ಡ್ರೋಣ್ ಮೂಲಕ ಕೀಟನಾಶಕ ಸಿಂಪರಣೆ
Team Udayavani, Oct 24, 2021, 9:41 AM IST
ಕಲಬುರಗಿ: ರೈತರ ಹೊಲಗಳಿಗೆ ಇಸ್ರೇಲ್ ಮಾದರಿಯಲ್ಲಿ ಡ್ರೋಣ್ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯಿಂದ ಪ್ರಾಯೋಗಿಕವಾಗಿ ಜಾರಿ ತರಲು ಮುಂದಾಗಲಾಗಿದೆ ಎಂದು ಮಂಡಳಿ ಅಧ್ಯಕ್ಷರಾಗಿರುವ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.
ನಗರದ ಆಳಂದ ರಸ್ತೆಯ ಬೆಣ್ಣೂರು ಕಲ್ಯಾಣ ಮಂಟಪದಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ಒಂಭತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎರಡು ಸಾವಿರ ರೈತರಿಗೆ ಆರು ಕೋಟಿ ರೂ. ಬಡ್ಡಿ ರಹಿತ ಬೆಳೆಸಾಲ ವಿತರಿಸಿ ಅವರು ಮಾತನಾಡಿದರು.
ಮಂಡಳಿ ವ್ಯಾಪ್ತಿಯ ಏಳು ಜಿಲ್ಲೆಗಳ ತಲಾ ಒಂದು ವಿಧಾನಸಭೆ ಕ್ಷೇತ್ರದಲ್ಲಿ ಡ್ರೋಣ್ ಮೂಲಕ ಕೀಟನಾಶಕ ಸಿಂಪಡಿಸುವ ಯೋಜನೆಯೊಂದನ್ನು ಜಾರಿಗೆ ತರಲಾಗುತ್ತಿದೆ. ಇದು ಯಶಸ್ವಿಯಾದಲ್ಲಿ ಉಳಿದೆಡೆ ವಿಸ್ತರಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕದ ಪ್ರತಿಭಾನ್ವಿತ ವಿದ್ಯಾರ್ಥಿಗಳು ವೈದ್ಯಕೀಯ-ಇಂಜಿನೀಯರಿಂಗ್ ಸೇರಿದಂತೆ ಇತರ ಕೋರ್ಸುಗಳನ್ನು ಅಭ್ಯಸಿಸುತ್ತಿರುವ ಹಾಗೂ ಐಎಎಸ್, ಕೆಎಎಸ್ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಅನುಕೂಲವಾಗಲೆಂದು ಬೆಂಗಳೂರಿನಲ್ಲಿ ಕೆಕೆಆರ್ ಡಿಬಿ ಮಂಡಳಿಯಿಂದ 60 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ವಸತಿ ನಿಲಯದ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ನಡೆದಿದೆ ಎಂದು ಹೇಳಿದರು.
ಇದನ್ನೂ ಓದಿ: ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ
ಕಲಬುರಗಿ ದಕ್ಷಿಣ ಮತಕ್ಷೇತ್ರದ 30 ಹಳ್ಳಿಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 11 ಕೆರೆಗಳನ್ನು ಬೆಣ್ಣೆ ತೋರಾ ಜಲಾಶಯದಿಂದ ನೀರು ಹರಿಸಿ, ಭರ್ತಿ ಮಾಡುವ ಹಾಗೂ ರೈತರ ಹೊಲಗಳಿಗೆ ನೀರುಣಿಸುವ ಮಾದರಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಅದೇ ರೀತಿ ಎಂಎಸ್ಕೆ ಮಿಲ್ ಪ್ರದೇಶದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಎರಡು ಎಕರೆ ವಿಸ್ತೀರ್ಣದಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದು ನೆರೆದ ರೈತ ಸಮೂಹಕ್ಕೆ ತಿಳಿ ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಪ್ರಧಾಮಂತ್ರಿ ಕಿಸಾನ್ ಸಮ್ಮಾನ ನಿಧಿ ಯಡಿ ನೇರವಾಗಿ ವರ್ಷಕ್ಕೆ ರೈತರ ಖಾತೆಗೆ ಆರು ಸಾವಿರ ರೂ. ಹಾಗೂ ರಾಜ್ಯ ಸರ್ಕಾರದಿಂದ ಆರು ಸಾವಿರ ರೂ. ಜಮಾ ಮಾಡಲಾಗುತ್ತಿದೆ. ಅದೇ ರೀತಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ರೈತರ ಮಕ್ಕಳಿಗೆ ಶಿಷ್ಯ ವೇತನ ಜಾರಿ ಯೋಜನೆ ಜಾರಿ ಮಾಡಿದ್ದಾರೆ. ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಬ್ಯಾಂಕ್ ಉಪಾಧ್ಯಕ್ಷ ಸುರೇಶ ಸಜ್ಜನ್, ನಿರ್ದೇಶಕರಾದ ಶರಣಬಸಪ್ಪ ಪಾಟೀಲ ಅಷ್ಠಗಾ, ಅಶೋಕ ಸಾವಳೇಶ್ವರ, ಎಂಡಿ ಚಿದಾನಂದ ನಿಂಬಾಳ, ಕಾಡಾ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.