ಕ್ರೀಡಾಪಟುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡಲು ನಿರ್ಧಾರ: ಸಚಿವ ನಾರಾಯಣ ಗೌಡ
ರಾಜ್ಯ ಸರ್ಕಾರದಿಂದ ಕ್ರೀಡೆಗೆ ಉತ್ತೇಜನ
Team Udayavani, Oct 23, 2021, 7:32 PM IST
ದಾವಣಗೆರೆ: ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕ್ರೀಡೆಗೆ ಉತ್ತೇಜನ ಹಾಗೂ ಮೂಲ ಸೌಲಭ್ಯ ವೃದ್ಧಿಪಡಿಸುವ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲಾಗಿದೆ. ಸಮಿತಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು ವರದಿ ಬಂದ ಬಳಿಕ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಕ್ರೀಡೆ, ಯುವಜನ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ. ನಾರಾಯಣ ಗೌಡ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗೆ ಶಕ್ತಿ ಕೊಡುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಮುಂದಿನ ಒಲಂಪಿಕ್‌ಗೆ ರಾಜ್ಯದಿಂದ 75 ಕ್ರೀಡಾಪಟುಗಳನ್ನು ಕಳುಹಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಕ್ರೀಡಾಪಟುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಕೆಲಸವೂ ನಡೆದಿದ್ದು, 50 ಮಕ್ಕಳನ್ನು ವಿವಿಧ ಸಂಸ್ಥೆಗಳು ದತ್ತು ಸ್ವೀಕರಿಸಿವೆ ಎಂದರು. ಕಳೆದ ನಾಲ್ಕು ವರ್ಷದಿಂದ ಜಕ್ಕೂರು ವಿಮಾನ ನಿಲ್ದಾಣದ ಪೈಲೆಟ್ ತರಬೇತಿ ಸ್ಥಗಿತಗೊಂಡಿತ್ತು. ಈಗ ಅದನ್ನು ಸರಿಪಡಿಸಿ ವಿಮಾನ ಚಾಲಕರ ತರಬೇತಿಗಾಗಿ ಏಳು ವಿಮಾನಗಳನ್ನು ಸಿದ್ಧಪಡಿಸಲಾಗಿದೆ. ಮುಂದಿನ ದಿನಗಳಲ್ಲಿ 100 ಪೈಲೆಟ್‌ಗಳನ್ನು ಮಾಡಿ ಅವರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಸರ್ಕಾರಿ ನೌಕರರ ಸಂಘಟನೆಯ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಮುಖ್ಯಮಂತ್ರಿಯವರ ಮನವೊಲಿಸುತ್ತೇನೆ. ಸರ್ಕಾರ ಸದಾ ನೌಕರರ ಸಂಘಟನೆಗೆ ಸಹಕಾರಿಯಾಗಿರುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಸರ್ಕಾರ ಈ ಮೊದಲು ಸರ್ಕಾರಿ ನೌಕರರ ಕೀಡಾಕೂಟಕ್ಕೆ 30-40 ಲಕ್ಷ ರೂ. ನೀಡುತ್ತಿತ್ತು. ಇದೇ ಮೊದಲ ಬಾರಿಗೆ ಪ್ರಸ್ತುತ ಸರ್ಕಾರ ಕೀಡಾಕೂಟಕ್ಕೆ ಎರಡು ಕೋಟಿ ರೂ. ನೀಡಿ ಪ್ರೋತ್ಸಾಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಆರೋಗ್ಯ ಸೇವೆ ಸಿಗುವ ವ್ಯವಸ್ಥೆ ಜಾರಿಗೆ ಬರಲಿದೆ. 2022ಕ್ಕೆ ಹೊಸ ವೇತನ ಆಯೋಗ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಎನ್‌ಪಿಎಸ್ ರದ್ದುಗೊಳಿಸಲು ಕೋರಲಾಗಿದೆ. ಇನ್ನು ಎರಡೂ¾ರು ತಿಂಗಳಲ್ಲಿ ಬೆಂಗಳೂರಿನಲ್ಲಿ ಆರು ಲಕ್ಷ ನೌಕರರನ್ನು ಸೇರಿಸಿ ಸಮಾವೇಶ ಮಾಡಿ ಸರ್ಕಾರದ ಮುಂದೆ ಬೇಡಿಕೆ ಮಂಡಿಸುವ ಯೋಜನೆಯೂ ಇದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಪಂ ಸಿಇಒ ವಿಜಯಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಇದ್ದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ 100 ಕೋಟಿ ಕೋವಿಡ್ ಲಸಿಕೆ ಹಾಕಿ ಸಾಧನೆಗೈದ ಹಿನ್ನೆಲೆಯಲ್ಲಿ ಬಲೂನ್ ಹಾರಿಸಿ ಸಂಭ್ರಮಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.