ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ಪಿಂಚಣಿಗಾಗಿ ಸಂಘದ ನೇತೃತ್ವದಲ್ಲಿ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸುವುದು

Team Udayavani, Oct 19, 2021, 4:54 PM IST

ಪಿಂಚಣಿ ನೌಕರರ ಮೂಲಭೂತ ಹಕ್ಕು: ಹನುಮಂತಪ್ಪ

ದಾವಣಗೆರೆ: ನೌಕರರ ಮೂಲಭೂತ ಹಕ್ಕಾಗಿರುವಂತಹ ಪಿಂಚಣಿಯನ್ನು ನೀಡಲೇಬೇಕು ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಜಿ. ಹನುಮಂತಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಸೋಮವಾರ ಜಿಲ್ಲಾ ಗುರುಭವನದಲ್ಲಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಏರ್ಪಡಿಸಿದ್ದ ಪಿಂಚಣಿ ಹೋರಾಟದ ಕುರಿತು ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಪಿಂಚಣಿ ಎಲ್ಲ ನೌಕರರ ಮೂಲಭೂತ ಹಕ್ಕು. ಸರ್ಕಾರ ನೌಕರರ ಮುಂದಿನ ಜೀವನ ಭವಿಷ್ಯದ ದೃಷ್ಟಿಯಿಂದ ಪಿಂಚಣಿ ನೀಡಬೇಕು ಎಂದರು.

ಪಿಂಚಣಿ ವ್ಯವಸ್ಥೆ ಜಾರಿಗಾಗಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ನಿರಂತರವಾಗಿ ಮನವಿ ಸಲ್ಲಿಕೆ, ವಿವಿಧ ಹಂತದ ಹೋರಾಟ ನಡೆಸಲಾಗುತ್ತಿದೆ. ಆದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿಲ್ಲ. ಸರ್ಕಾರ ಶೀಘ್ರವೇ ಪಿಂಚಣಿ ವ್ಯವಸ್ಥೆ ಮಾಡಬೇಕು. ಪಿಂಚಣಿ ನೀಡುವುದರಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆ ಮತ್ತು ಕಾನೂನು ತೊಡಕು ಆಗುವುದೇ ಇಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ ವೇತನ ನೀಡುತ್ತಿರುವ ಸರ್ಕಾರ ನೌಕರರಿಗೆ ಪಿಂಚಣಿ ಸಹ ಕೊಡಬೇಕು. ಪಿಂಚಣಿಗಾಗಿ ಅನುದಾನ ರಹಿತ ಅವಧಿಯ ಸೇವೆಯನ್ನೂ ಪರಿಗಣಿಸಬೇಕು ಎಂದರು.

ಸಂಘದ ಕಾರ್ಯದರ್ಶಿ ಮುತ್ತುರಾಜ್‌ ಮತ್ತಿಕೊಪ್ಪ ಮಾತನಾಡಿ, ನಿವೃ ತ್ತಿಯ ನಂತರ ಪಿಂಚಣಿ ಇಲ್ಲದೇ ಹೋದರೆ ನೌಕರರು ಜೀವನ ನಡೆಸುವುದೇ ಬಹಳ ಕಷ್ಟವಾಗುತ್ತದೆ. ಇಂದಿನ ಬೆಲೆ ಏರಿಕೆ ದಿನಮಾನಗಳಲ್ಲಿ ಇನ್ನೂ ಸಮಸ್ಯೆ ಆಗಲಿದೆ. ಈಗಾಗಲೇ ನಿವೃತ್ತರಾದಂತಹವರು ಪಿಂಚಣಿ ಇಲ್ಲದೆ ಅನುಭವಿಸುತ್ತಿರುವ ಸಮಸ್ಯೆ, ನೋವು ನಮ್ಮ ಕಣ್ಣ ಮುಂದೆಯೇ ಇವೆ. ನಾವು ಸಹ ಅವರಂತೆ ಆಗಬಾರದು. ಪಿಂಚಣಿ ಸೌಲಭ್ಯವಿಲ್ಲದೆ ತೊಂದರೆಗೆ ಒಳಗಾಗುವುದನ್ನ ತಪ್ಪಿಸಲು ಸರ್ಕಾರ ಪಿಂಚಣಿ ವ್ಯವಸ್ಥೆ ಮಾಡಬೇಕು ಎನ್ನುವುದು ಎಲ್ಲ ನೌಕರರ ಒತ್ತಾಯ ಎಂದು ತಿಳಿಸಿದರು.

ಪಿಂಚಣಿಗಾಗಿ ಸಂಘದ ನೇತೃತ್ವದಲ್ಲಿ ನಿರಂತರವಾಗಿ ಸಂಬಂಧಪಟ್ಟವರಿಗೆ ಮನವಿಗಳನ್ನು ಸಲ್ಲಿಸುವುದು, ಪತ್ರ ಚಳವಳಿ, ಸತ್ಯಾಗ್ರಹ, ಹತ್ತಾರು ಸಭೆಗಳು ಆಗಿವೆ. ಆದರೂ ಕಲ್ಲು ಹೃದಯದ ಜನಪ್ರತಿನಿಧಿ ಗಳು ಮತ್ತು ಅಧಿ ಕಾರಿಗಳು ಸ್ಪಂದಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಿಂಚಣಿಗಾಗಿ ಇರುವಂತಹ ಸಮಸ್ಯೆ ಏನು ಎಂಬುದು ತಿಳಿದಿದೆ, ಪರಿಹಾರದ ಮಾರ್ಗ ಹುಡುಕಬೇಕಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೋರಾಟವನ್ನ ಬೆಳೆಸಬೇಕಿದೆ, ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕಿದೆ. ಹಾಗಾಗಿ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಾಲಮಂಗಲ ನಾಗರಾಜ್‌ ಮಾತನಾಡಿ, ಪಿಂಚಣಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕಾದರೆ ನೌಕರರು ಸಂಘಟಿತ ಹೋರಾಟ ಮಾಡಬೇಕು. ಸಾವಿರಾರು ಸಂಖ್ಯೆಯಲ್ಲಿ ಸೇರುವ ಮೂಲಕ ಸಂಘಟನೆಯ ಶಕ್ತಿಯನ್ನು ಪ್ರದರ್ಶಿಸಬೇಕು ಎಂದ ದರು. ಸಂಘದ ಮುಖಂಡರಾದ ಅರುಣ್‌ ಕುಮಾರ್‌, ಮಂಜಾ ನಾಯ್ಕ, ಕೆ. ಈಶಾ ನಾಯ್ಕ, ಎಸ್‌.ಎಂ. ಮಡಿವಾಳರ, ಎಸ್‌.ಎಚ್‌. ಮಲ್ಲಮ್ಮ, ಕೆ.ಸಿ. ಶ್ರೀನಿವಾಸ ಮೂರ್ತಿ, ಆರ್‌. ನಾಗೇಂದ್ರಪ್ಪ, ಸೌಭಾಗ್ಯ ಇತರರು ಇದ್ದರು.

ಟಾಪ್ ನ್ಯೂಸ್

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.