಆರ್. ಕೆ. ಶೆಟ್ಟಿ , ಗೌರವ ಪ್ರಧಾನ ಕಾರ್ಯದರ್ಶಿ, ಬಂಟರ ಸಂಘ ಮುಂಬಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.