ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ


Team Udayavani, Oct 23, 2021, 5:48 AM IST

ಲಸಿಕೆಯಲ್ಲಿ ದ.ಕ. ಉತ್ತಮ ಸಾಧನೆ: ಅಂಗಾರ

ಮಂಗಳೂರು/ ಸುಳ್ಯ: ಲಸಿಕೆ ನೀಡಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಇದುವರೆಗೆ 22,93,151 ಮಂದಿಗೆ ಲಸಿಕೆ ನೀಡಲಾಗಿದ್ದು ಬಾಕಿ ಉಳಿದಿರುವವರು ಕೂಡ ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ. 88 ಮಂದಿ ಪ್ರಥಮ ಹಾಗೂ ಶೇ. 51 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದಿದ್ದಾರೆ. ಸರಕಾರದ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಕಾರದಿಂದ ಇದು ಸಾಧ್ಯವಾಗಿದೆ. ಲಸಿಕೆ ಪಡೆಯಲು ಹಿಂಜರಿಯುತ್ತಿದ್ದವರೂ ಕೂಡ ಈಗ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಮಕ್ಕಳ ಸುರಕ್ಷತೆಗೆ ಕ್ರಮ
ಪ್ರಾಥಮಿಕ ಶಾಲೆಗಳ ಪುನರಾರಂಭ ಸಂದರ್ಭ ಜಿಲ್ಲಾಡಳಿತದಿಂದಲೇ ಶಾಲೆಗಳಿಗೆ ಸ್ಯಾನಿಟೈಸ್‌ ಒದಗಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳ ಲಾಗುವುದು ಎಂದರು.

ಕಾನೂನು ರೀತಿಯಲ್ಲಿ ಮರಳುಗಾರಿಕೆ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸುವ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಈಗಾಗಲೇ ನ್ಯಾಯಾಲಯವು 32 ಮಂದಿಗೆ ಮರುಳುಗಾರಿಕೆಗೆ ಅನುಮತಿ ನೀಡಿದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಅಹಿತಕರ ಘಟನೆ ತಡೆಯಲು ಕ್ರಮ
ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಅಹಿತಕರ ಘಟನೆಗೆ ಯತ್ನಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರ ಕರ್ತವ್ಯ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲ ಇಲಾಖೆಗಳು ಕೂಡ ಉತ್ತಮ ರೀತಿಯಲ್ಲಿ ಆಡಳಿತ ನಡೆಸಲು ಮುಕ್ತ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, “ಮುಡಾ’ ಅಧ್ಯಕ್ಷ ರವಿಶಂಕರ ಮಿಜಾರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ ಕಟೀಲು, ಜಿಲ್ಲಾ ವಕ್ತಾರರಾದ ಜಗದೀಶ್‌ ಶೇಣವ, ರಾಧಾಕೃಷ್ಣ ಉಪಸ್ಥಿತರಿದ್ದರು.

ಮೋದಿ ನಾಯಕತ್ವದಿಂದ ಯಶಸ್ವಿ ನಿರ್ವಹಣೆ
ಸುಳ್ಯ: ಮೋದಿ ನಾಯಕತ್ವದಿಂದ ದೇಶದಲ್ಲಿ ಕೋವಿಡ್‌ ಯಶಸ್ವಿ ನಿರ್ವಹಣೆಯಾಗಿದೆ. ಲಸಿಕೆ ಕೂಡ 100 ಕೋಟಿ ಗುರಿ ತಲುಪಿರುವುದು ಅದಕ್ಕೆ ಸಾಕ್ಷಿ ಎಂದು ಸಚಿವ ಎಸ್‌.ಅಂಗಾರ ಹೇಳಿದ್ದಾರೆ. ಈ ಸಾಧನೆಗೆ ಕಾರಣಕರ್ತರಾದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬಂದಿ ಮತ್ತು ಇತರ ಇಲಾಖೆಯ ಅಧಿಕಾರಿಗಳನ್ನು ಸಚಿವರ ನೇತೃತ್ವದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಅವರು ಸಮ್ಮಾನಿಸಿದರು.

ಲಸಿಕೆಗೆ ಆರಂಭದಲ್ಲಿ ಇದ್ದ ಎಲ್ಲ ತೊಂದರೆಗಳನ್ನು ಎದುರಿಸಿಕೊಂಡು ಈ ಗುರಿ ಸಾಧಿಸಲಾಗಿದೆ. ಅಪಹಾಸ್ಯ ಮಾಡಿದವರೂ ಕೂಡ ಇಂದು ಸಾಧನೆಯನ್ನು ಹೊಗಳುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.