ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ


Team Udayavani, Oct 21, 2021, 4:36 AM IST

ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ

ಉಪ್ಪುಂದ: ಧರ್ಮದ ಮೂಲ ಉದ್ದೇಶ ಸ್ವ-ಸಹಾಯ. ಧರ್ಮ ವನ್ನು ಅನುಸರಿಸುವುದರಿಂದ ನಮ್ಮ ಆತ್ಮ ಕಲ್ಯಾಣವನ್ನು ಸಾಧ್ಯವಾಗಿಸುತ್ತದೆ. ವ್ಯಕ್ತಿತ್ವದಲ್ಲಿ ಬದಲಾವಣೆ ತರುತ್ತದೆ. ಭಾವನೆಗಳಲ್ಲಿ ಶುಭ ಪರಿಣಾಮಗಳನ್ನು ಕೊಡುತ್ತದೆ. ಇದರಿಂದ ಧರ್ಮದ ಸಂದೇಶ ಅನುಸರಣೆ ಮಾಡಲು ಸಾಧ್ಯವಾಗುತ್ತದೆ. ಧರ್ಮದ ಮೂಲಕ ಹೊಸ ಚಿಂತನೆ, ಯೋಜನೆಗಳು ಹಾಗೂ ದೂರದೃಷ್ಟಿತ್ವ ಬೆಳೆಯಬೇಕು. ಪರಿವರ್ತನೆ ದೇವರ ಅನುಗ್ರಹದಿಂದ ಸಾಧ್ಯ ಎಂದು ಡಾ| ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಬೈಂದೂರು ತಾಲೂಕು ವತಿಯಿಂದ ಕೃಷಿ ಮನೆ ನಾಯ್ಕನಕಟ್ಟೆಯಲ್ಲಿ ಸ್ಥಳಾಂತರಗೊಳ್ಳುತ್ತಿರುವ ಕೃಷಿ ಯಂತ್ರಗಳ ಬಾಡಿಗೆ ಸೇವಾ ಕೇಂದ್ರ ಮತ್ತು ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ಕಚೇರಿ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಲ್ಲಿ ವಿದ್ಯಾದಾನ, ಅನ್ನದಾನ, ಔಷಧ ದಾನ ನಿತ್ಯ ನಡೆಯುವಂಥದ್ದು. ಅಭಯದಾನ ನೀಡಲಾಗುತ್ತದೆ. ಜನರನ್ನು ಹೆದರಿಕೆಯಿಂದ ಮುಕ್ತಗೊಳಿಸುವಂತದ್ದು ಅಭಯ ದಾನವಾಗಿದೆ. ಇದರಲ್ಲಿ ಜನ ಹೇಗೆ ಬೆಳೆಯಬೇಕು ಎನ್ನುವುದನ್ನು ಸ್ವ-ಸಹಾಯ ಸಂಘಗಳ ಮೂಲಕ ತೋರಿಸಲಾಗಿದೆ ಎಂದರು. 3,666 ಸ್ವ-ಸಹಾಯ ಸಂಘಗಳನ್ನು ರಚನೆ ಮಾಡಲಾಗಿದೆ. ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ 8.53 ಕೋಟಿ ರೂ. ಲಾಭಾಂಶ ಸದಸ್ಯರು ಹಂಚಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ:ಮುಂದಿನ ಶರಣ ಸಂಸ್ಕೃತಿ ಉತ್ಸವದ ಗೌರವ ಅಧ್ಯಕ್ಷರಾಗಿ ವನಶ್ರೀ ಮಠದ ಸ್ವಾಮೀಜಿ ಆಯ್ಕೆ

ಕೃಷಿಕರು ಆಧುನಿಕತೆಯನ್ನು ಬಳಸಿ ಕೊಳ್ಳಬೇಕು. ಯಂತ್ರೋಪಕರಣಗಳನ್ನು ಬಳಕೆ ಮಾಡಿ ಕೃಷಿಯಲ್ಲಿ ಸಂಪತ್ತು ಗಳಿಸಬೇಕು. ಕೃಷಿಯಲ್ಲಿ ಉತ್ತಮ ಮೌಲ್ಯಗಳಿಸಬೇಕು. ಪರಿವರ್ತನೆಯನ್ನು ಬಳಸಿಕೊಂಡು ದುಶ್ಚಟಗಳಿಗೆ ಒಳಗಾಗದೆ ಅಭಿವೃದ್ಧಿಯನ್ನು ಹೊಂದುವಂತಾಗಲಿ ಎಂದು ಆಶೀರ್ವಚಿಸಿದರು.

ಕೃಷಿಮನೆ ಕಟ್ಟಡ ಮಾಲಕ ನಾಗಲಕ್ಷ್ಮೀ ಸತೀಶ ಕೊಠಾರಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕುಂದಾಪುರ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಕೆರ್ಗಾಲು ಗ್ರಾ.ಪಂ. ಅಧ್ಯಕ್ಷ ಮಾಧವ ದೇವಾಡಿಗ, ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ರಘುರಾಮ ಕೆ. ಪೂಜಾರಿ, ಬೈಂದೂರು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಸ್ವಾಗತಿಸಿ, ಧರ್ಮಸ್ಥಳದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಅಶೋಕ ವಂದಿಸಿದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.