ಡಾ| ನೀಲಾ ಚಿತ್ರ ಅಂತಾರಾಷ್ಟ್ರೀಯ ಆನ್‌ಲೈನ್‌ ಪ್ರದರ್ಶನಕ್ಕೆ ಆಯ್ಕೆ


Team Udayavani, Oct 22, 2021, 9:25 AM IST

1

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ಮಹಾ ದಾಸೋಹ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಬರೆದ ಮಹಾದಾಸೋಹ ಸೂತ್ರದ “ಮದುವೆ ಮಧುರ ಸುಮಧುರ’ ವಿಷಯದ ಮೇಲೆ ಖ್ಯಾತ ಕಲಾವಿದ ಡಾ| ಸುಬ್ಬಯ್ಯ ಎಂ. ನೀಲಾ ರಚಿಸಿದ ವರ್ಣಚಿತ್ರ 4ನೇ ಅಂತಾರಾಷ್ಟ್ರೀಯ ಆನ್‌ಲೈನ್‌ ಕಲಾ ಪ್ರದರ್ಶನದಲ್ಲಿ ಆಯ್ಕೆಯಾಗಿದೆ.

ಚಂಡಿಗಡ್‌ ಮೂಲದ ನಿರಂತರ ಕಲಾ ಬಳಗದ ವತಿಯಿಂದ ಆಯೋಜಿಸಿದ್ದ “ನಿರಂತರ 2021′ ಪ್ರದರ್ಶನದಲ್ಲಿ ಆಯ್ಕೆಯಾಗುವ ಮೂಲಕ ಡಾ| ನೀಲಾ ಭಾರತವನ್ನು ಪ್ರತಿನಿಧಿಸಿದ್ದಾರೆ. ದೇಶದ ವಿವಿಧ ಭಾಗಗಳ 40ಕ್ಕೂ ಹೆಚ್ಚು ಪ್ರಖ್ಯಾತ ಚಿತ್ರಕಾರರಲ್ಲಿ ಡಾ| ನೀಲಾ ತಮ್ಮ ವರ್ಣಚಿತ್ರಗಳನ್ನು ಆಯ್ಕೆಗಾಗಿ ಸಲ್ಲಿಸಿದ್ದರು. ತಜ್ಞರ ತಂಡವು ಮಹಾದಾಸೋಹ ಸೂತ್ರದಲ್ಲಿ ಡಾ| ನೀಲಾ ಅವರ ವರ್ಣಚಿತ್ರವನ್ನು ನಾಲ್ಕನೇ ಅಂತಾರಾಷ್ಟ್ರೀಯ ಆನ್‌ಲೈನ್‌ ಪ್ರದರ್ಶನದಲ್ಲಿ ಪ್ರದರ್ಶಿಸಲು ಆಯ್ಕೆ ಮಾಡಿತು.

ಈ ಕಲಾ ಪ್ರದರ್ಶನವು ಸೆಪ್ಟೆಂಬರ್‌ 30ರಿಂದ ಆರಂಭವಾಗಿದ್ದು, ಅಕ್ಟೋಬರ್‌ 30ಕ್ಕೆ ಮುಕ್ತಾಯ ವಾಗಲಿದೆ. ಯುಎಸ್‌ಎ, ಜಪಾನ್‌, ರಷ್ಯಾ, ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಕೊರಿಯಾ, ಸೌದಿ ಅರೇಬಿಯಾ, ಬಾಂಗ್ಲಾದೇಶ, ನೇಪಾಳ ಮತ್ತು ಇತರ ದೇಶಗಳ 38 ರಾಷ್ಟ್ರಗಳ ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದರು ಕಲಾ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಡಾ| ನೀಲಾ ಪ್ರಕಾರ, ಪ್ರದರ್ಶನದ ಆಯೋಜಕರು ಭಾಗವಹಿಸುವ ಪ್ರತಿಯೊಂದು ದೇಶದಿಂದ ಒಂದೊಂದು ವರ್ಣಚಿತ್ರ ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕಲಾ ಪ್ರದರ್ಶನದಲ್ಲಿ ಪ್ರದರ್ಶಿಸಲಿದ್ದಾರೆ.

