ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ
Team Udayavani, Oct 19, 2021, 3:14 PM IST
ಹುಣಸೂರು: ಹುಣಸೂರು ನಗರಸಭೆಯ ನೂತನ ಅಧ್ಯಕ್ಷೆ ಸೌರಭಸಿದ್ದರಾಜು ಶಾಸಕ ಎಚ್.ಪಿ.ಮಂಜುನಾಥ್ ಹಾಗೂ ಸದಸ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ನಗರಸಭೆ ಅಧ್ಯಕ್ಷರ ಕೊಠಡಿಯಲ್ಲಿ ಗಾಂಧೀಜೀ, ಅಂಬೇಡ್ಕರ್, ಬಾಬುಜಗಜೀವನರಾಂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಅಧಿಕಾರ ಸ್ವೀಕರಿಸಿದರು. ಶಾಸಕ ಎಚ್.ಪಿ.ಮಂಜುನಾಥರು ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ನಗರದ ಅಭಿವೃದ್ದಿಗೆ ಮುಂದಾಗಿ, ನಗರಸಭೆ ಅಧಿಕಾರಿ-ಸಿಬ್ಬಂದಿಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾರ್ವಜನಿಕರು, ಬಡವರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿರೆಂದು ಅಧ್ಯಕ್ಷರಿಗೆ ಸಲಹೆ ನೀಡಿದರು.
ಶಾಸಕರ ನಿರ್ಧೇನದಂತೆ ಪಕ್ಷಾತೀತವಾಗಿ ಎಲ್ಲಾ ಸದಸ್ಯರು-ಅಧಿಕಾರಿಗಳ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವೆ. ಮುಖ್ಯವಾಗಿ ಸಮರ್ಪಕ ಕುಡಿಯುವ ನೀರು-ಬೀದಿ ದೀಪ ನಿರ್ವಹಣೆಗೆ ಆದ್ಯತೆ ನೀಡುವೆನೆಂದರು.
ಪೌರ ಕಾರ್ಮಿಕರಿಗೆ ಸನ್ಮಾನ:
ಇದೇ ವೇಳೆ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಪೌರಕಾರ್ಮಿಕ ಮುರುಗೇಶ, ವಾಟರ್ ಮೆನ್ ಗೌರಿಶಂಕರ್, ಅಟೆಂಡರ್ ಚನ್ನಪ್ಪರನ್ನು ಶಾಸಕರು-ಅಧ್ಯಕ್ಷರು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಉಪಾಧ್ಯಕ್ಷ ದೇವನಾಯ್ಕ, ಸದಸ್ಯರು ಹಾಗೂ ಪೌರಾಯುಕ್ತ ರಮೇಶ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.