ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ
ಮೂವತ್ತೆರಡಕ್ಕೂ ಹೆಚ್ಚು ಆನೆಗಳಿಂದ ನಿರಂತರ ದಾಳಿ ಭತ್ತದ ಗದ್ದೆ- ಅಡಕೆ- ಕಾಫಿ ತೋಟಗಳಲ್ಲಿ ರಂಪಾಟ
Team Udayavani, Oct 23, 2021, 3:17 PM IST
ಆಲೂರು: ತಾಲೂಕಿನ ಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ 32 ಕಾಡಾನೆಗಳ ಹಿಂಡು ಗದ್ದೆಗಳಿಗೆ ನುಗ್ಗಿ ಬೆಳೆ ನಾಶಪಡಿಸಿರುವ ಘಟನೆ ನಡೆದಿದೆ. ಪಾಳ್ಯ ಗ್ರಾಪಂಗೆ ಸೇರಿದ ಅರೆಹಳ್ಳದಕೊಪ್ಪಲು, ಚಿಗಳೂರು, ನಿಡನೂರು, ಸಿಂಗೊಡ್ನಹಳ್ಳಿ ಗ್ರಾಮಗಳಲ್ಲಿ ಕಳೆದ ಎರಡು ದಿನಗಳಿಂದ ಸುಮಾರು 32 ಕಾಡಾನೆಗಳ ಹಿಂಡು ನಿರಂತರವಾಗಿ ಓಡಾಡುತ್ತಿದ್ದು, ಅರೆಹಳ್ಳದಕೊಪ್ಪಲು ಗ್ರಾಮದ ಸಿ.ವಿ.ಲಿಂಗರಾಜು, ಚಿಗಳೂರು ಗ್ರಾಮದ ರಾಮೇಗೌಡ, ರಾಜೇಗೌಡ ಸೇರಿದಂತೆ ರೈತರ ಗದ್ದೆಗಳಲ್ಲಿ ಓಡಾಡುವುದರ ಜತೆಗೆ ವಡೆಗೆ ಬಂದ 25 ಎಕರೆಗೂ ಹೆಚ್ಚು ಗದ್ದೆಗಳನ್ನು ಸಂಪೂರ್ಣವಾಗಿ ತಿಂದು, ತುಳಿದು ಹಾಕಿವೆ.
ರೈತ ಲಿಂಗರಾಜು ಮಾತನಾಡಿ, ಎರಡೂ ಮೂರು ದಿನಗಳಿಂದ 32 ಕ್ಕೂ ಹೆಚ್ಚು ಆನೆಗಳು ಪಾಳ್ಯ ಹೋಬಳಿಯ ಅರೆಹಳ್ಳದ ಕೊಪ್ಪಲು, ಚಿಗಳೂರು, ನಿಡನೂರು, ಸಿಂಗೊಡ್ನಹಳ್ಳಿ ಗ್ರಾಮ ಸೇರಿದಂತೆ ಈ ಭಾಗಗಳಲ್ಲಿ ಬೀಡು ಬಿಟ್ಟಿದ್ದು, ವಡೆಗೆ ಬಂದಿರುವ ಭತ್ತದ ಬೆಳೆಗಳನ್ನು ಸಂಪೂರ್ಣವಾಗಿ ತಿಂದು ಹಾಕಿವೆ. ರೈತರು ಬೆಳೆರಕ್ಷಣೆ ಮಾಡಲಾಗದೆ ಕಂಗಾಲಾಗಿದ್ದಾರೆ. ಜನರು ಕಾಡಾನೆಗಳ ಹಾವಳಿಯನ್ನು ತಡೆಯಲು ಎಷ್ಟೇ ಪ್ರತಿಭಟನೆ ಮಾಡಿದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಹಿಡಿಯಲು ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಾನೆಗಳ ದಾಳಿ ಹತ್ತಾರು ಎಕರೆ ಕಾಫಿ ಬೆಳೆ ನಾಶ-
