![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 21, 2021, 4:24 PM IST
ಗುಂಡ್ಲುಪೇಟೆ : ಟಿಪ್ಪರ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ನಡೆದಿದೆ.
ನೆರೆಯ ಕೇರಳ ಮೂಲದ ಸುಜಿತ್ ಕೃಷ್ಣನ್ (30) ಮೃತ ವ್ಯಕ್ತಿ. ವಿಜೇಶ್, ಜೀತು, ಸುಲೇಮಾನ್, ಜೋವನ್ ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಸುಜಿತ್ ದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಘಟನೆ ವಿವರ: ಗುರುವಾರ ಮುಂಜಾನೆ 7:30ರ ಸಮಯ ಬೇಗೂರು ರಾಷ್ಟ್ರೀಯ ಹೆದ್ದಾರಿ – 766ರಲ್ಲಿ ಪ್ರವಾಸದ ನಿಮಿತ್ತ ಮೈಸೂರು ಕಡೆಯಿಂದ ಇನೋವಾ ಕಾರು ಬಂದಿದ್ದು, ಅದರ ಮುಂದೆ ಮರಳು ತುಂಬಿದ ಟಿಪ್ಪರ್ ಸಂಚರಿಸಿದೆ. ಈ ವೇಳೆ ಬೇಗೂರಿನ ಸಮೀಪದ ಟಿ.ಬಿ. ಸರ್ಕಲ್ ಹತ್ತಿರ ಮುಂದೆ ಹೋಗುತ್ತಿದ್ದ ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಇಂಡಿಕೆಟರ್ ಹಾಕದೆ ಏಕಾಏಕಿ ಬಲಕ್ಕೆ ತಿರುಗಿಸಿದೆ. ಆ ಸಂದರ್ಭ ಹಿಂಬದಿಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್
ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.