ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್
Team Udayavani, Oct 26, 2021, 1:27 PM IST
ಮೈಸೂರು: ಕುರುಬರಿಗೆ ಸಿದ್ದರಾಮಯ್ಯನ ನೋಡಿದರೆ ಇಂಗ್ಲೀಷ್ ಸಿನಿಮಾ ನೋಡಿದ ಹಾಗೆ ಆಗುತ್ತದೆ. ಅದಕ್ಕೆ ವೇದಿಕೆಗೆ ಬಂದಾಗೆಲ್ಲಾ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಕುರುಬ ಸಮುದಾಯವನ್ನು ಹೈಜಾಕ್ ಮಾಡಿಕೊಂಡಿದ್ದಾರೆ. ಸಮುದಾಯಕ್ಕಾಗಿ ಏನೂ ಮಾಡಿಲ್ಲ. ಕೆಲವೊಂದು ಸಮುದಾಯ ಭವನ, ಕಲ್ಯಾಣ ಮಂಟಪ ಮಾಡಿದ್ದಾರೆ ಅಷ್ಟೇ. ಸಮುದಾಯದ ಆರ್ಥಿಕವಾಗಿ ಮುಂದುವರೆಯೋದಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಹಾನಗಲ್-ಸಿಂಧಗಿ ಕ್ಷೇತ್ರದ ಕುರುಬ ಸಮುದಾಯಕ್ಕೆ ಸಂದೇಶ ರವಾನಿಸಿದ ಅವರು, ಸಮುದಾಯ ಹಾಗೂ ದೇಶದ ಓಳಿತಿಗಾಗಿ ಬೊಮ್ಮಾಯಿ ನೇತೃತ್ವದ ಬಿಜೆಪಿಗೆ ಮತಹಾಕಿ. ಇನ್ನೂ ಒಂದೂವರೆ ವರ್ಷ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುತ್ತದೆ. ಕುರುಬ ಕಲ್ಯಾಣ ಬಿಜೆಪಿಯಿಂದ ಮಾತ್ರ ಸಾಧ್ಯ. ಬಸವರಾಜ ಬೊಮ್ಮಾಯಿ ಕುರುಬ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ್ದಾರೆ. ಹಾಗಾಗಿ ಸಮುದಾಯದ ಅಭಿವೃದ್ಧಿಗಾಗಿ ಕುರುಬರು ಬಿಜೆಪಿ ಬೆಂಬಲಿಸಿ ಎಂದರು.
ಇದನ್ನೂ ಓದಿ:ಕಾಂಗ್ರೆಸ್ ಭಯೋತ್ಪಾದಕರನ್ನು ಬೆಂಬಲಿಸುವ ಪಕ್ಷ: ಸಿ.ಟಿ.ರವಿ ವಾಗ್ದಾಳಿ
ಸಿದ್ದರಾಮಯ್ಯ ನೀವೂ ಕೂಡ ಮುಖ್ಯಮಂತ್ರಿಯಾಗಿದ್ದವರು. ನಿಮಗೆ ಕುರುಬ ಜನಾಂಗ ಸೇರಿದಂತೆ ಎಲ್ಲಾ ಜನಾಂಗದವರು ಮತ ಹಾಕಿದ್ದಾರೆ. ಆದರೆ ನೀವು ಹಾಗೆ ಮಾತನಾಡುತ್ತಿರುವುದು ಸಮುದಾಯಕ್ಕೆ ಶೋಭೆ ತರುವಂತದಲ್ಲ. ಮುಖ್ಯಮಂತ್ರಿ, ಪ್ರಧಾನಿಗಳನ್ನು