ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ
Team Udayavani, Oct 23, 2021, 4:57 PM IST
ತುಮಕೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ನಡೆಯುವ ಕನ್ನಡ ತಾಯಿ ಭುವನೇಶ್ವರಿ ದೇವಿ ಮೆರವಣಿಗೆ ಯಲ್ಲಿ ಕೃಷಿ, ತೋಟಗಾರಿಕೆ, ಜಿಪಂ, ಪ್ರಾದೇಶಿಕ ಸಾರಿಗೆ ಕಚೇರಿ, ಕೆ.ಎಸ್.ಆರ್.ಟಿ.ಸಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷದಂತೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ನಾಡ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳ ಬೇಕು ಎಂದು ಸೂಚಿಸಿದರು.
ಪ್ರತಿ ವರ್ಷದಂತೆ ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥ ವಾಹನದ ಲ್ಲಿರಿಸಿ ಸಾಂಸ್ಕೃತಿಕ ಕಲಾ ತಂಡಗಳು ಹಾಗೂ ಸ್ತಬ್ಧಚಿತ್ರ ಗಳೊಂ ದಿಗೆ ಡೀಸಿ ಕಾರ್ಯಾಲಯದ ಮುಂಭಾಗದಿಂದ ಬೆಳಗ್ಗೆ 8 ಗಂಟೆಗೆ ಮೆರವಣಿಗೆ ಪ್ರಾರಂಭಿಸಿ, ನಗರದ ಅಶೋಕ ರಸ್ತೆ, ಟೌನ್ ಹಾಲ್ ವೃತ್ತ, ಬಿ.ಹೆಚ್. ರಸ್ತೆ, ಭದ್ರಮ್ಮ ವೃತ್ತದ ಮೂಲಕ ಅಂತಿಮವಾಗಿ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಸೇರಬೇಕೆಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸೂಕ್ತ ವ್ಯವಸ್ಥೆ ಮಾಡಿ: ರಾಜ್ಯೋತ್ಸವ ದಿನದಂದು ಬೆಳಗ್ಗೆ 9 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಮತ್ತು ಗೌರವ ರಕ್ಷೆ ಸ್ವೀಕಾರ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡುವ ಕಾರ್ಯಕ್ರಮ ನಡೆಯಲಿದ್ದು, ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಇದನ್ನೂ ಓದಿ:- ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ
ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ: ರಾಜ್ಯೋತ್ಸದ ಹಿನ್ನೆಲೆ ಯಲ್ಲಿ ಅ.31 ಮತ್ತು ನ.1ರಂದು ಎರಡು ದಿನಗಳ ಕಾಲ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಹೂವಿನಿಂದ ಅಲಂಕರಿಸಿದ ಕಮಾನು ಮತ್ತು ಟೌನ್‌ಹಾಲ್ ವೃತ್ತ, ಶ್ರೀಶಿವ ಕುಮಾರ ಸ್ವಾಮಿ ವೃತ್ತ, ಭದ್ರಮ್ಮ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ವೃತ್ತ ಮತ್ತು ಹೊರಪೇಟೆ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತ ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಕ್ಕೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯೋತ್ಸವದಂದು ಕಾಲೇಜು ಮೈದಾನದಲ್ಲಿ ಆ್ಯಂಬುಲೆನ್ಸ್ ವಾಹನ, ಸ್ಯಾನಿಟೈಸರ್, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕೋವಿಡ್-19 ನಿಯಮ ಉಲ್ಲಂಘನೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪ ವಿಭಾಗಾಧಿಕಾರಿ ಅಜಯ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇ ಶಕ ಶ್ರೀನಿವಾಸ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.