ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ : ಜಿಲ್ಲಾಧಿಕಾರಿ ಕೂರ್ಮಾರಾವ್
ಪೊಲೀಸ್ ಹುತಾತ್ಮರ ದಿನಾಚರಣೆ
Team Udayavani, Oct 21, 2021, 8:30 PM IST
ಉಡುಪಿ : ದೇಶ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಗಾಗಿ ತಮ್ಮ ಕರ್ತವ್ಯದ ಸಮಯದಲ್ಲಿ ಪೊಲೀಸರು ಮಾಡುವ ತ್ಯಾಗ ಹಾಗೂ ಬಲಿದಾನ ಸದಾ ಅವಿಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಚಂದು ಮೈದಾನದಲ್ಲಿ ಗುರುವಾರ ನಡೆದ ಪೋಲಿಸ್ ಹುತಾತ್ಮ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.
ಯಾವುದೇ ಅಸಾಧಾರಣ ಸನ್ನಿವೇಶದಲ್ಲೂ ಸಹ ವಿಶೇಷ ಸೇವೆ ಸಲ್ಲಿಸುವ ಪೊಲೀಸರು, ತುರ್ತು ಪರಿಸ್ಥಿತಿ, ಕ್ಲಿಸ್ಟಕರ ಪರಿಸ್ಥಿತಿ, ಪ್ರಾಕೃತಿಕ ವಿಕೋಪ ಪರಿಸ್ಥಿತಿಯಲ್ಲೂ ಸಹ ಎದೆಗುಂದದೇ ಕಾರ್ಯ ನಿರ್ವಹಿಸುತ್ತಾರೆ. ಸಮಾಜದಲ್ಲಿ ಜನತೆ ಶಾಂತಿ, ನೆಮ್ಮದಿಯಿಂದ ಬದುಕುತ್ತಿರುವುದಕ್ಕೆ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವುದೇ ಕಾರಣ. ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ, ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮಾತನಾಡಿ, ಪೊಲೀಸ್ ಹುತಾತ್ಮರ ದಿನಾಚರಣೆಯ ಮಹತ್ವ ಹಾಗೂ 1-9-2020 ರಿಂದ 31-8-2021 ರ ವರೆಗೆ ಕರ್ತವ್ಯದ ಅವಧಿಯಲ್ಲಿ ಹುತಾತ್ಮರಾದ ಕರ್ನಾಟಕದ 16 ಮಂದಿ ಸೇರಿದಂತೆ ದೇಶದ ಒಟ್ಟು 377 ಪೊಲೀಸರ ನಾಮಸ್ಮರಣೆ ಮಾಡಿದರು. ಹುತಾತ್ಮ ಪೊಲೀಸರ ಗೌರವಾರ್ಥ 3 ಸುತ್ತು ಗುಂಡು ಹಾರಿಸಲಾಯಿತು. ಎರಡು ನಿಮಿಷಗಳ ಮೌನಾಚರಣೆ ನಡೆಯಿತು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಪ್ರೊಬೆಷನರ್ ಆರ್.ಎಸ್.ಐ. ಪುನೀತ್ ಕುಮಾರ್ ಪರೇಡ್ ನೇತೃತ್ವ ವಹಿಸಿದ್ದರು. ಕರಾವಳಿ ಕಾವಲು ಪೊಲೀಸ್‌ನ ಎಸ್.ಐ.ಬಿ.ಮನಮೋಹನ್ ರಾವ್ ನಿರೂಪಿಸಿದರು.
ಇದನ್ನೂ ಓದಿ :ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ
ಐಪಿಎಸ್ ತರಬೇತಿ ನೆನೆಪಿಸಿಕೊಂಡ ಜಿಲ್ಲಾಧಿಕಾರಿ
ತಾವು ಐಪಿಎಸ್ ತರಬೇತಿಯಲ್ಲಿದ್ದಾಗ ಅಕಾಡೆಮಿಯಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಮೊದಲು ಸಮಾಜಕ್ಕಾಗಿ ಕರ್ತವ್ಯ ನಿರ್ವಹಿಸಬೇಕು. ಎರಡನೇಯದಾಗಿ ತಮ್ಮ ಜತೆಯಲ್ಲಿರುವ ಸಹೋದ್ಯೋಗಿಗಳ ರಕ್ಷಣೆಗೆ ಮತ್ತು ಅಂತಿಮವಾಗಿ ತನ್ನ ಪ್ರಾಣದ ಕುರಿತು ಯೋಚಿಸಬೇಕು ಎಂದು ತಿಳಿಸಿದ್ದರು. ಪೊಲೀಸರು ಎಂದೆಂದಿಗೂ ಅದೇ ರೀತಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.