ಆಲಮೇಲದಲ್ಲಿ ವಿಜಯೇಂದ್ರ ಪ್ರಚಾರ

Team Udayavani, Oct 23, 2021, 11:43 AM IST

10alamela

ಆಲಮೇಲ: ಕೋವಿಡ್‌ ಸಂಕಸ್ಟದಲ್ಲಿರುವ ಜನರಿಗೆ 1480 ಕೋಟಿ ಸಹಾಯಧನ ನೀಡಿದ ದೇಶದಲ್ಲಿಯೆ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ಯಡಿಯೂರಪ್ಪನವರ ಯೋಜನೆಗಳು ಮುಂದುವರಿಸಿಕೊಂಡು ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರಕ್ಕೆ ಸಿಂದಗಿ ಕ್ಷೇತ್ರದ ಜನ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.

ಸಿಂದಗಿ ಉಪ ಚುನಾವಣೆ ನಿಮಿತ್ತ ಶುಕ್ರವಾರ ಆಲಮೇಲ ಪಟ್ಟಣದಲ್ಲಿ ಬಿಜೆಪಿ ಅಭ್ಯಾರ್ಥಿ ರಮೇಶ ಭೂಸನೂರ ಪರ ರೋಡ್‌ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕೋವಿಡ್‌ ಸಂಕಸ್ಟದ ಸಮಯದಲ್ಲಿ ದೇಶದ ಯಾವ ರಾಜ್ಯದ ಮುಖ್ಯಮಂತ್ರಿಗಳು ನೀಡದ ಸಹಾಯಧನ ಅಂದಿನ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೀಡಿದ್ದಾರೆ. ಕೋವಿಡ್‌ ಸಂಕಸ್ಟದಲ್ಲಿರುವ ಎಲ್ಲ ಸಮುಧಾಯಕ್ಕೂ ಸಮಾನ ಅವಕಾಶ ನೀಡಿದ್ದಾರೆ. ಅವರ ಹಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದರು.

ರೈತರ ಅಭಿವೃದ್ಧಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಿದ ದೇಶದಲ್ಲಿಯೆ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಭಾಗ್ಯಲಕ್ಷ್ಮೀ ಯೋಜನೆ, ಆರೋಗ್ಯಕ್ಕೆ ತುರ್ತು ಸೇವೆ ನೀಡಲು ಆಂಬುಲೆನ್ಸ್‌ ವ್ಯವಸ್ಥೆ ಹೀಗೆ ಅನೇಕ ಅಭಿವೃದ್ಧಿ ಮಾಡಿದ್ದಾರೆ. ದೇಶದ ಚಿತ್ರಣವೆ ಬದಲಿಸಿ ಜಗತ್ತಿನಲ್ಲಿ ಬಲಿಷ್ಠ ದೇಶ ಮಾಡಲು ಹೊರಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ನರೇಂದ್ರ ಮೋದಿ, ಯಡಿಯೂರಪ್ಪ ನೇತೃತ್ವದಲ್ಲಿ ದೇಶದ ಎಲ್ಲೆಡೆ ಬಿಜೆಪಿ ಬಲಿಷ್ಠವಾಗಿ ಬೆಳೆ‌ಯುತ್ತಿದ್ದು ಅದನ್ನು ತಡೆಯಲು ಯಾರಿಂದಲೂ ಸಾಧ್ಯವವಿಲ್ಲ ಎಂದರು.

ಚಿಂಚೋಳಿ ಶಾಸಕ ಶರಣು ಸಲಗರ, ಜೇವರ್ಗಿ ಮಾಜಿ ಶಾಸಕ ದೊಡ್ಡಪಗೌಡ ಪಾಟೀಲ, ಶಂಭುಲಿಂಗ ಕಕ್ಕಳಮೇಲಿ, ಬಸವರಾಜ ಹೂಗಾರ, ಅಶೋಕ ವಾರದ, ವೀರಭದ್ರ ಕತ್ತಿ, ಸಿದ್ದರಾಮ ಪಾಟೀಲ, ವಿಶ್ವನಾಥ ಹಿರೇಮಠ, ವಿಶ್ವನಾಥ ಅಮರಗೊಂಡ, ಶ್ರೀಶೈಲ ಭೋವಿ, ಕಮಲಾಕರ ಪತ್ತಾರ, ಅಪ್ಪು ಶೆಟ್ಟಿ, ರಾಹುಲ್‌ ಎಂಟಮಾನ, ಅಂಬರಿಶ ಸಾಲಕ್ಕಿ, ಶರಣು ಗುರಕಾರ, ಮಾಣಿಕ ಕಲಕುಟಗೇರ, ಮಂಗಲಾಗುಡಿಮಠ, ಗಂಗುಬಾಯಿ ಅಮಲಝರಿ, ಸಾವಿತ್ರಿ ಹಿಕ್ಕನಗುತ್ತಿ, ಮಹಾದೇವಿ ವಡ್ಡರ, ಶೈಲಾ ಹೊಸಮನಿ ಇದ್ದರು.

ಟಾಪ್ ನ್ಯೂಸ್

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.