ಏಕವಚನದಲ್ಲಿ ಮಾತನಾಡೋದು ಸಭ್ಯ ಸಮಾಜದಲ್ಲಿ ಸಣ್ಣತನ. ಕುರಿ ಮತ್ತು ಕಂಬಳಿ ವೃತ್ತಿಯ, ಸಮುದಾಯದ ಸ್ವತ್ತು. ಅದು ಒಂದು ಜಾತಿಯ ಸ್ವತ್ತಲ್ಲ. ಪ್ರಪಂಚದಲ್ಲಿ ಕುರಿಯನ್ನು ಹೆಚ್ಚು ಸಾಕುವುದು ಯುರೋಪ್, ಎರಡನೇಯದ್ದು ಭಾರತ. ಯುರೋಪ್‌ನಲ್ಲಿ ಅದು ಬಹು ಮುಖ್ಯ ಉದ್ಯಮ. ಆದರೆ ಭಾರತ ದೇಶದಲ್ಲಿ ಅದನ್ನು ಸಂಕುಚಿತ ಮಾಡಿ ಒಂದು ಜಾತಿಗೆ ಸೀಮಿತ ಮಾಡಲಾಗುದೆ. ಸಿದ್ದರಾಮಯ್ಯ ಸಂಕುಚಿತ ಆದಂತೆ ಕುರುಬರು ಏಕಾಂಗಿಗಳಾಗುತ್ತಾರೆ. ಇದರ ಅಪಾಯ ಮನಗಂಡು ಎಚ್ಚರಿಕೆಯಿಂದ ಮಾತನಾಡಿ. ರಾಜಕಾರಣದಲ್ಲಿ ನೀವು ಏಕಾಂಗಿಗಳಾಗಿ ಬಿಡುತ್ತೀರಿ ಎಂದರು.
ಕೃತಜ್ಞತೆ ಇಲ್ಲದ ನಾಯಕ: ಸಿದ್ದರಾಮಯ್ಯಗೆ ಕೃತಜ್ಞತೆ ಎಂಬುದೇ ಇಲ್ಲ. ಈ ನಾಡಿನಲ್ಲಿ ಕೃತಜ್ಞತೆ ಇಲ್ಲದ ನಾಯಕ ಅಂದರೆ ಸಿದ್ದರಾಮಯ್ಯ. ಹೆಚ್.ಡಿ.ದೇವೇಗೌಡ ಅವರು ನಿಮ್ಮನ್ನು ಆಚೆಗೆ ಹಾಕಿದಾಗ ನಿಮ್ಮನ್ನು ಹಾತುಕೊಂಡವರು ನಾನು. ನಂತರ ಎಸ್‌ಎಂ.ಕೃಷ್ಣ, ಹೆಚ್.ಎಂ.ರೇವಣ್ಣ, ಮಲ್ಲಿಕಾರ್ಜುನ ಖರ್ಗೆ. ಕಾಂಗ್ರೆಸ್ ಗೆ ಕರೆತಂದು ನಿಮ್ಮನ್ನು ವಿರೋಧ ಪಕ್ಷದ ನಾಯಕ, ನಂತರ ಮುಖ್ಯಮಂತ್ರಿಯಾದಿರಿ ಎಂದರು.
ಸಿದ್ದರಾಮಯ್ಯ ಒಂತರ ಇಂಗ್ಲಿಷ್ ನವರ ರೀತಿ. ನಿಮ್ಮನ್ನ ಒಳಗೆ ಕರೆತಂದರೆ, ನೀವು ನಮ್ಮನ್ನು ಹೊರ ಹಾಕಿದಿರಿ. ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗುವಾಗ ನಾನು ನಿಮಗೆ ಗನ್‌ಮ್ಯಾನ್ ಆಗಿದ್ದೆ. ಆದರೆ ನೀವು ಯಾರನ್ನೂ ಬಿಡಲಿಲ್ಲ, ಹೊರ ಹಾಕಿದಿರಿ. ಎಸ್.ಎಂ.ಕೃಷ್ಣ ನಿಮ್ಮನ್ನ ಅನ್ ಪಾಲಿಷ್ಡ್ ಡೈಮಂಡ್ ಅಂದರು. ಆದರೆ ನೀವು ಅವರನ್ನೂ ಏಕವಚನದಲ್ಲಿ ಮಾತನಾಡಿದಿರಿ ಎಂದು ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.