ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  


Team Udayavani, Oct 19, 2021, 8:57 PM IST

fhfcghftyt

ಕೊಪ್ಪಳ: ನಗರದ ಜಿಲ್ಲಾ ಜಿಲ್ಲಾಸ್ಪತ್ರೆಯಲ್ಲಿ ಎರಡು ಆಂಬ್ಯುಲೆನ್ಸ್‌ಗಳಿವೆ. ಆದರೆ ಅವುಗಳನ್ನು 15 ದಿನಗಳಿಂದಲೂ ದುರಸ್ತಿ ಮಾಡಿಸಿಯೇ ಇಲ್ಲ. ಇದರಿಂದ ಆಸ್ಪತ್ರೆಯ ರೋಗಿಗಳನ್ನು ತುರ್ತು ಚಿಕಿತ್ಸೆಗಾಗಿ ಅನ್ಯ ಊರುಗಳಿಗೆ ಸ್ಥಳಾಂತರಿಸಲು ವಾಹನದ ವ್ಯವಸ್ಥೆ ಇಲ್ಲದಂತಾಗಿದೆ. ಇದರಿಂದ ಬಡವರಿಗೆ ಆರ್ಥಿಕ ಹೊರೆಯಾಗುತ್ತಿದೆ.

ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಎರಡು ಸರ್ಕಾರಿ ಆಂಬ್ಯುಲೆನ್ಸ್‌ಗಳಿವೆ. ದಿನದ 24 ಗಂಟೆಯೂ ಅವು ಸೇವೆಗೆ ಸಿದ್ಧವಾಗಿರಬೇಕು. ಕೆಲ ವರ್ಷಗಳಿಂದ ಅವುಗಳು ಜನರಿಗೆ ಸೇವೆ ಕೊಟ್ಟಿವೆ. ಆದರೆ ಕಳೆದ ಕೆಲ ದಿನಗಳಿಂದ ವಾಹನಗಳನ್ನು ರಿಪೇರಿ ಮಾಡಿಸದ ಕಾರಣ ಅವುಗಳು ಆಸ್ಪತ್ರೆ ಮೂಲೆ ಸೇರುವಂತಾಗಿವೆ. ಆಂಬ್ಯುಲೆನ್ಸ್‌ಗೆ ಆಯಿಲ್‌ ಸರ್ವಿಸ್‌, ಟೈಯರ್‌ ರಿಪ್ಲೇಸ್‌, ಮಷಿನ್‌ ಚೆಕಪ್‌ ಸೇರಿದಂತೆ ಕೆಲವು ಸಣ್ಣಪುಟ್ಟ ರಿಪೇರಿಗಳನ್ನು ಮಾಡಿಸಬೇಕಿದೆ. ಆದರೆ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರು, ಮೆಡಿಕಲ್‌ ಕಾಲೇಜು ನಿರ್ದೇಶಕರು ಈ ಬಗ್ಗೆ ಕಾಳಜಿಯನ್ನೇ ವಹಿಸಿಲ್ಲ. ಅವುಗಳನ್ನು ಇಲ್ಲಿವರೆಗೂ ರಿಪೇರಿ ಮಾಡಿಸಿಯೇ ಇಲ್ಲ. ದುರಸ್ಥಿಗಾಗಿ ಇನ್ನೂ ಪತ್ರ ವ್ಯವಹಾರಗಳೇ ನಡೆಯುತ್ತಿವೆ.

ಜಿಲ್ಲಾಸ್ಪತ್ರೆಯ ವೈದ್ಯರು ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಹುಬ್ಬಳ್ಳಿ, ಗದಗ ಹಾಗೂ ಧಾರವಾಡಕ್ಕೆ ಶಿಫಾರಸ್ಸು ಮಾಡುವುದೇ ಹೆಚ್ಚಾಗಿದೆ. ಇಲ್ಲಿನ ರೋಗಿಗಳಿಗೆ ಸಣ್ಣ ಸಮಸ್ಯೆಯಿದ್ದರೂ ಹುಬ್ಬಳ್ಳಿ ಕಿಮ್ಸ್‌, ಇಲ್ಲವೇ ಧಾರವಾಡದ ಎಸ್‌ ಡಿಎಂಗೆ ಶಿಫಾರಸು ಮಾಡುವುದೇ ಹೆಚ್ಚಾಗಿದೆ. ಈ ವೇಳೆಗೆ ರೋಗಿಗಳಿಗೆ ಸರ್ಕಾರಿ ಸೇವೆಯಲ್ಲಿರುವ ಆಂಬ್ಯುಲೆನ್ಸ್‌ ಆಸರೆಯಾಗುತ್ತದೆ. ಡಿಸೇಲ್‌ ವೆಚ್ಚವನ್ನು ರೋಗಿಗಳು ಭರಿಸಿದರೆ ಯಾವುದೇ ಆಸ್ಪತ್ರೆಗೂ ಸರ್ಕಾರಿ ಆಂಬ್ಯುಲೆನ್ಸ್‌ಗಳು ರೋಗಿಗಳನ್ನು ಕರೆದೊಯ್ಯಲಿವೆ. ಅದೇ ರೋಗಿಗಳು ಖಾಸಗಿ ವಾಹನ ಅಥವಾ ಖಾಸಗಿ ಆಂಬ್ಯುಲೆನ್ಸ್‌ ಮೊರೆ ಹೋದರೆ ಆರ್ಥಿಕ ಹೊರೆಯಾಗಲಿದೆ. ಇಲ್ಲಿನ ಸರ್ಕಾರಿ ಆಂಬ್ಯುಲೆನ್ಸ್‌ ದುರಸ್ಥಿಯಲ್ಲಿರುವುದರಿಂದ ಅನ್ಯಕಡೆ ತೆರಳುವ ರೋಗಿಗಳು ತುಂಬ ತೊಂದರೆ ಎದುರಿಸುವಂತಾಗಿದೆ.

