ಎರಡು ಸಾವಿರ ರೈತರಿಗೆ 6 ಕೋಟಿ ರೂ. ಸಾಲ ವಿತರಣೆ


Team Udayavani, Oct 24, 2021, 10:07 AM IST

4former

ಕಲಬುರಗಿ: ಬೇರೆ ಜಿಲ್ಲೆಗಳಲ್ಲಿ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಸಾಲ ಸಿಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲೂ ಈಗ ನೀಡಲಾಗುತ್ತಿರುವ ಸಾಲದ ಪ್ರಮಾಣ ಹತ್ತು ಪಟ್ಟು ಹೆಚ್ಚಿಗೆ ದೊರಕುವಂತೆ ಆಗಲು ತಾವು ಯತ್ನಿಸುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ನಗರದ ಆಳಂದ ರಸ್ತೆಯ ಬೆಣ್ಣೂರು ಕಲ್ಯಾಣ ಮಂಟಪದಲ್ಲಿ ದಕ್ಷಿಣ ಮತಕ್ಷೇತ್ರದ ಸಿಂದಗಿ, ಪಟ್ಟಣ, ಭೀಮಳ್ಳಿ, ಸಾವಳಗಿ, ಕೋಟನೂರ ಡಿ, ಹುಣಸಿಹಡಗಿಲ್‌, ಶರಣಸಿರಸಗಿ, ಹೀರಾಪುರ, ಮಿಣಜಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎರಡು ಸಾವಿರ ರೈತರಿಗೆ ಆರು ಕೋಟಿ ರೂ, ಬಡ್ಡಿ ರಹಿತ ಬೆಳೆಸಾಲ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರಿಗೆ ಹೆಚ್ಚಿನ ಪ್ರಮಾಣದ ಸಾಲ ದೊರಕಬೇಕೆಂದರೆ ಬ್ಯಾಂಕ್‌ ಪುನಶ್ಚೇತನಗೊಳ್ಳಬೇಕು. ಪಡೆದ ಸಾಲ ಸಕಾಲಕ್ಕೆ ಮರುಪಾವತಿಸಬೇಕು. ಈ ಹಿಂದೆ ರೈತರಿಗೆ ಸಾಲವನ್ನು ಅತ್ಯಂತ ಕನಿಷ್ಟವಾಗಿ ನೀಡಲಾಗುತ್ತಿತ್ತು. ಈಗ ಹೆಚ್ಚಿಗೆ ಮಾಡಲಾಗಿದೆ. ಇದು ತಮ್ಮ ಸರ್ಕಾರ ರೈತಪರ ಎಂಬುದನ್ನು ನಿರೂಪಿಸುತ್ತದೆ ಎಂದರು.

ಉಪಾಧ್ಯಕ್ಷ ಸುರೇಶ ಸಜ್ಜನ್‌ ಮಾತನಾಡಿ, ಬ್ಯಾಂಕ್‌ ಈಗ ಸುಧಾರಣೆಯತ್ತ ಹೆಜ್ಜೆ ಹಾಕುತ್ತಿದೆ. ಹೀಗಾಗಿ ರೈತರಲ್ಲಿ ಮಂದಹಾಸ ಮೂಡಿದೆ. ಮುಂದಿನ ದಿನಗಳಲ್ಲಿ ಹಿರಿಯ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಾ ಅಧ್ಯಕ್ಷರಾಗಲಿದ್ದಾರೆ ಎಂದರು.

