ಭೂ ಅಕ್ರಮ ಸ್ವಾಧೀನ ವಿರುದ್ಧ ಉಪವಾಸ ಸತ್ಯಾಗ್ರಹ: ಶಿವಾನಂದ
Team Udayavani, Oct 20, 2021, 6:14 PM IST
ಸಾಗರ: ತಾಲೂಕಿನ ಬಳಸಗೋಡು ಸರ್ವೇ ನಂ.36ರಲ್ಲಿ 3.20 ಎಕರೆ ಜಾಗವನ್ನು ಅಕ್ರಮವಾಗಿ ಸ್ವಾ ಧೀನಪಡಿಸಿಕೊಂಡಿದ್ದಾರೆಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಮೊದಲಾದ ಜನಪರ ಸಂಘಟನೆಗಳ ಆಶ್ರಯದಲ್ಲಿ ಅ. 21ರಂದು ಬೆಳಗ್ಗೆ 11 ಗಂಟೆಯಿಂದ ಉಪವಿಭಾಗಾ ಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಬಳಸಗೋಡು ಅವರು ಹಿಂದೆ ಜಾಗ ಒತ್ತುವರಿ ಬಗ್ಗೆ ಉಪವಿಭಾಗಾಧಿ ಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಜಿಲ್ಲಾ ಧಿಕಾರಿಗಳ ಆದೇಶದಂತೆ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಮತ್ತೆ ಒತ್ತುವರಿ ಮಾಡಿ ರಾತ್ರೋರಾತ್ರಿ ಮನೆ ಕಟ್ಟಲಾಗಿದೆ. ಇದಕ್ಕೆ ಕೆಲವು ಅಧಿ ಕಾರಿಗಳು ಬೆಂಬಲ ನೀಡುತ್ತಿದ್ದು, ತಕ್ಷಣ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವ ಧಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.
ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಬಳಸಗೋಡು ಮಾತನಾಡಿ, ಕೆಲವರು ಈ ಅಕ್ರಮ ಒತ್ತುವರಿಯ ಹಿಂದೆ ಇದ್ದಾರೆ. ಈ ಜಾಗವು ಕೋಟ್ಯಂತರ ರೂಪಾಯಿ ಬೆಲೆ ಬಾಳುತ್ತಿದ್ದು, ಹಿಂದಿನ ಉಪ ವಿಭಾಗಾಧಿ ಕಾರಿಗಳಾಗಿದ್ದ ಪ್ರಸನ್ನ ಅವರು ಜಾಗ ತೆರವಿಗೆ ಸೂಚನೆ ನೀಡಿದ್ದರು. ಉಪವಾಸ ಸತ್ಯಾಗ್ರಹ ಕುಳಿತಿದ್ದಾಗ ಜಿಲ್ಲಾ ಧಿಕಾರಿಗಳು ತೆರವಿಗೆ ಆದೇಶ ಮಾಡಿದ್ದರು. ಸ್ವಲ್ಪದಿನಗಳ ಕಾಲ ಸುಮ್ಮನಿದ್ದ ಭೂ ಒತ್ತುವರಿದಾರರು ಈಗ ಅದೇ ಜಾಗದಲ್ಲಿ ಯಾರಧ್ದೋ ಕುಮ್ಮಕ್ಕಿನಿಂದ ರಾತ್ರೋರಾತ್ರಿ ಕಟ್ಟಡ ನಿರ್ಮಿಸಿ ಭೂ ಕಬಳಿಕೆ ಮಾಡುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳ ಕೈವಾಡದ ಜೊತೆಗೆ ರಿಯಲ್ ಎಸ್ಟೇಟ್ ಮಾμಯಾ ಇದೆ ಎಂದು ದೂರಿದರು. ಗೋಷ್ಠಿಯಲ್ಲಿ ಅರಣ್ಯ ಮೂಲ ಬುಡಕಟ್ಟು ಒಕ್ಕೂಟದ ಜಿಲ್ಲಾ ಸಂಚಾಲಕ ರಾಮಣ್ಣ ಹಸಲರು, ಸಾಮಾಜಿಕ ಕಾರ್ಯಕರ್ತರಾದ ರಮೇಶ್ ಐಗಿನಬೈಲು, ಎಂ.ಎಸ್. ಶಶಿಕಾಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.