![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 26, 2021, 10:51 AM IST
ಕಾಣಿಯೂರು: ಸುಬ್ರಹ್ಮಣ್ಯ-ಮಂಗಳೂರು ರೈಲ್ವೆಯ ಎಡಮಂಗಲ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟದ್ದು, ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ.
ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ (ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ.
ಕೂಡಲೇ ಚಾಲಕ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ, ಇಲಾಖೆಯ ಗಮನಕ್ಕೆ ತಂದಿದ್ದಾರೆ.
ಇದನ್ನೂ ಓದಿ: ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ
ಬಳಿಕ ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಲಾಯಿತು. ನಂತರ ರೈಲು ಸಂಚರಿಸಲು ಅವಕಾಶ ನೀಡಲಾಯಿತು. ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
You seem to have an Ad Blocker on.
To continue reading, please turn it off or whitelist Udayavani.