ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ
ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
Team Udayavani, Oct 21, 2021, 5:28 PM IST
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೆಗೆಟಿವ್ ವಹಿವಾಟಿನ ಪರಿಣಾಮ ಗುರುವಾರ(ಅಕ್ಟೋಬರ್ 21) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 336.46 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ. ಇದರಿಂದಾಗಿ ಇನ್ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿವೆ.
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 336.46 ಅಂಕ ಇಳಿಕೆಯಾಗಿದ್ದು, 60,923.50 ಅಂಕಗಳಲ್ಲಿ ದಿನಾಂತ್ಯದ ವಹಿವಾಟನ್ನು ಅಂತ್ಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 88.50 ಅಂಕ ಕುಸಿತವಾಗಿದ್ದು, 18,178.10 ಅಂಕಗಳಲ್ಲಿ ವಹಿವಾಟು ಕೊನೆಗೊಳಿಸಿದೆ.
ಷೇರು, ನಿಫ್ಟಿ ನಷ್ಟದಿಂದ ಏಷ್ಯನ್ ಪೇಂಟ್ಸ್, ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್, ಟಾಟಾ ಸ್ಟೀಲ್, ಟಿಸಿಎಸ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಕೋಟಕ್ ಬ್ಯಾಂಕ್, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆ ಕಂಡಿದ್ದವು. ಅಲ್ಲದೇ ಹಾಂಗ್ ಕಾಂಗ್, ಸಿಯೋಲ್, ಟೋಕಿಯೋ ಷೇರುಪೇಟೆ ವಹಿವಾಟು ನಷ್ಟ ಕಂಡಿದ್ದು, ಶಾಂಘೈ ಷೇರುಪೇಟೆ ಲಾಭಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.