ಕಾಲು-ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ


Team Udayavani, Oct 24, 2021, 12:25 PM IST

10kaalubaayi

ಬೀದರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ 2ನೇ ಸುತ್ತಿನ ಕಾಲು ಮತ್ತು ಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಇಲಾಖೆಯ ಸಚಿವ ಪ್ರಭು ಚವ್ಹಾಣ್‌ ಅವರು ಶನಿವಾರ ಔರಾದ ತಾಲೂಕಿನ ವಡಗಾಂವ ಗ್ರಾಮದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಲಸಿಕೆಯನ್ನು ವರ್ಷದಲ್ಲಿ ಎರಡು ಬಾರಿ ನೀಡಲಾಗುತ್ತದೆ. ಇದೀಗ ಅ. 23ರಿಂದ ಆರಂಭಿಸಿ ನ. 20ರವರೆಗೆ ಲಸಿಕೆ ನೀಡಲಾಗುತ್ತದೆ. ಕಾಲು ಮತ್ತು ಬಾಯಿ ರೋಗ ಬಂದಾಗ ಚಿಕಿತ್ಸೆಗೆ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಅರಿಯಬೇಕು. ಪಶು ವೈದ್ಯರು ಮನೆಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಕೊಡಿಸಬೇಕು ಎಂದು ಮನವಿ ಮಾಡಿದರು.

ಮೊದಲ ಹಂತದಲ್ಲಿ ರಾಜ್ಯದ ಗಡಿ ಭಾಗದ ಜಿಲ್ಲೆಗಳಾದ ಬೀದರ, ಕಲಬುರಗಿ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ ಮತ್ತು ತುಮಕೂರ ಜಿಲ್ಲೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು 6 ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸುವುದೊಂದೇ ಪರಿಹಾರ ಮಾರ್ಗವಾಗಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ರಾಜ್ಯದ ಗಡಿಭಾಗದ ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 25.56 ಲಕ್ಷ ಕಾಲುಬಾಯಿ ರೋಗ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದೆ. ಕಾಲುಬಾಯಿ ರೋಗದ ವಿರುದ್ಧ ಎಲ್ಲ ದನ ಎಮ್ಮೆ ಕರುಗಳಿಗೆ ಉಚಿತವಾಗಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ಪ್ರತಿ ಜಾನುವಾರುವಿಗೆ ಪ್ರತ್ಯೇಕ ಸಿರಿಂಜ್‌ ಮತ್ತು ನೀಡಲ್‌ಗ‌ಳನ್ನು ಬಳಸಲಾಗುತ್ತದೆ. ಲಸಿಕಾಕರಣಕ್ಕೆ ಅಧಿಕಾರಿಗಳ ತಂಡ ರಚಿಸಲಾಗಿದೆ. ಲಸಿಕಾದಾರರು ನಿಮ್ಮ ಗ್ರಾಮಕ್ಕೆ, ಮನೆಗೆ ಬಂದು ಲಸಿಕೆ ಹಾಕುವರು. ಕಾಲುಬಾಯಿ ರೋಗ ಲಸಿಕಾ ಅಭಿಯಾನದ ತಂಡವಾರು ವೇಳಾಪಟ್ಟಿ ಮಾಹಿತಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಲಸಿಕಾ ಅಭಿಯಾನದ ವೇಳೆ ನೆರವಿಗಾಗಿ ಪಶುಪಾಲನಾ ಸಹಾಯವಾಣಿ 8277100200 ಸಂಪರ್ಕಿಸಬುದು. ಲಸಿಕಾ ಅಭಿಯಾನದ ಉಸ್ತುವಾರಿಗಾಗಿ ಜಿಲ್ಲಾ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ರೈತರು ತಪ್ಪದೇ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವಲಯವನ್ನಾಗಿಸಬೇಕು ಎಂದು ಮನವಿ ಮಾಡಿದರು.

ಗ್ರಾ.ಪಂ ಅಧ್ಯಕ್ಷೆ ತ್ರಿಶೂಲಬಾಯಿ ರೋಹಿದಾಸ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಭಾಸ್ಕರ್‌ ನಾಯಕ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ಬಂಡೆಪ್ಪ ಕಂಟೆ, ಪಶುಪಾಲನಾ ಇಲಾಖೆಯ ಜಂಟಿ ನಿರ್ದೇಶಕ ಡಾ| ಎ.ಕೆ. ಚಂದ್ರಶೇಖರ, ಮುಖ್ಯ ಪಶು ವೈದ್ಯಾಧಿಕಾರಿ ಡಾ| ಗೌತಮ ಅರಳಿ, ಪಶು ಅಧಿಕಾರಿಗಳಾದ ಡಾ| ಸುನೀಲ ಕಾಂಬಳೆ, ಡಾ| ರಾಜಕುಮಾರ, ಜಗನ್ನಾಥ, ರವಿ ಟೋಪಾರೆ, ಹಾವಗಿರಾವ್‌ ಬೋರಾಳೆ ಇನ್ನಿತರರಿದ್ದರು. ಡಾ| ನರಸಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-asss

Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.