ಆನೆಗಳು ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿವೆ
Team Udayavani, Oct 18, 2021, 12:32 PM IST
ಮೈಸೂರು: ಈ ಬಾರಿಯ ದಸರಾ ಮಹೋತ್ಸವ ಯಶ ಸ್ವಿಯಾಗಿ ನೆರವೇರಿದ್ದು, ಆನೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾ ಯಿಸಿವೆ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ಹೇಳಿದರು.
ಅರಮನೆ ಆವರಣದಲ್ಲಿ ಭಾನುವಾರ ನಡೆದ ಗಜಪಡೆ ಬೀಳ್ಕೊಡುಗೆ ಸಮಾರಂಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಆನೆಗಳು ಉತ್ತಮವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿವೆ. ಮಾವುತರು, ಕಾವಾಡಿಗಳಿಗೆ ಅರಮನೆ ಮಂಡಳಿ ವತಿ ಯಿಂದ ತಲಾ 10 ಸಾವಿರ ರೂ. ಗೌರವ ಧನ ನೀಡಲಾಗಿದೆ.
ಈ ಬಾರಿ 3 ಆನೆ ಶಿಬಿರಗಳಿಂದ ಒಟ್ಟು 8 ಆನೆ ಮೈಸೂರಿಗೆ ಬಂದಿದ್ದವು. ವಿಕ್ರಮ ಮತ್ತು ಲಕ್ಷ್ಮೀ ಆನೆ ಹೊರತು ಪಡಿಸಿ ಉಳಿದ 6 ಆನೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಿವೆ ಎಂದರು. ಮೊದಲ ಬಾರಿ ಆಗಮಿಸಿದ್ದ ಅಶ್ವತ್ಥಾಮ ಭರವಸೆ ಮೂಡಿಸಿದ್ದಾನೆ.
ಅಭಿಮನ್ಯು ಸತತ 2ನೇ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಸೈ ಎನಿಸಿಕೊಂಡಿದ್ದಾನೆ. ಕೊರೊನಾ ಹಿನ್ನೆಲೆ ಸರಳ ದಸರಾ ಆಚರಣೆ ಆದರೂ ಜಂಬೂಸವಾರಿ ಮೆರ ವಣಿಗೆ ಅದ್ದೂರಿತನದಿಂದ ಕೂಡಿತ್ತು. ಮುಂದಿನ ಬಾರಿ ಯಾವುದೇ ಅಡತಡೆ ಇಲ್ಲದೇ ಅದ್ದೂರಿ ಯಾಗಿ ದಸರಾ ನಡೆಯುವಂತಾಗಲಿ ಎಂದು ಹೇಳಿದರು.
ಇದನ್ನೂ ಓದಿ;- ಗೊಂಡ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಅಭಿಮನ್ಯು ಆನೆ ಮಾವುತ ವಸಂತ ಮಾತನಾಡಿ, ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದೇ ಅದೃಷ್ಟವಾಗಿದೆ. ಅಭಿಮನ್ಯು ನನಗೆ ಸಿಕ್ಕಿರುವುದು, ನಾನು ಅಭಿಮನ್ಯುವಿಗೆ ಸಿಕ್ಕಿರುವುದು ಪುಣ್ಯ. ದಸರಾ ಮಹೋತ್ಸವದಲ್ಲಿ ಸತತ 2ನೇ ಬಾರಿ ಅಭಿಮನ್ಯುವನ್ನು ಮುನ್ನಡೆಸಿರುವುದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ. ಇದಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತನ್ನ ಜತೆ ಇರುವ ಕಾವಾಡಿಗಳು ಮತ್ತು ಮಾವುತರು ಕಾರಣರಾಗಿದ್ದಾರೆ ಎಂದು ಹೇಳಿದರು. ಮೈಸೂರು ದಸರಾ ನಿರ್ವಿಘ್ನವಾಗಿ ನಡೆದಿದೆ ತಾಯಿ ಚಾಮುಂಡೇಶ್ವರಿ ದಯೆಯಿಂದ ಈ ಬಾರಿಯ ದಸರಾ ನಿರ್ವಿಘ್ನವಾಗಿ ನೆರವೇರಿದೆ.
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಗಜಪಡೆಗೆ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗಿದೆ. ಆನೆಗಳು ಯಾವುದೇ ತೊಂದರೆ ಇಲ್ಲದೇ ಸ್ವಸ್ಥಾನ ಸೇರುವಂತೆ ಪ್ರಾರ್ಥಿಸಲಾಗಿದೆ. ಮುಂದಿನ ದಸರಾ ವೇಳೆಗೆಕೊರೊನಾ ಸಂಪೂರ್ಣವಾಗಿ ತೊಲಗಿ ವೈಭವದಿಂದ ದಸರಾ ನಡೆಯುವಂತಾಗಲಿ ಎಂದು ದೇವರನ್ನು ಬೇಡಿಕೊಳ್ಳಲಾಗಿದೆ ಎಂದು ಅರ್ಚಕ ಪ್ರಹ್ಲಾದ್ ರಾವ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.