ಅಕ್ರಮ ಚಟುವಟಿಕೆಗಳಿಗೆ ಕಡಿವಾಣ
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್
Team Udayavani, Oct 24, 2021, 12:13 PM IST
ಬೆಂಗಳೂರು: ಸಾರ್ವಜನಿಕರ ಮೇಲೆ ದೌರ್ಜನ್ಯ, ಡ್ರಗ್ಸ್ ಮಾರಾಟ, ವ್ಯಸನಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದರು. ಮಾಸಿಕ ಜನಸಂಪರ್ಕ ದಿವಸ್ ಹಿನ್ನೆಲೆಯಲ್ಲಿ ಶನಿವಾರ ವೈಯಾಲಿಕಾವಲ್ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿ ಮಾತನಾಡಿದರು.
ಸಾರ್ವಜನಿಕರು ವೈಯಾಲಿಕಾವಲ್, ಗುಟ್ಟಹಳ್ಳಿ ಸುತ್ತ ಮುತ್ತಲ ನಿರ್ಜನ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಡ್ರಗ್ಸ್ ಸೇವಿಸಿ ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಜತೆಗೆ ಅಸಭ್ಯವಾಗಿ ವರ್ತಿಸುತ್ತಿ ದ್ದಾರೆ. ಮುಖ್ಯವಾಗಿ ಗುಟ್ಟಹಳ್ಳಿ ಬಸ್ ನಿಲ್ದಾಣದಲ್ಲಿ ಕಾಲೇಜು ಯುವಕ- ಯುವತಿಯರು ಕಾಲೇಜು ಅಥವಾ ಮನೆಗೆ ತೆರಳದೆ ಬಹು ಸಮಯ ಬಸ್ ನಿಲ್ದಾಣದಲ್ಲೇ ಹರಟೆ ಹೊಡೆಯುತ್ತಾ ನಿಲ್ಲುವುದರ ಜತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಾರೆ.
ಅದರಿಂದ ಈ ಮಾರ್ಗವಾಗಿ ಓಡಾಡುವ ಮಹಿಳೆಯರು ಮತ್ತು ಮಕ್ಕಳಿಗೆ ಇರಿಸು ಮುರಿಸಾಗುತ್ತಿದೆ ಎಂದು ಸ್ಥಳೀಯರೊಬ್ಬರು ದೂರಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತರು, ಅಪ ರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವ ಜನಿಕರ ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಬಿಡುವ ಸಮಯದಲ್ಲಿ ಹೆಚ್ಚಿನ ಪೊಲೀಸ್ ಗಸ್ತು ಓಡಾ ಡುವಂತೆ ಸೂಚಿಸಲಾಗು ವುದು. ಅಲ್ಲದೆ, ಪೋಷಕರು ಕೂಡ ತಮ್ಮ ಮಕ್ಕಳಿಗೆ ಅಸಭ್ಯ ವರ್ತನೆ ಮಾಡದಂತೆ ತಿಳಿಹೇಳಿ ಸರಿ ದಾರಿಗೆ ತರಬೇಕು ಎಂದು ಇದೇ ವೇಳೆ ಸಲಹೆ ಕೂಡ ನೀಡಿದರು. ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾರ್ ಗಳಲ್ಲಿ ಮದ್ಯಪ್ರಿಯರು, ಬಾರ್‌ನಿಂದ ಹೊರಗೆ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುತ್ತಾರೆ. ಮದ್ಯದ ಅಮಲಿನಲ್ಲಿ ಸಾರ್ವಜನಿಕರ ಜತೆ ಕಾದಾಟ ಕ್ಕಿಳಿಯುತ್ತಾರೆ ಎಂದು ಮತ್ತೂಬ್ಬ ಸಾರ್ವಜನಿಕರು ದೂರು ನೀಡಿದರು. ಅದಕ್ಕೆ ಪ್ರತಿಕ್ರಿಯೆಸಿದ ಆಯುಕ್ತರು, ಬಾರ್ ಮಾಲೀಕರ ಜತೆ ಮಾತುಕತೆ ನಡೆಸಿ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.