ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

Team Udayavani, Oct 18, 2021, 2:57 PM IST

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ಕುರುಗೋಡು: ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌… ಇದು ತಾಲೂಕು ಸಮೀಪದ ಯರಿಂಗಳಿಗಿ ಗ್ರಾಮದ ಮೈಲಾರ ಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಣಿಕೋತ್ಸವದ ಕಾರ್ಣಿಕ ನುಡಿ.

ದಸರಾಹಬ್ಬದ ಅಂಗವಾಗಿ ನಡೆದ ಕಾರ್ಣಿಕೋತ್ಸವದಲ್ಲಿ ಏಳು ದಿನಗಳ ಕಾಲ ಉಪವಾಸ ವ್ರತ ಆಚರಿಸಿದ್ದ ನವೀನ್‌ ಬಡಿಗೇರ್‌ ಭವಿಷ್ಯವಾಣಿ ನುಡಿದರು.

ಕಾರಣಿಕ ವಾಣಿ ದೇವರನ್ನು ನಂಬಿ ಬಿತ್ತಿದ ಬೆಳೆಯ ರಕ್ಷಣೆಯಾಗುತ್ತದೆ ಎಂಬ ಅರ್ಥ ನೀಡುತ್ತದೆ ಎಂದು ಜನ ವಿಶ್ಲೇಷಿಸಿದ್ದಾರೆ.

ಯರಿಂಗಳಿಗಿ ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಜನ ಕಾರ್ಣಿಕೋತ್ಸವಕ್ಕೆ ಸಾಕ್ಷಿಯಾದರು. ಇದಲ್ಲದೇ ದೇವಸ್ಥಾನದಲ್ಲಿ ಸರಪಳಿ ಸೇವೆ ಜರುಗಿತು. ನವೀನ್‌ ಬಡಿಗೇರ್‌, ವಿಠ್ಠೋಬಪ್ಪ, ಕಾರ್ತಿಕ್‌ ಮತ್ತು ರಾಜು ಸ್ವಾಮಿ ಇವರು ಕಬ್ಬಿಣದ ಸರಪಳಿ ಎಳೆದು ತುಂಡುಮಾಡುವ ಮೂಲಕ ನೆರೆದ ಜನರನ್ನು ಮೂಕವಿಸ್ಮಿತರನ್ನಾಗಿ ಮಾಡಿದರು.

ಬಳ್ಳಾರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಳಪ್ಪ ಆಚಾರಿ ಎನ್ನುವವರು ಮೊದಲು ಸರಪಳಿ ಪವಾಡ ಮತ್ತು ಕಾರ್ಣಿಕ ನುಡಿಯುತ್ತಿದ್ದರು. ಅವರು ಲಿಂಗೈಕ್ಯರಾದ ನಂತರ ಕಳೆದ ಮೂರು ವರ್ಷಗಳಿಂದ ಅವರ ಮಗ ನವೀನ್‌ ಬಡಿಗೇರ್‌ ಕಾರ್ಣಿಕ ನುಡಿಯುತ್ತಿದ್ದಾರೆ.

ಕಾರ್ಣಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಮೈಲಾರ ಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ಹೂ, ಹಣ್ಣು, ಕಾಯಿ ಸಮರ್ಪಿಸಿದರು.

ಕಾರ್ಣಿಕೋತ್ಸವದ ಅಂಗವಾಗಿ ಬಿಲ್ಲು ಮೆರವಣಿಗೆ ಮತ್ತು ಗಂಗಿಸ್ಥಳ ಪೂಜೆ ಮತ್ತು ಪಲ್ಲಕ್ಕಿ ಉತ್ಸವ ನಡೆಯಿತು.

ಟಾಪ್ ನ್ಯೂಸ್

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.