ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ
Team Udayavani, Oct 26, 2021, 5:28 AM IST
ಮಂಗಳೂರು/ಉಡುಪಿ ಕೋವಿಡ್ ಕಾರಣದಿಂದ ಬಾಗಿಲು ಮುಚ್ಚಿದ್ದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ರ ವರೆಗಿನ ಭೌತಿಕ ತರಗತಿಗಳು ಸೋಮವಾರ ಆರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ ಶೇ. 70ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇ. 85 ಹಾಜರಾತಿ ದಾಖಲಾಗಿದೆ.
ಒಂದೂವರೆ ವರ್ಷದ ಬಳಿಕ ಶಾಲೆಗಳತ್ತ ಹೆಜ್ಜೆ ಹಾಕಿರುವ ಚಿಣ್ಣರನ್ನು ಆಯಾಯ ಶಾಲೆಗಳಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ಶಾಲೆಗಳನ್ನು ತಳಿರು ತೋರಣ, ಸ್ವಾಗತ ಕಮಾನುಗಳ ಮೂಲಕ ಸಿಂಗರಿಸಲಾಗಿತ್ತು. ಕೆಲವು ಶಾಲೆಗಳಲ್ಲಿ ಸಿಹಿತಿಂಡಿ, ಚಾಕಲೆಟ್ ನೀಡಿ ಶಿಕ್ಷಕರು ಸ್ವಾಗತಿಸಿದರು. ಜತೆಗೆ ಕೆಲವು ಶಾಲೆಯಲ್ಲಿ ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡರು.
ಶುಕ್ರವಾರದ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಅರ್ಧ ದಿನ ಮಾತ್ರ ತರಗತಿ ನಿಗದಿಯಾಗಿದೆ. ಈ ದಿನಗಳಲ್ಲಿ ಬಿಸಿಯೂಟ ವ್ಯವಸ್ಥೆ ಇಲ್ಲ. ನ. 2ರಿಂದ ಪೂರ್ಣಾವಧಿ (ಬೆಳಗ್ಗೆ 10ರಿಂದ ಸಂಜೆ 4.30) ತರಗತಿ ನಡೆಯಲಿದೆ. ಆಗ ಬಿಸಿಯೂಟ ವ್ಯವಸ್ಥೆ ಕೂಡ ಇರಲಿದೆ.
ಉಡುಪಿ ಜಿಲ್ಲೆಯಲ್ಲಿ 1ನೇ ತರಗತಿಗೆ 14,623, ಎರಡನೇ ತರಗತಿಗೆ 14,431, ಮೂರನೇ ತರಗತಿಗೆ 14,766, ನಾಲ್ಕನೇ ತರಗತಿಗೆ 14,051, ಐದನೇ ತರಗತಿಗೆ 15,289 ಮಂದಿ ವಿದ್ಯಾರ್ಥಿಗಳು ಹಾಜರಾದರು.
ತರಗತಿಗಳಲ್ಲಿ ಕೊರೊನಾ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತು. ಡಿಡಿಪಿಐ ಸಹಿತ ಎಲ್ಲ ವಲಯದ ಬಿಇಒಗಳು ತರಗತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ
ಹಾಜರಾಗದವರಿಗೆ ಆನ್‌ಲೈನ್ ತರಗತಿ
“ಪ್ರತೀ ದಿನ ಮಧ್ಯಾಹ್ನದವರೆಗೆ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಕಡೆಗಳಲ್ಲಿ ಮಾತ್ರ ದಿನ ಬಿಟ್ಟು ದಿನ ಹಾಜರಾಗುವಂತೆ ಆಯಾ ಶಾಲೆಗಳಲ್ಲಿ ಸೂಚಿಸಲಾಗಿದೆ.
ವಿದ್ಯಾರ್ಥಿಗಳು ತುಂಬ ಉತ್ಸಾಹ ದಿಂದಲೇ ಮೊದಲ ದಿನ ಹಾಜರಾಗಿ ದ್ದಾರೆ. ಶಾಲೆಗೆ ಬರಲು ಇಷ್ಟವಿಲ್ಲದ ವರು ಆನ್‌ಲೈನ್ ಮೂಲಕವೂ ಕಲಿಯಲು ಅವಕಾಶವಿದೆ’ ಎಂದು ಉಭಯ ಜಿಲ್ಲಾ ಡಿಡಿಪಿಐಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.