ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್
ನಳಿನ್ ಕುಮಾರ್ ಗೆ ಸೀರೆ ಉಡಿಸಿದರೆ ಗಂಡಸೂ ಅಲ್ಲ, ಹೆಂಗಸೂ ಅಲ್ಲ!
Team Udayavani, Oct 22, 2021, 4:26 PM IST
ಶಿವಮೊಗ್ಗ: ‘ಸಂಸದ ಬಿ.ವೈ. ರಾಘವೇಂದ್ರ ಮತ್ತು ವಿಜಯೇಂದ್ರ ಅವರ ಹಣವೆಲ್ಲವೂ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಬಳಿ ಇದೆ’ಎಂದು ಹೇಳಿಕೆ ನೀಡುವ ಮೂಲಕ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಶುಕ್ರವಾರ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ‘ಯಡಿಯೂರಪ್ಪ ಅವರ ಪಿಎಗಳ ಮನೆಗಳನ್ನು ರೈಡ್ ಮಾಡಲಾಗಿದೆ. ಆದರೆ, ಷಡಕ್ಷರಿ ಮನೆ ಮೇಲೆ ದಾಳಿ ಮಾಡಲಿ.ನೂರಾರು ಕೋಟಿ ರೂ. ಲೂಟಿ ಮಾಡಿರುವ ದುಡ್ಡು ಷಡಕ್ಷರಿ ಬಳಿ ಇದೆ.ಷಡಕ್ಷರಿ ಯಡಿಯೂರಪ್ಪ ಅವರ ಪಿಎ ಆಗಿದ್ದವರು.ಯಡಿಯೂರಪ್ಪ ಅವರ ವ್ಯವಹಾರವೆಲ್ಲವೂ ಅವರೇ ನೋಡಿಕೊಂಡಿದ್ದಾರೆ.ಹಾಗಾಗಿ ಷಡಾಕ್ಷರಿ ಮನೆ ಮೇಲೆ ರೈಡ್ ಮಾಡಲಿ’ ಎಂದು ಸವಾಲು ಹಾಕಿದರು.
ಗಂಡಸೂ ಅಲ್ಲ, ಹೆಂಗಸೂ ಅಲ್ಲ
‘ನಳಿನ್ ಕುಮಾರ್ ಕಟೀಲ್ ಗೆ ಸೀರೆ ಉಡಿಸಿದರೆ, ಅವರು ಗಂಡಸೂ ಅಲ್ಲ, ಹೆಂಗಸೂ ಅಲ್ಲ’ ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೆನೆ ಎಂದಿದ್ದ ಕಟೀಲು, ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ್ದರು.ಅವರದೇ ಪಕ್ಷದ ನಾಯಕರೆನ್ನಿಸಿಕೊಂಡವರು, ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡಿದ್ದಾರೆ. ಬಿಜೆಪಿಯಲ್ಲೇ ಅತ್ಯಾಚಾರಿಗಳಿದ್ದಾರೆ. ಅವರೇ ಹಲವು ಸ್ಕ್ಯಾಂಡಲ್ ಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇವೆಲ್ಲದರ ಬಗ್ಗೆ ಗೊತ್ತಿರುವ ಕಟೀಲು ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು, ನಮ್ಮ ಕೇಂದ್ರ ನಾಯಕರ ಬಗ್ಗೆ ಟೀಕೆ ಮಾಡಲು ನೈತಿಕತೆ ಇಲ್ಲ’ ಎಂದು ಕಿಡಿ ಕಾರಿದರು.
‘ಸಚಿವ ಈಶ್ವರಪ್ಪ ಹಿರಿಯರಿದ್ದಾರೆ. ಅವರು ಕೂಡ ನಮ್ಮ ನಾಯಕರ ವಿರುದ್ಧ ಅವಾಚ್ಯ ಭಾಷೆಗಳನ್ನು ಬಳಸುತ್ತಿದ್ದಾರೆ.ಅವರ ಪಕ್ಷದಲ್ಲೇ ಕೊಳೆತು ನಾರುತ್ತಿದೆ.ಬೇಳೂರು ನಿಮಗೆ ಬೈದರೇ, ನೀವು ತಡೆದುಕೊಳ್ಳಲು ಆಗಲ್ಲ.ಕಾಂಗ್ರೆಸ್ ಇರುವುದಿಲ್ಲ ಎಂದು ಹೇಳಿಕೆ ನೀಡುತ್ತಿರುವವರೇ ಮುಂದಿನ ಚುನಾವಣೆಯಲ್ಲಿ ಇರುವುದಿಲ್ಲ’ ಎಂದರು.
‘ಮುಖ್ಯಮಂತ್ರಿ ಬೊಮ್ಮಾಯಿಯವರು ನೈತಿಕ ಪೊಲೀಸ್ ಗಿರಿ ಪರವಾಗಿ ಮಾತನಾಡಿದ್ದಾರೆ.ರಾಜ್ಯದ ಮುಖ್ಯಮಂತ್ರಿಗಳು ಹಗುರವಾಗಿ ಮಾತನಾಡಬೇಡಿ’ ಎಂದರು.
ಎರಡೂ ಒಂದೆ
‘ಕುಮಾರಸ್ವಾಮಿ ವಿರುದ್ಧವೂ ಹರಿಹಾಯ್ದ ಬೇಳೂರು ಗೋಪಾಲಕೃಷ್ಣ.ಅವರ ಪಕ್ಷವೇ ಸರಿಯಾದ ರೀತಿಯಲ್ಲಿ ಇಲ್ಲ.ಅವರದೇ ಪಕ್ಷ ಸಂಘಟನೆ ಇಲ್ಲ.ಇವರು ನಮ್ಮಪಕ್ಷದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ, ಕುಮಾರಸ್ವಾಮಿಯವರು ಬಹಳ ಎಚ್ಚರಿಕೆಯಿಂದ ಹೇಳಿಕೆ ನೀಡಲಿ. ಮುಸ್ಲಿಮರ ವೋಟು ಸೆಳೆಯಲು ಕುಮಾರಸ್ವಾಮಿ ಆರ್ ಎಸ್ಎಸ್. ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.ಅವರು ಕಾಂಗ್ರೆಸ್ ಸೋಲಿಸಲು ಈ ರೀತಿ ಮಾಡುತ್ತಿದ್ದಾರೆ.ಅವರು ಮತ್ತು ಬಿಜೆಪಿ ಎರಡೂ ಒಂದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.