ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ


Team Udayavani, Oct 21, 2021, 9:15 PM IST

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಹಾನಗಲ್ಲ: ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಮನುಷ್ಯ ಮನಸ್ಸುಗಳ ಮಧ್ಯ ಅಶಾಂತಿ ಸೃಷ್ಟಿ ಮಾಡಿ  ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾನಗಲ್ಲ ವಿಧಾನಸಭಾ ಕ್ಷೇತ್ರದ ಮಕರವಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಾತಿ ಜಾತಿಗಳ ನಡುವೆ ದ್ವೇಷವನ್ನು ಬಿತ್ತಿ, ಜಾತಿಗಳಲ್ಲಿ ನೂರಾರು ಉಪಜಾತಿಗಳನ್ನು ಸೃಷ್ಟಿಮಾಡಿ ಸಮಾಜದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿದ್ದಾರೆ.  ಮನುಷ್ಯರು ಮನಸುಗಳ ಮಧ್ಯೆ ಗೋಡೆಯನ್ನು ಸೃಷ್ಟಿಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದರು.

ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ  ಹಾನಗಲ್ಲ ಅಭಿವೃದ್ಧಿಗೆ ಕೊಡುಗೆ ಶೂನ್ಯ. ಹೀಗಾಗಿ ಸಿದ್ದರಾಮಯ್ಯ ಅವರನ್ನು  ಬಂದ ದಾರಿಗೆ ಸುಂಕವಿಲ್ಲದಂತೆ  ವಾಪಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದಾಗ, ನಾನು ಜಲಸಂಪನ್ಮೂಲ ಸಚಿವ ಇದ್ದಾಗ ಮತ್ತು ಉದಾಸಿ ಅವರು ಲೋಕೋಪಯೋಗಿ ಇಲಾಖೆಯ ಸಚಿವರಾಗಿದ್ದಾಗ ತಿಳವಳ್ಳಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದೇವೆ. ನಂತರದಲ್ಲಿ ಬಂದ ಕಾಂಗ್ರೆಸ್ ಸರ್ಕಾರ ಯಾವುದೇ ಕೆಲಸವನ್ನು ಮಾಡಲಿಲ್ಲ ಈ ಕ್ಷೇತ್ರಕ್ಕೆ ಕನಿಷ್ಠ ಪಕ್ಷ ಒಂದು ಸಣ್ಣ ಶಾಲೆಯನ್ನು ಸಹ ಅವರಿಂದ ಕಟ್ಟಲಾಗಿಲ್ಲ. ಸುಮಾರು 513 ಕೋಟಿ ಮೊತ್ತದ ಕಾಮಗಾರಿಗೆ ಅಡಿಗಲ್ ಹಾಕಲು ಕಾಂಗ್ರೆಸ್ ನವರು ಮುಂದಾಗಿದ್ದರು, ಆ ಅನುದಾನದಲ್ಲಿ 425 ಕೋಟಿ ಸಿಎಂ ಉದಾಸಿ ಅನುಮೋದನೆ ನೀಡಿದ್ದ ಅನುದಾನ ವಾಗಿತ್ತು. ಅಧಿಕಾರದಲ್ಲಿದ್ದಾಗ ಇಲ್ಲಿನ ಜನರನ್ನು ಇಲ್ಲಿನ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ ಕಾಂಗ್ರೆಸ್ ಪಕ್ಷ ಚಿನ್ನದ ತಟ್ಟೆಯಲ್ಲಿ ನಿಮಗೆ ಅಭಿವೃದ್ಧಿ ತೊರಿಸುವ ಸುಳ್ಳು ಆಶ್ವಾಸನೆ ಹೊತ್ತು ತಂದಿದ್ದಾರೆ.

ಎಲ್ಲೋ ಮೂಲೆಯಲ್ಲಿ ಕಾಂಗ್ರೆಸ್ ಕಿಟ್ ವಿತರಿಸಿದೆ:

ಎಲ್ಲೋ ಮೂಲೆಯಲ್ಲಿ ಕಿಟ್ ವಿತರಿಸಿ ಕೋವಿಡ್ ಸಂದರ್ಭದಲ್ಲಿ ಅದ್ಬುತವಾದ ಕೆಲಸವನ್ನು ಮಾಡಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ. ಕೋವಿಡ್ ಸಂಕಷ್ಟವನ್ನು  ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥವಾಗಿ ಎದುರಿಸಿದ್ದೇವೆ ಸಿಎಂ ಉದಾಸಿ ಅವರ ನೇತೃತ್ವದಲ್ಲಿ 15 ಸಾವಿರಕ್ಕೂ ಹೆಚ್ಚು ಕೀಟಗಳನ್ನು ಹಾನಗಲ್ಲ ತಾಲೂಕಿನಲ್ಲಿ ವಿತರಿಸಿದ್ದೇವೆ ಎಂದು ಅವರು ಹೇಳಿದರು.

ಹಾನಗಲ್ಲನಲ್ಲಿ ಶೇ. 80ರಷ್ಟು ಮೊದಲ ಹಂತದ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಸಮಯದಲ್ಲಿ ಉಚಿತವಾಗಿ ಪಡಿತರ ಹಾಗೂ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿಂಗ್ ನೀಡಿದ್ದು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಸರಕಾರ. ಎಂದು ಅವರು ಹೇಳಿದರು.

ನಿಮ್ಮ ಮತಕ್ಕೆ ಗೌರವವಿದೆ:

ನೀವು ನೀಡುವ ಪ್ರತಿಯೊಂದು ಮತಕ್ಕೂ ಗೌರವವಿದೆ, ಅದಕ್ಕೆ ಬೆಲೆ ಬರಬೇಕು. ನಿಮ್ಮ ಮತದ ಗೌರವವನ್ನು ಭಾರತೀಯ ಜನತಾ ಪಕ್ಷ ಕಾಪಾಡುತ್ತದೆ. ಶಿವರಾಜ್ ಸಜ್ಜನರ ಅವರರಿಗೆ ಹಾನಗಲ್ಲ ಅಭಿವೃದ್ಧಿಗೆ ಇಲ್ಲಿನ ಜನಸಾಮಾನ್ಯರ ಸೇವೆ ಮಾಡಲು ಅವಕಾಶ ನೀಡಿ ಎಂದು ಹಾನಗಲ್ಲ ಜನತೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

Court1

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.