ನಮಗೆ ಜೆಡಿಎಸ್ ಮುಗಿಸುವ ಅಗತ್ಯವಿಲ್ಲ, ದೇವೇಗೌಡರ ಹೇಳಿಕೆ ಸರಿಯಲ್ಲ: ಸಿಎಂ ಬೊಮ್ಮಾಯಿ
Team Udayavani, Oct 25, 2021, 12:47 PM IST
ವಿಜಯಪುರ: ವಿಧಾನಸೌಧಕ್ಕೆ ಬೀಗ ಜಡಿದು ಪ್ರಚಾರಕ್ಕೆ ಬಂದ ಸಚಿವರು ಎಂದು ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಾರದಲ್ಲಿ ಎರಡು ಮೂರು ದಿನ ನಮ್ಮ ಸಚಿವರು ವಿಧಾನಸೌಧಕ್ಕೆ ಭೇಟಿ ನೀಡುತ್ತಿದ್ದಾರೆ. ಯಾವುದೇ ಸರ್ಕಾರಿ ಕೆಲಸಗಳು ನಿಂತಿಲ್ಲ ಎಂದರು.
ಈಗ ಆರೋಪ ಮಾಡುವವರು ಈ ಹಿಂದೆ ಏನೆಲ್ಲಾ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ನಾನು ಮಂತ್ರಿಗಳಿಗೆ ಏನು ಸೂಚನೆ ಕೊಡಬೇಕೋ ಕೊಟ್ಟಿದೇನೆ, ಯಾವುದೇ ಕೆಲಸಗಳನ್ನು ನಿಂತಿಲ್ಲ ಎಂದರು.
ಇದನ್ನೂ ಓದಿ:ಸಿಲೆಬಸ್ ಕಡಿತದ ಯೋಚನೆಯಿಲ್ಲ, ರಜೆದಿನ ಬಳಸಿ ಪಾಠ ಮಾಡುತ್ತೇವೆ: ಸಚಿವ ಬಿ.ಸಿ.ನಾಗೇಶ್
ಪ್ರಾದೇಶಿಕ ಪಕ್ಷವನ್ನು ಬಿಜೆಪಿ, ಕಾಂಗ್ರೆಸ್ ಮುಗಿಸುತ್ತವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆ ಸರಿಯಲ್ಲ. ಜೆಡಿಎಸ್ ಅನ್ನು ಮುಗಿಸುವ ಪ್ರಶ್ನೆಯೂ ಇಲ್ಲ, ಅದರ ಅಗತ್ಯವೂ ಇಲ್ಲ. ನಾವು ನಮ್ಮ ಪಕ್ಷದ ಸಂಘಟನೆಗೆ ಆದ್ಯತೆ ನೀಡುತ್ತಿದ್ದೇವೆ. ಇನ್ನೊಂದು ಪಕ್ಷದ ಕಡೆಗೆ ನಾವು ತಿರುಗಿ ನೋಡುವ ಸ್ಥಿತಿ ಇಲ್ಲ ಎಂದರು.
ಜೆಡಿಎಸ್ ಪರವಾಗಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಹೇಳಿಕೆ ವಿಪರೀತ ಕಲ್ಪನೆಯಷ್ಟೇ, ಅದಕ್ಕೆ ಯಾವುದೇ ಆಧಾರವಿಲ್ಲ, ಅರ್ಥವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.