‘ವ್ಯಾಕ್ಸಿನ್ ಸೆಂಚುರಿ’: ‘ನಾವು ವಿಜಯವನ್ನು ಕಾಣುತ್ತಿದ್ದೇವೆ’ ಎಂದ ಪ್ರಧಾನಿ ಮೋದಿ
ಆರೋಗ್ಯ ಸಚಿವರೊಂದಿಗೆ ಆಸ್ಪತ್ರೆಗೆ ತೆರಳಿ ಸಂಭ್ರಮಿಸಿದ ಪ್ರಧಾನಿ
Team Udayavani, Oct 21, 2021, 1:16 PM IST
ಹೊಸದಿಲ್ಲಿ : ದೇಶದಲ್ಲಿ 100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಸಂಭ್ರಮವನ್ನು ಹಂಚಿಕೊಳ್ಳಲು ಪ್ರಧಾನಿ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರು, ನರ್ಸ್ ಗಳು ಮತ್ತು ಕೊವಿಡ್ ಲಸಿಕೆ ನೀಡುವಲ್ಲಿ ಮುನ್ನೆಲೆಯಲ್ಲಿ ಸಹಕರಿಸಿದ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ”ಭಾರತದ ಇತಿಹಾಸ ಬರೆದಿದೆ. ನಾವು 130 ಕೋಟಿ ಭಾರತೀಯರ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ಕಾಣುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು.” ಎಂದು ಸಂತಸ ಹಂಚಿಕೊಂಡಿದ್ದಾರೆ.
ಕೇಂದ್ರ ಸರಕಾರ ಬುಧವಾರ ವ್ಯಾಕ್ಸಿನೇಷನ್ ಗೀತೆಯನ್ನು ಬಿಡುಗಡೆಗೊಳಿಸಿದ್ದು, ಪದ್ಮಶ್ರೀ ಕೈಲಾಷ್ ಖೇರ್ ಅವರು ಹಾಡಿದ್ದಾರೆ.
100 ಕೋಟಿ ಲಸಿಕೆ ಪೂರ್ಣಗೊಳಿಸಿದ ಕುರಿತು ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋ ಸ್ಟೇಷನ್ ಗಳು,ಹಡಗುಗಳಲ್ಲಿ ಘೋಷಿಸಲಾಗುವುದು ಎಂದು ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
‘ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಿಂದ ಸಾಧ್ಯವಾಗಿದೆ’ ಎಂದು ಮನ್ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದಾರೆ.
#WATCH Prime Minister Narendra Modi visits vaccination site at Delhi’s RML Hospital as India achieves the landmark one billion COVID19 vaccinations mark pic.twitter.com/cncYtediH6
— ANI (@ANI) October 21, 2021
CoWIN ಪೋರ್ಟಲ್ ನಲ್ಲಿ ಗುರುವಾರ ಬೆಳಗ್ಗೆ 9:47 ಕ್ಕೆ 100 ಕೋಟಿ ಲಸಿಕೆ ನೀಡಲಾಗಿರುವುದು ದಾಖಲಾಗಿದೆ.
ಜನವರಿ 16, 2021ರಂದು ಲಸಿಕೆಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲು ಆರೋಗ್ಯ ಕಾರ್ಯಕರತರಿಗೆ ಆದ್ಯತೆ ನೀಡಲಾಗಿತ್ತು. ಫೆಬ್ರವರಿ 2 ಬಳಿಕ ಭದ್ರತಾ ಪಡೆಗಳು ಮತ್ತು ಪೊಲೀಸರಿಗೆ ನೀಡಲಾಗಿತ್ತು. ಮಾರ್ಚ್ 1 ರ ಬಳಿಕ 60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟವರಿಗೆ ಎಪ್ರಿಲ್ 1 ರಿಂದ , ಮೇ 1 ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.