ಪ್ರಧಾನಿ ಭಾವಚಿತ್ರ ಸುಡಲು ಯತ್ನ:ಪೊಲೀಸರೊಂದಿಗೆ ತಳ್ಳಾಟ- ನೂಕಾಟ
Team Udayavani, Oct 18, 2021, 2:12 PM IST
ದಾವಣಗೆರೆ: ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದಿರುವ ರೈತರ ಹತ್ಯೆ ಖಂಡಿಸಿ ಸೋಮವಾರ ಎಐಕೆಎಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರ ಪ್ರದರ್ಶನ ಮತ್ತು ಸುಟ್ಟು ಹಾಕಲು ಪೊಲೀಸರು ಅನುಮತಿ ನೀಡದ ವಿಚಾರಕ್ಕಾಗಿ ಪ್ರತಿಭಟನಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ವಾಗ್ವಾದ, ತಳ್ಳಾಟ- ನೂಕಾಟ ನಡೆಯಿತು.
ಜಯದೇವ ವೃತ್ತದಿಂದ ಗಾಂಧಿ ವೃತ್ತದವರೆಗೆ ಮೋದಿ ಹಾಗೂ ಅಮಿತ್ ಶಾ ಭಾವಚಿತ್ರಗಳ ಪ್ರದರ್ಶನ ಮಾಡುವ ಜೊತೆಗೆ ದಹಿಸಲು ಹೋರಾಟಗಾರರು ಮುಂದಾಗುತ್ತಿದ್ದಂತೆ ಪೊಲೀಸರು ತಡೆದರು.ಯಾವುದೇ ಕಾರಣಕ್ಕೂ ಭಾವಚಿತ್ರಗಳನ್ನು ಪ್ರದರ್ಶನ ಮತ್ತು ಸುಡಲು ಅವಕಾಶ ನೀಡುವುದೇ ಇಲ್ಲ ಪೊಲೀಸರು ತಿಳಿಸಿದರು.
ಕುಪಿತಗೊಂಡ ಹೋರಾಟಗಾರರು ನಾವು ಭಾವಚಿತ್ರಗಳ ಪ್ರದರ್ಶನ ಮಾಡುವ ಜೊತೆಗೆ ದಹಿಸಿಯೇ ತೀರುತ್ತೇವೆ ಎಂದು ಪಟ್ಟು ಹಿಡಿದರು. ಪೊಲೀಸರ ತಡೆಯನ್ನೂ ಲೆಕ್ಕಿಸದೆ ಗಾಂಧಿ ವೃತ್ತದತ್ತ ಹೋರಾಟಗಾರರು ಹೊರಟರು. ಪೊಲೀಸರು ಎಲ್ಲರನ್ನೂ ತಡೆದರು. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆಯಿತು.
ಪೊಲೀಸರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಅನೇಕ ಹೋರಾಟದಲ್ಲಿ ಪ್ರಧಾನಿ ಮಂತ್ರಿಗಳು ಒಳಗೊಂಡಂತೆ ಅನೇಕರ ಪ್ರತಿಕೃತಿ, ಭಾವಚಿತ್ರಗಳನ್ನು ಸುಡಲಾಗಿದೆ. ಆದರೆ, ಈಗ ಪೊಲೀಸರು ಭಾವಚಿತ್ರಗಳ ಪ್ರದರ್ಶನಕ್ಕೂ ಅವಕಾಶ ನೀಡದೆ ಹೋರಾಟದ ಹಕ್ಕನ್ನೇ ದಮನ ಮಾಡುತ್ತಿದ್ದಾರೆ. ಅಪ್ರಜಾತಾಂತ್ರಿಕವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಹೋರಾಟಗಾರರಯ ಆಕ್ರೋಶ ವ್ಯಕ್ತಪಡಿಸಿದರು.
ಬಹಳಷ್ಟು ಸಮಯ ಮಾತಿನ ಚಕಮಕಿ ನಡೆಯಿತು. ಹೋರಾಟಗಾರರು ಪೊಲೀಸರಿಗೇ ಭಾವಚಿತ್ರಗಳನ್ನು ಹಸ್ತಾಂತರ ಮಾಡಲು ಮುಂದಾದರು. ಆದರೆ, ಪೊಲೀಸರು ಭಾವಚಿತ್ರಗಳನ್ನು ಪಡೆಯಲು ನಿರಾಕರಿಸಿದರು. ಕೊನೆಗೆ ಭಾವಚಿತ್ರಗಳನ್ನು ಪಡೆದುಕೊಂಡ ಪೊಲೀಸರು ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಸಲು ಅನುಮತಿ ನೀಡಿದರು. ಗಾಂಧಿ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಹರಿಹಾಯ್ದರು. ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.