ಉಪ ಚುನಾವಣೆ: ಸುಗಮ ಮತದಾನಕ್ಕೆ ಸಕಲ ವ್ಯವಸ್ಥೆ

Team Udayavani, Oct 27, 2021, 3:18 PM IST

19election

ಹಾವೇರಿ: ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅ. 30ರಂದು ಮತದಾನ ನಡೆಯಲಿದ್ದು, ಸುಗಮ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಬಹಿರಂಗ ಪ್ರಚಾರಕ್ಕೆ ಅ. 27ರಂದು ಸಂಜೆ 7ಕ್ಕೆ ತೆರೆ ಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅ. 30ರಂದು ಬೆಳಗ್ಗೆ 6ರಿಂದ ಸಂಜೆ 7ರವರೆಗೆ ಎಕ್ಸಿಟ್‌ ಪೋಲ್‌ ನಿರ್ಬಂಧಿಸಲಾಗಿದೆ ಮತ್ತು ಮತದಾನ ಸಮೀಕ್ಷೆಯನ್ನು ಪ್ರಚುರ ಪಡಿಸುವಂತಿಲ್ಲ. ಮತದಾನ ಮುಕ್ತಾಯದ 48 ಗಂಟೆ ಪೂರ್ವದ ಅವಧಿಯಲ್ಲಿ ಮತದಾನ ಕುರಿತ ಅಭಿಪ್ರಾಯ ಸಮೀಕ್ಷೆ(ಒಪಿನಿಯನ್‌ ಪೋಲ್‌) ನಿರ್ಬಂಧಿಸಲಾಗಿದೆ ಎಂದರು.

ಮತದಾನ ಮುಕ್ತಾಯದ ಹಿಂದಿನ 72 ಗಂಟೆಗಳ ಅವಧಿ-ನಿಶ್ಯಬ್ದ ಅವಧಿ ಎಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ ಚುನಾವಣಾ ಪ್ರಚಾರ, ಬಹಿರಂಗ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ ಒಂದು ಗುಂಪಿನಲ್ಲಿ ಐದು ಜನರಿಗಿಂತ ಹೆಚ್ಚು ಜನರು ಒಟ್ಟಾಗಿ ಮನೆ ಮನೆ ಪ್ರಚಾರ ಮಾಡುವಂತಿಲ್ಲ. ಈ ನಿಯಮ ಅಭ್ಯರ್ಥಿಗಳಿಗೂ ಅನ್ವಯಿಸುತ್ತದೆ. ಚುನಾವಣಾ ನಿಯಮಗಳ ಜೊತೆಗೆ ಕೋವಿಡ್‌ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದರು.

ತಾರಾ ಪ್ರಚಾರಕರು ಸೇರಿದಂತೆ ರಾಜಕೀಯ ಮುಖಂಡರು ಸೇರಿದಂತೆ ರಾಜಕೀಯ ಉದ್ದೇಶಕ್ಕಾಗಿ ಕ್ಷೇತ್ರಕ್ಕೆ ಆಗಮಿಸಿದ ಹೊರಗಿನವರು ಅ. 27ರಂದು ಸಂಜೆ 7ರ ಬಳಿಕ ಕ್ಷೇತ್ರದಲ್ಲಿ ಉಳಿದುಕೊಳ್ಳುವಂತಿಲ್ಲ. ಆದರೆ ಈ ಷರತ್ತು ಅಭ್ಯರ್ಥಿಗಳಿಗೆ ಹಾಗೂ ಅಧಿಕೃತ ಏಜೆಂಟರುಗಳಿಗೆ ಅನ್ವಯಿಸುವುದಿಲ್ಲ. ಪಕ್ಷದ ವಾಹನಗಳನ್ನು ಬಳಸುವಂತಿಲ್ಲ. ಧಾರ್ಮಿಕ ಸ್ಥಳಗಳಲ್ಲಿ ಮತ ಪ್ರಚಾರ ಮಾಡುವಂತಿಲ್ಲ. ಜಾತಿ, ಧರ್ಮ, ಭಾಷೆ ಆಧಾರದ ಮೇಲೆ ಮತ ಕೇಳುವಹಾಗಿಲ್ಲ. ಧ್ವನಿವರ್ಧಕ ಬಳಸುವಂತಿಲ್ಲ ಎಂದು ತಿಳಿಸಿದರು.