ಯುಕೆಪಿ ಕಾಡಾ ಆಡಳಿತಾಧಿಕಾರಿ ಶರಣಬಸಪ್ಪ ಬೆಣ್ಣೂರು ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಯಲ್ಲಿ ಪ್ರಾಮಾಣಿಕತೆ ಯೇ ಮುಖ್ಯ. ಹೀಗಾಗಿ ಪಡೆದ ಸಾಲ ಸಕಾಲದಲ್ಲಿ ಮರು ಪಾವತಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಲೆಹೆಂಗದಲ್ಲಿ ವಿದೇಶಕ್ಕೆ ಮಾದಕ ವಸ್ತುಗಳ ರಫ್ತು

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಾ, ರೈತರಿಗೆ ಸಾಲ ನೀಡದಿರುವ ಮಟ್ಟಿಗೆ ತಲುಪಿದ್ದ ಬ್ಯಾಂಕ್‌ ಪುನಶ್ಚೇತನಗೊಳ್ಳಲು ಹಿಂದಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಇಚ್ಛಾಶಕ್ತಿ ಕಾರಣವಾಗಿದೆ. ಮಧ್ಯಾಮಾವಧಿ ಸಾಲ ಮನ್ನಾ ಮಾಡಿರುವುದು ಹಾಗೂ 10 ಕೋಟಿ ರೂ. ಶೇರು ನೀಡಿರುವುದು, ಜತೆಗೆ 200 ಕೋಟಿ ರೂ. ಅಪೆಕ್ಸ್‌ ದಿಂದ ಸಾಲ ದೊರಕಿಸುವಂತೆ ಮಾಡಿರುವುದೇ ಕಾರಣ ಎಂದರು.

ಮತ್ತೋರ್ವ ನಿರ್ದೇಶಕ ಅಶೋಕ ಸಾವಳೇಶ್ವರ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ಎಂಡಿ ಚಿದಾನಂದ ನಿಂಬಾಳ, ಜನರಲ್‌ ಮ್ಯಾನೇಜರ ಮುತ್ತುರಾಜ, ತಹಶೀಲ್ದಾರ್‌ ಪ್ರಕಾಶ ಕುದುರೆ, ಸಹಾಯಕ ಕೃಷಿ ಸಹಾಯಕ ನಿರ್ದೇಶಕ ಚಂದ್ರಕಾಂತ ಜೀವಣಗಿ, ಪ್ರಮುಖರಾದ ರಾಜೇಂದ್ರ ಕರೇಕಲ್‌, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹಣಮಂತರಾವ ಭೈರಾಮಡಗಿ, ಲಿಂಗರಾಜ ಧುಳಗೊಂಡ, ಸಂಗಮೇಶ್ವರ ಚೋರಗಸ್ತಿ, ಶಿವರಾಯ ಶಿವಮೂರ್ತಿ, ಶಿವರಾಜ ಎಸ್‌. ಸಿರಸಗಿ ಕೋಟನೂರ, ಪ್ರಭುಲಿಂಗ ಮೂಲಗೆ, ಗಂಗಾಧರ ಪೊಲೀಸ್‌ ಪಾಟೀಲ, ಲಿಂಗಣಗೌಡ ಪಾಟೀಲ, ಬ್ಯಾಂಕ್‌ ಅಧಿಕಾರಿಗಳಾದ ಬಸವರಾಜ ಕಲ್ಲೂರ, ರುದ್ರಗೌಡ, ಸದಲಾಪುರ, ಪ್ರವೀಣ, ಮಲ್ಲಿಕಾರ್ಜುನ, ಗಣಪುರ, ಪೂಜಾರಿ ಮುಂತಾದವರಿದ್ದರು.

ಇದೇ ಸಂದರ್ಭದಲ್ಲಿ 250 ರೈತರಿಗೆ ಬೀಜ, ಎಂ.ಎನ್‌. ಲಿಕ್ವಿಡ್‌ ಕೀಟನಾಶಕ ಹಾಗೂ 94 ಸಿ ಅಡಿಯಲ್ಲಿ ರೈತರಿಗೆ ಹಕ್ಕುಪತ್ರಗಳನ್ನು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ವಿತರಿಸಿದರು. ಶಿವಶಂಕರ ಬಿರಾದಾರ ನಿರೂಪಿಸಿದರು, ಬಿ.ಜಿ. ಕಲ್ಲೂರ ಸ್ವಾಗತಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.