ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
Team Udayavani, Oct 24, 2021, 2:06 PM IST
ಚಿಕ್ಕಬಳ್ಳಾಪುರ: ಉದ್ಯೋಗ ಖಾತ್ರಿ ಯೋಜನೆಯಡಿ ದೊರೆಯುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್ ಸಲಹೆ ನೀಡಿದರು. ತಾಲೂಕಿನ ಪಟ್ರೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಯುತ್ತಿರುವ ಕುಂಟೆ, ಸ್ಮಶಾನ, ಪೋಷಕ ಕಾಲುವೆ ಅಭಿವೃದ್ಧಿ ಸೇರಿ ಇನ್ನಿತರ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಗ್ರಾಮಾಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು, ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಲಭ್ಯ ವೃದ್ಧಿಕೊಳ್ಳಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ನರೇಗಾ ಯೋಜನೆ ಮೂಲಕ ಈಗಾಗಲೇ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸಹಿತ ಇನ್ನಿತರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿರುವ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗಿದೆ. ಜೊತೆಗೆ ಮಳೆ ನೀರು ಸಂರಕ್ಷಣೆ ಮಾಡಲು ಬಹುಕಮಾನ್ ಚೆಕ್ ಡ್ಯಾಮ್, ಪೋಷಕ ಕಾಲುವೆಗಳನ್ನು ಅಭಿವೃದ್ಧಿಗೊಳಿಸಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರಿಂದ ಜಿಲ್ಲಾದ್ಯಂತ ನರೇಗಾ ಯೋಜನೆಯಡಿ ನಿರ್ಮಿಸಿರುವ ಬಹುತೇಕ ಕೆರೆ-ಕುಂಟೆ, ಕಲ್ಯಾಣಿ ಮತ್ತು ಬಹುಕಮಾನ್ ಚೆಕ್ ಡ್ಯಾಂಗೆ ನೀರು ಹರಿದು ಬಂದು ಅಂತರ್ಜಲ ವೃದ್ಧಿ ಆಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:- ನಾಲ್ಕು ದಿನಗಳ ಆಮರಣಾಂತ ಸತ್ಯಾಗ್ರಹ ಅಂತ್ಯ
ನೀರು ಸಂರಕ್ಷಣೆ ಮಾಡಲು ಮನವಿ: ಜಿಲ್ಲೆಯಲ್ಲಿ ಹಲವು ವರ್ಷಗಳ ಬಳಿಕ ಜಲಮೂಲಗಳಾದ ಕೆರೆ-ಕುಂಟೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿದೆ. ರೈತರು ನೀರು ಪೋಲಾಗದಂತೆ ಜಾಗೃತಿ ವಹಿಸಬೇಕು. ನೀರು ಮಿತ ಬಳಕೆ ಮಾಡಿಕೊಂಡು ಅದರ ಮಹತ್ವದ ಕುರಿತು ಜನರಲ್ಲಿ ಅರಿವು ಮೂಡಿಸಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು. ಪಿಡಿಒ ಎಸ್.ಎನ್.ವಿಜಯೇಂದ್ರಕುಮಾರ್, ನರೇಗಾ ತಾಂತ್ರಿಕ ಸಂಯೋಜಕ ಮಂಜುನಾಥ್, ನರೇಗಾ ಎಂಜಿನಿಯರ್ ಶಿವಕುಮಾರ್, ಜಿಪಂ ಎಡಿಪಿಸಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.