ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್
Team Udayavani, Oct 23, 2021, 2:41 PM IST
ಮೈಸೂರು: ವಿಪಕ್ಷ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು, ಆದರೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ದೇಶದ ಪ್ರಧಾನಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ದಲ್ಲಿ ಆಡಳಿತ ಪಕ್ಷ, ವಿಪಕ್ಷಗಳಿಗೆ ಜವಾಬ್ದಾರಿ ಇದೆ. ವಿವೇಚನೆಯಿಂದ ಜವಾಬ್ದಾರಿಯಿಂದ ವಿಪಕ್ಷ ನಾಯಕನಾದವನು ಮಾತನಾಡಬೇಕು, ಆದರೆ ಅವರಿಗೆ ಅದರ ಅರಿವೇ ಇಲ್ಲ, ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡಿಲ್ಲ, ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುವ ಕೆಲಸ ಮಾಡಬೇಕು, ಆದರೆ ಅದನ್ನು ಬಿಟ್ಟು ತಾಲಿಬಾನ್ ಗೆ ಹೋಲಿಕೆ ಮಾಡುವುದು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನವಾಗಿ ಮಾತನಾಡುವ ಕೆಲಸ ಮಾಡುತ್ತಿದ್ದಾರೆ. ವಿಪಕ್ಷ ನಾಯಕರ ಈ ರೀತಿಯ ಭಾಷಣಗಳು ಸಹಿಸಿಕೊಳ್ಳಲು ಅಸಾಧ್ಯವಾಗಿರುವ ಆಡಳಿತ ಪಕ್ಷದವರು ಅದಕ್ಕೆ ಪ್ರತಿಕ್ರಿಯೆ ನೀಡುವುದು ಕೂಡಾ ಅನಿವಾರ್ಯವಾಗಿದೆ ಎಂದರು.
ಇದನ್ನೂ ಓದಿ:ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ
ಸಿದ್ದರಾಮಯ್ಯರಿಗೆ ರಾಷ್ಟ್ರ ರಾಜಕಾರಣ ಅರ್ಥ ಮಾಡಿಕೊಳ್ಳುತ್ತಿಲ್ಲ, ತಾಲಿಬಾನ್ ಆಡಳಿತ ವನ್ನು ಪ್ರಧಾನಿ ಮೋದಿಗೆ ಹೋಲಿಕೆ ಮಾಡುತ್ತಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ಧರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ತಕ್ಷಣವೇ ಕಳುಹಿಸಿ ಕೊಡಬೇಕಾಗಿದೆ ಎಂದು ನುಡಿದರು. ಉಪ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.