ಕಬ್ಬಿನ ಬಾಕಿ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Oct 19, 2021, 11:14 AM IST
ಆಳಂದ: ತಾಲೂಕಿನ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಗೆ ಕಳೆದ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ರೈತರ ಪ್ರತಿಟನ್ 200 ರೂ. ಬಾಕಿ ಬಿಲ್ ಪಾವತಿ ಹಾಗೂ ಹಂಗಾಮಿನ ಕಬ್ಬು ನುರಿಸಲು ವಾರದಲ್ಲಿ ಬೆಲೆ ನಿಗದಿ ಪಡಿಸದೆ ಹೋದಲ್ಲಿ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಜಯ ಕರ್ನಾಟಕ ತಾಲೂಕು ಘಟಕದ ಕಾರ್ಯಕರ್ತರು ಎಚ್ಚರಿಸಿದರು.
ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ಕೈಗೊಂಡ ಕಾರ್ಯಕರ್ತರು, ತಹಶೀಲ್ದಾರ್ ಕಚೇರಿಗೆ ತೆರಳಿ ಶವದ ಪ್ರತಿಕೃತಿ ದಹಿಸಿ, ಉಪ ತಹಶೀಲ್ದಾರ್ ಮನೋಜ ಲಾಡೆ ಅವರಿಗೆ ಮನವಿ ಸಲ್ಲಿಸಿದರು. 2020-21ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 2300 ರೂ. ನೀಡಿವೆ. ಆದರೆ ಸ್ಥಳೀಯ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ 2100 ರೂ. ನೀಡಿದೆ. ಇನ್ನುಳಿದ 200 ರೂ.ಗಳನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಕೈಗೊಳ್ಳಬೇಕು ಎಂದು ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಒತ್ತಾಯಿಸಿದರು.
ಕಬ್ಬು ಬೆಳೆಗಾರರು ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಪರಿಸ್ಥಿತಿಯಲ್ಲಿ ಕಾರ್ಖಾನೆಯಿಂದ ರೈತರಿಗೆ ಬರಬೇಕಾದ 200 ರೂ. ಬಾಕಿ ಬಿಲ್ ಕೂಡಲೇ ಪಾವತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶರಣು ಪಾಟೀಲ ಕೊಡಲಹಂಗರಗಾ, ಅಮಿತ್ ಪಾಟೀಲ, ಅಮರ ಕಾಂದೆ, ಪ್ರಕಾಶ ಬೀದಿ, ದೇವೀಂದ್ರಪ್ಪ ಖೇಡ, ಸಚಿನ್ ಕೊಗನೂರ, ಮಲ್ಲಿನಾಥ ವಡಗೇರಿ, ಬಸವರಾಜ ಕುಂಬಾರ, ರಾಹುಲ ಮೂಲಗೆ, ಮಹೇಶ ವಾರದ, ನಾಗೇಶ ವಡೆಯರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.