ತಮ್ಮ ಈ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸ್‌ನ್‌ ಮಾತೋಶ್ರಿ ಡಾ| ದಾಕ್ಷಾಯಿಣಿ ಅವ್ವ, ಚಿರಂಜೀವಿ ದೊಡ್ಡಪ್ಪ ಅಪ್ಪ ಪ್ರೋತ್ಸಾಹ ಮತ್ತು ಆಶೀರ್ವಾದ ಕಾರಣ ಎಂದು ಅವರು ತಿಳಿಸಿದ್ದಾರೆ.

ಚಿತ್ರಕಲೆಗೆ ಜೀವ ತುಂಬಿದ ಕಾಲ್ಪನಿಕ ಬಣ್ಣ

ಆಕ್ರಿಲಿಕ್‌ ಬಳಸಿ ರಚಿಸಿದ ಈ ಕಲಾಕೃತಿ ನಮ್ಮ ಧಾರ್ಮಿಕ ಲಿಪಿ, ವೇದಗಳಲ್ಲಿ ಬರುವ ಸಿದ್ಧಾಂತಗಳ ಪ್ರಕಾರ ಸದ್ಗುಣ ಮತ್ತು ಧಾರ್ಮಿಕ ಜೀವನ ನಡೆಸಲು ಎರಡು ಮನಸ್ಸುಗಳ ಸಂಗಮವಾಗಿದೆ. ಕ್ಯಾನ್ವಾಸ್‌ನಲ್ಲಿ ಇದನ್ನು ವೀಕ್ಷಿಸಲು ಸಂತೋಷವೆನಿಸುತ್ತದೆ. ಸೃಜನಶೀಲ ಸಾಂಪ್ರದಾಯಿಕ ಮತ್ತು ಅಲಂಕಾರಿಕ ಶೈಲಿಯಲ್ಲಿ ಮಾಡಿದ ಚಿತ್ರಕಲೆ ವಧು ಮತ್ತು ವರನ ಮದುವೆಗೆ ಮುಂಚೆ ಅವರ ಕಣ್ಣುಗಳಲ್ಲಿ ಕನಸುಗಳನ್ನು ಬಿತ್ತುತ್ತದೆ. ಕಲಾವಿದರು ಆಯ್ಕೆ ಮಾಡಿದ ಕಾಲ್ಪನಿಕ ಬಣ್ಣಗಳು ಚಿತ್ರಕಲೆಗೆ ಹೆಚ್ಚು ಜೀವ ತುಂಬಿವೆ.

ಶರಣಬಸವ ವಿಶ್ವವಿದ್ಯಾಲಯದ ಸ್ನಾತಕೋತ್ತರ ದೃಶ್ಯ ಕಲಾ ವಿಭಾಗದ ಮುಖ್ಯಸ್ಥರಾಗಿರುವ ಡಾ| ಸುಬ್ಬಯ್ಯ ಎಂ. ನೀಲಾ ತಮ್ಮ ಸೃಜನಶೀಲ ಕೆಲಸಗಳಿಗಾಗಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಶ್ರೀಲಂಕಾ, ಬಾಂಗ್ಲಾದೇಶದ ಖಾಸಗಿ ಸಂಗ್ರಹಕಾರರ ಗೋಡೆಗಳನ್ನು ಇವರು ತಮ್ಮ ಚಿತ್ರಕಲೆಯಿಂದ ಅಲಂಕರಿಸಿದ್ದಾರೆ. ದೇಶಾದ್ಯಂತದ ಪ್ರಸಿದ್ಧ ವಸ್ತುಸಂಗ್ರಹಾಲಯ ಮತ್ತು ದೇಶದ ವಿವಿಧ ಭಾಗಗಳಲ್ಲಿರುವ ವ್ಯಕ್ತಿಗಳ ಖಾಸಗಿ ಸಂಗ್ರಹಗಳಲ್ಲಿ ಡಾ| ನೀಲಾ ಕಲಾಕೃತಿಗಳು ವಿಜೃಂಭಿಸುತ್ತಿವೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.