ತುರ್ತು ಚಿಕಿತ್ಸೆಗೆ ಆಂಬ್ಯುಲೆನ್ಸ್‌ ಇಲ್ಲ: ಆಂಬ್ಯುಲೆನ್ಸ್‌ಗಳ ದುರಸ್ತಿ ಕುರಿತು ಜಿಲ್ಲಾಸ್ಪತ್ರೆಯ ಮುಖ್ಯಸ್ಥರಿಗೂ ಗೊತ್ತಿದೆ. ಕೊಪ್ಪಳ ಮೆಡಿಕಲ್‌ ಕಾಲೇಜು ನಿರ್ದೇಶಕರಿಗೂ ಗೊತ್ತಿದೆ. ಆದರೆ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕರು ನಾವು ಕಿಮ್ಸ್‌ ನಿರ್ದೇಶಕರಿಗೆ ಪತ್ರ ಬರೆದಿದ್ದೇವೆ. ಅಲ್ಲಿಂದ ಅನುದಾನ ಬಂದಾಗ ದುರಸ್ತಿ ಮಾಡಿಸುತ್ತೇವೆ ಎನ್ನುವ ಉತ್ತರ ನೀಡುತ್ತಿದ್ದಾರೆ. ಕಿಮ್ಸ್‌ನಿಂದಲೂ ಇದಕ್ಕೆ ಯಾವುದೇ ಸ್ಪಂದನೆ ದೊರೆತಿಲ್ಲ. ದಿನದ 24 ಗಂಟೆಯೂ ಯಾವುದೇ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ ಜಿಲ್ಲಾಸ್ಪತ್ರೆಯಲ್ಲಿ ಸಿದ್ಧವಾಗಿರಬೇಕು. ಆದರೆ ಯಾವುದೇ ಆಂಬ್ಯುಲೆನ್ಸ್‌ ಇಲ್ಲದೇ ಇರುವುದು ನಿಜಕ್ಕೂ ಬೇಸರದ ಸಂಗತಿ. ಜಿಲ್ಲಾಸ್ಪತ್ರೆಗೆ ಪ್ರತಿನಿತ್ಯ 1000-1500 ರೋಗಿಗಳು ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವೇಳೆ ಕನಿಷ್ಟ 10 ಆಂಬ್ಯುಲೆನ್ಸ್ ಗಳಿದ್ದರೂ ಕಡಿಮೆಯೇ. ಇಷ್ಟೆಲ್ಲ ಗೊತ್ತಿದ್ದರೂ ವಾಹನದ ವ್ಯವಸ್ಥೆ ಸುಸಜ್ಜಿತವಾಗಿಟ್ಟುಕೊಳ್ಳಬೇಕು ಎನ್ನುವ ಕಾಳಜಿ ಇಲ್ಲದಿರುವುದು ನಿಜಕ್ಕೂ ಬೇಸರದ ಸಂಗತಿ. ಖಾಸಗಿ ಆಂಬ್ಯುಲೆನ್ಸ್‌ ಲಾಭಿಯೇ? : ಜಿಲ್ಲಾಸ್ಪತ್ರೆಯ ಮುಂಭಾಗ ಹಾಗೂ ಒಳಾಂಗಣ ಆವರಣದಲ್ಲಿ ನಿತ್ಯವೂ ಖಾಸಗಿ ಆಂಬ್ಯುಲೆನ್ಸ್‌ಗಳೇ ಹೆಚ್ಚಾಗಿ ಕಂಡು ಬರುತ್ತಿವೆ. ಇಂತಹ ಖಾಸಗಿ ಆಂಬ್ಯುಲೆನ್ಸ್‌ ಲಾಬಿಗೆ ಜಿಲ್ಲಾಸ್ಪತ್ರೆ ಮಣಿದಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಬಡವರಿಗೆ ಸಕಾಲಕ್ಕೆ ಸೇವೆ ಕೊಡಬೇಕಾದ ಜಿಲ್ಲಾಸ್ಪತ್ರೆಯ ಮುಖ್ಯಸ್ಥರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸಿ ದುರಸ್ತಿ ಮಾಡಿಸದೇ ಇರುವುದು ರೋಗಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.