ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 1,800 ರೂ. ಬಾಡಿಗೆ ನಿಗದಿ
Team Udayavani, Oct 19, 2021, 5:20 AM IST
ಉಡುಪಿ: ಕರಾವಳಿಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಸನ್ನಿಹಿತವಾಗಿದ್ದು, ಹೊರಜಿಲ್ಲೆ, ರಾಜ್ಯಗಳಿಂದ ಕಂಬೈನ್ಡ್ ಹಾರ್ವೆಸ್ಟರ್‌ಗಳು ಆಗಮಿಸುತ್ತಿವೆ.
ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆ ಯಿದ್ದು, ಕಟಾವಿನ ಅವಧಿಯಲ್ಲಿ ಮಳೆಯೂ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಯಂತ್ರಗಳನ್ನು ಅವಲಂಬಿಸಿದ್ದಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರ ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಇರುವ ಜಿಲ್ಲಾ ಸಮಿತಿಯು ಯಂತ್ರ ಬಳಕೆಗೆ ಪ್ರತಿ ಗಂಟೆಗೆ 1,800 ರೂ. ಬಾಡಿಗೆ ದರವನ್ನು ನಿಗದಿಪಡಿಸಿದೆ.
ನ್ಯಾಯೋಚಿತ ದರ
ಸರಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ದ.ಕ. ಜಿಲ್ಲೆಯಲ್ಲಿ ಸುಮಾರು 15, ಉಡುಪಿಯಲ್ಲಿ ಕೇವಲ 8 ಕಟಾವು ಯಂತ್ರಗಳಷ್ಟೇ ಲಭ್ಯವಿದ್ದು, ಬೇಡಿಕೆ ಪೂರೈಸಲು ಖಾಸಗಿಯಾಗಿ ಬರುವಕಟಾವು ಯಂತ್ರಗಳು ಅನಿವಾರ್ಯವಾಗಿವೆ. ಆದ್ದರಿಂದ ಕೃಷಿ ಯಂತ್ರಧಾರೆ ಕೇಂದ್ರದ ಬಾಡಿಗೆ ದರವನ್ನು ಮಾನದಂಡವಾಗಿಟ್ಟುಕೊಂಡು ರೈತರೊಂದಿಗೆ ಕಟಾವು ದರದ ಬಗ್ಗೆ ಸ್ಥಳೀಯವಾಗಿ ಚರ್ಚಿಸಿ, ನ್ಯಾಯೋಚಿತ ದರದಲ್ಲಿ ರೈತರಿಗೆ ಹೆಚ್ಚಿನ ಹೊರೆಯಾಗದ ಧಾರಣೆಯನ್ನು ನಿಗದಿಪಡಿಸಿಕೊಂಡು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಭತ್ತದ ಕಟಾವು ಕಾರ್ಯವನ್ನುಜಿಲ್ಲೆಯಲ್ಲಿ ಕೈಗೊಳ್ಳುವಂತೆ ಖಾಸಗಿಯಂತ್ರ ಮಾಲಕರು ಹಾಗೂ ರೈತರಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ
ಭಾರೀ ಮಳೆ: ಫಸಲು ನಷ್ಟ ಭೀತಿ
ಜಿಲ್ಲೆಯ ಯಂತ್ರಗಳಲ್ಲದೆ ಹೊರಜಿಲ್ಲೆ, ರಾಜ್ಯ ಗಳಿಂದ ಉಡುಪಿ, ದ.ಕ. ಜಿಲ್ಲೆಗೆ ಭತ್ತ ಕಟಾವು ಯಂತ್ರಗಳು ಆಗಮಿಸುತ್ತಿವೆ. ಈ ನಡುವೆ ಮಳೆ ಬಿರುಸು ಪಡೆದುಕೊಂಡಿದ್ದು, ಬಿಡುವು ಪಡೆದುಕೊಂಡ ಬಳಿಕ ಕಟಾವು ಪ್ರಕ್ರಿಯೆ ಆರಂಭಗೊಳ್ಳಲಿದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ತೆನೆಭರಿತ ಪೈರು ವಾಲಿಕೊಂಡಿವೆ. ಮಳೆ ಬಿಡುವು ನೀಡಿದ ರಷ್ಟೇ ಕಟಾವು ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯಲಿದೆ. ಮಳೆ ಮುಂದುವರಿದರೆ ಫಸಲು ನಷ್ಟವಾಗುವ ಭೀತಿ ಕೃಷಿಕರನ್ನು ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.