ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ
Team Udayavani, Oct 20, 2021, 4:33 PM IST
ಶಿರ್ವ: ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪುರಾತತ್ವ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶಾಸನವನ್ನು ಪತ್ತೆ ಹಚ್ಚಿದ್ದಾರೆ ಎಂದು ಕಾಲೇಜಿನ ಪುರಾತತ್ವ ವಿಭಾಗದ ಮುಖ್ಯಸ್ಥ ಪ್ರೊ|ಟಿ.ಮುರುಗೇಶಿ ತಿಳಿಸಿದ್ದಾರೆ.
ಕಾರ್ತಿಕ್, ಗೌತಮ್, ಶ್ರೇಯಸ್‌ಅವರು ಶಾಸನವನ್ನು ಪತ್ತೆಹಚ್ಚಿದ್ದು, ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನ 8 ಸಾಲಿನಲ್ಲಿ ಬರೆಯಲ್ಪಟ್ಟಿದೆ. ದೀರ್ಘ ಲಿಂಗಾಕೃತಿಯ ಕಲ್ಲಿನ ಒಂದು ಪಾರ್ಶ್ವದ ಮೇಲೆ, ವೃತ್ತಾಕಾರದ ಸೂರ್ಯ, ಅದರ ಕೆಳಭಾಗದಲ್ಲಿ ಅರ್ಧ ಚಂದ್ರಾಕೃತಿಯನ್ನು ಕೊರೆಯಲಾಗಿದೆ. ಈ ಚಿತ್ರಗಳ ಕೆಳಭಾಗದಲ್ಲಿ ದೊಡ್ಡ ದೊಡ್ಡ ಅಕ್ಷರಗಳ ಬರವಣಿಗೆಯಿದ್ದು, ಈ ಕಲ್ಲು ಸುಮಾರು 167 ಸೆ.ಮೀ. ಎತ್ತರವಿದೆ.
ಇದನ್ನೂ ಓದಿ: ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ
1905 ರಲ್ಲಿ ಮರಣ ಹೊಂದಿದ ಬೆಯ ಅಂಕಯ್ಯ ಶೆಟ್ರ ಮರಣ ದಾಖಲೆಯಿದಾಗಿದ್ದು, ನಂದಳಿಕೆ ಗ್ರಾಮದ ಗೋಳಿಕಟ್ಟೆಯಲ್ಲಿ ಬೆಯ ಮನೆತನದ ಮನೆಯಿದೆ. ಸುಮಾರು 116 ವರ್ಷಗಳ ಹಿಂದೆ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ಟಿ ಆ ಕಾಲದ ಪ್ರಸಿದ್ಧ ವ್ಯಕ್ತಿಯಾಗಿದ್ದಿರಬೇಕು. ಆ ವ್ಯಕ್ತಿಯ ಮರಣಾ ನಂತರ ಅವರ ಅಂತ್ಯ ಸಂಸ್ಕಾರದ ಜಾಗದಲ್ಲಿ ಈ ವಿಶಿಷ್ಠವಾದ ಕಲ್ಲನ್ನು ನಿಲ್ಲಿಸಲಾಗಿದೆ.
20ನೇ ಶತಮಾನದ ಆದಿ ಭಾಗದಲ್ಲೂ ಶಾಸನಗಳನ್ನು ಬರೆಸುವ ಪದ್ಧತಿ ಕರಾವಳಿಯಲ್ಲಿ ಜೀವಂತವಾಗಿತ್ತು ಎನ್ನುವುದಕ್ಕೆ ಈ ಶಾಸನ ಉತ್ತಮ ಉದಾಹರಣೆಯಾಗಿದೆ ಎಂದು ಪ್ರೊ| ಮುರಗೇಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.