ಮದುವೆಗೆ ಅನುಮತಿ ಕಡ್ಡಾಯ

72 ತಾಸಿನ ಅವಧಿಯಲ್ಲಿ ಮತ ಕ್ಷೇತ್ರದ ವ್ಯಾಪ್ತಿಯೋಳಗೆ ಹಾಗೂ ಮತ ಕ್ಷೇತ್ರದ ಐದು ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುವ ಮದುವೆ ಸಮಾರಂಭಗಳಿಗೆ ಕ್ಷೇತ್ರ ಚುನಾವಣಾಧಿಕಾರಿ(ಆರ್‌ಒ)ಗಳಿಂದ ಅನುಮತಿ ಕಡ್ಡಾಯವಾಗಿದೆ. ಮದುವೆ ಹೊರತುಪಡಿಸಿದಂತೆ ಯಾವುದೇ ರಾಜಕೀಯ ಪಕ್ಷಗಳು ಗುಂಪು ಭೋಜನ ಏರ್ಪಡಿಸುವುದನ್ನು ನಿಷೇಧಿಸಿದೆ ಎಂದು ತಿಳಿಸಿದರು. ಚೆಕ್‌ಪೋಸ್ಟ್‌ಗಳಲ್ಲಿ ಎಲ್ಲ ರೀತಿಯ ವಾಹನಗಳನ್ನು ಕಡ್ಡಾಯ ತಪಾಸಣೆಗೆ ಒಳಪಡಿಸಲಾಗಿದೆ. ಗಡಿಭಾಗದಲ್ಲಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌, ಅಬಕಾರಿ, ಸೆಕ್ಟರ್‌ ಅಧಿಕಾರಿಗಳ ತಂಡಗಳು ವ್ಯಾಪಕ ಗಸ್ತು ನಡೆಸಲಿವೆ ಎಂದರು.

ಅಭ್ಯರ್ಥಿಗೆ ಎರಡು ವಾಹನ ಮಾತ್ರ

ಓರ್ವ ಅಭ್ಯರ್ಥಿಗೆ ಎರಡು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುವುದು. ವಾಹನ ಚಾಲಕ ಸೇರಿದಂತೆ ಒಂದು ವಾಹನದಲ್ಲಿ ಮೂರು ಜನರಿಗೆ ಮಾತ್ರ ಓಡಾಡಲು ಅವಕಾಶವಿದೆ. ಅಭ್ಯರ್ಥಿ ಹೆಸರಿಗೆ ಅನುಮತಿ ಪಡೆದ ವಾಹನದಲ್ಲಿ ಅಭ್ಯರ್ಥಿ ಅಲ್ಲದೆ ಬೇರೆಯವರು ಬಳಸುವಂತಿಲ್ಲ. ಮತದಾನ ದಿನ ಮತ್ತು ಮತ ಎಣಿಕೆ ದಿನ ವೀಕ್ಷಣೆ ಅಥವಾ ಮೇಲ್ವಿಚಾರಣೆಗಾಗಿ ಯಾವುದೇ ರಾಜಕೀಯ ಪಕ್ಷಗಳು ಹೆಲಿಕಾಪ್ಟರ್‌ ಹಾಗೂ ಏರ್‌ ಕ್ಯಾಪ್ಟರ್‌ ಬಳಸುವಂತಿಲ್ಲ ಎಂದರು.

ಮತಗಟ್ಟೆಗೆ ಮತದಾರರನ್ನು ವಾಹನದಲ್ಲಿ ಕರೆದುಕೊಂಡು ಬರುವುದು ಹಾಗೂ ಮನೆಗೆ ವಾಹನದಲ್ಲಿ ಡ್ರಾಪ್‌ ಮಾಡುವುದನ್ನು ನಿರ್ಬಂಧಿಸಲಾಗಿದೆ. ಮತಗಟ್ಟೆಯ 100 ಮೀಟರ್‌ ಅಂತರದೊಳಗೆ ಪ್ರಚಾರ ಮಾಡುವಂತಿಲ್ಲ. 200 ಮೀಟರ್‌ ವ್ಯಾಪ್ತಿಯ ಹೊರಗೆ ರಾಜಕೀಯ ಪಕ್ಷದ ಚುನಾವಣೆ ಬೂತ್‌ ಸ್ಥಾಪಿಸಬಹುದು. ಮತಗಟ್ಟೆಯ 100 ಮೀಟರ್‌ ವ್ಯಾಪ್ತಿಯೊಳಗೆ ಮೊಬೈಲ್‌ ಫೋನ್‌, ಕಾಡಲೆಸ್‌ ಫೋನ್‌ ನಿಷೇಧಿಸಲಾಗಿದೆ. ರಾಜಕೀಯ ಪೋಸ್ಟ್‌, ಬ್ಯಾನರ್‌, ಪಕ್ಷದ ಚಿಹ್ನೆಯನ್ನು ಪ್ರದರ್ಶಿಸುವಂತಿಲ್ಲ. ಮತದಾರರಿಗೆ ಪಕ್ಷದ ಚಿಹ್ನೆ, ಹೆಸರು ಇರುವ ಮತದಾರರ ಚೀಟಿ ನೀಡುವಂತಿಲ್ಲ. ಮತಗಟ್ಟೆ ವ್ಯಾಪ್ತಿಯಲ್ಲಿ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಸ್ಪಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಡಾ| ಎನ್‌. ತಿಪ್ಪೇಸ್ವಾಮಿ ಇದ್ದರು

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.