ಮರಿಗಳು ಸೇರಿದಂತೆ ಬರೋಬ್ಬರಿ 25 ರಿಂದ 30 ಕಾಡಾನೆಗಳ ಹಿಂಡು ಕಾμ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸಿ ಹತ್ತರು ಎಕರೆ ಕಾಫಿ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಅಬ್ಬನ ಗ್ರಾಮದಲ್ಲಿ ನಡೆದಿದೆ. ಅಬ್ಬನ ಗ್ರಾಮ ಹಾಗೂ ಸುತ್ತಲಿನ ನೂರಾರು ಎಕರೆಯಲ್ಲಿದ್ದ ಕಾμ-ಮೆಣಸು-ಅಡಿಕೆ ಹಾಗೂ ಬಾಳೆ ನಾಶವಾಗಿದೆ. ಅಷ್ಟು ದೊಡ್ಡ ಆನೆಗಳ ಗುಂಪು ದಾಳಿ ಮಾಡುವುದಿರಲಿ, ತೋಟದಲ್ಲಿ ಸುಮ್ಮನೆ ನಡೆದು ಹೋದರೂ ಬೆಳೆ ಸಂಪೂರ್ಣ ನಾಶವಾಗುತ್ತದೆ.
ಗ್ರಾಮದ ಚಂದ್ರ ಶೆಟ್ಟಿ, ಕೃಷ್ಣಯ್ಯ, ಶ್ರೀನಿವಾಸ್ ಸೇರಿದಂತೆ ಹತ್ತಾರು ಜನರ ತೋಟಗಳ ಪರಿಸ್ಥಿತಿ ಇದೇ ಆಗಿದೆ. ಆನೆಗಳ ದಾಳಿಯಿಂದ ತೋಟದ ಸ್ಥಿತಿ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ 3-4 ಬಾರಿ ಕರೆ ಮಾಡಿದ್ದು, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಆನೆಗಳನ್ನ ಕಾಡಿಗಟ್ಟಿ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮರಿಗಳು ಸೇರಿದಂತೆ ಬರೋಬ್ಬರಿ 25 ರಿಂದ 30 ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸಿ ಹತ್ತರು ಎಕರೆ ಕಾಫಿ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಅಬ್ಬನ ಗ್ರಾಮದಲ್ಲಿ ನಡೆದಿದೆ. ಅಬ್ಬನ ಗ್ರಾಮ ಹಾಗೂ ಸುತ್ತಲಿನ ನೂರಾರು ಎಕರೆಯಲ್ಲಿದ್ದ ಕಾಫಿ -ಮೆಣಸು-ಅಡಿಕೆ ಹಾಗೂ ಬಾಳೆ ನಾಶವಾಗಿದೆ.
ಅಷ್ಟು ದೊಡ್ಡ ಆನೆಗಳ ಗುಂಪು ದಾಳಿ ಮಾಡುವುದಿರಲಿ, ತೋಟದಲ್ಲಿ ಸುಮ್ಮನೆ ನಡೆದು ಹೋದರೂ ಬೆಳೆ ಸಂಪೂರ್ಣ ನಾಶವಾಗುತ್ತದೆ. ಗ್ರಾಮದ ಚಂದ್ರ ಶೆಟ್ಟಿ, ಕೃಷ್ಣಯ್ಯ, ಶ್ರೀನಿವಾಸ್ ಸೇರಿದಂತೆ ಹತ್ತಾರು ಜನರ ತೋಟಗಳ ಪರಿಸ್ಥಿತಿ ಇದೇ ಆಗಿದೆ. ಆನೆಗಳ ದಾಳಿಯಿಂದ ತೋಟದ ಸ್ಥಿತಿ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ 3-4 ಬಾರಿ ಕರೆ ಮಾಡಿದ್ದು, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಆನೆಗಳನ್ನ ಕಾಡಿಗಟ್ಟಿ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.