ರಾಜ್ಯೋತ್ಸವ: ಸರಳ ಆಚರಣೆಗೆ ನಿರ್ಧಾರ
Team Udayavani, Oct 22, 2021, 11:06 AM IST
ಯಾದಗಿರಿ: ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿ ಡಾ| ರಾಗಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಕನ್ನಡ ರಾಜ್ಯೋತ್ಸವವನ್ನು ನಗರದ ಸರ್ಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಬೇಕು ಎಂದು ತಿಳಿಸಿದರು.
ಧ್ವಜಾರೋಹಣ ಹಿನ್ನೆಲೆಯಲ್ಲಿ ರಾಷ್ಟ್ರಗೀತೆ, ನಾಡ ಗೀತೆ, ಧ್ವಜಾರೋಹಣ ಮತ್ತು ಇತರೆ ಅಗತ್ಯ ಸಿದ್ಧತೆ ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ, ಅರಣ್ಯ ಇಲಾಖೆ ಸೇರಿದಂತೆ 4 ಕವಾಯತು ತಂಡ ರಚಿಸಬೇಕು. ಜಿಲ್ಲೆಯ ವಿವಿಧ ಇಲಾಖೆಗಳಾದ ಅರಣ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರವಾಸೋದ್ಯಮ, ಆರೋಗ್ಯ, ಪೌರಾಯುಕ್ತ, ಸಾರಿಗೆ ಇಲಾಖೆಗಳಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲು ಅಧಿಕಾರಿಗಳು ನೆರವಾಗಬೇಕೆಂದು ಸೂಚಿಸಿದರು.
ಇದನ್ನೂ ಓದಿ: 100 ಕೋಟಿ ಜನರಿಗೆ ಲಭಿಸಿದೆ ಲಸಿಕೆ ಲಾಭ
ತಾಲೂಕುಗಳಲ್ಲಿಯೂ ಆಯಾ ವ್ಯಾಪ್ತಿಯ ತಹಶೀಲ್ದಾರರು ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತ ವತಿಯಿಂದ ಕೋವಿಡ್ ಮಾರ್ಗಸೂಚಿಯನ್ವಯ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಡಿವೈಎಸ್ಪಿ ಸಂತೋಷ ಬನಹಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವೀರಶೈವ ಸಮಾಜದ ನಗರ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಚೆನ್ನಬಸವ ಎಸ್, ಅಬಕಾರಿ ಅಧಿಕಾರಿ ಫಿರೋಜಖಾನ್ ಕಿಲ್ಲೇದಾರ್, ಯಾದಗಿರಿ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ, ಯೋಜನಾ ನಿರ್ದೇಶಕ ಶಾಆಲಂ ಹುಸೇನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ಸೇರಿದಂತೆ ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.