ಫಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್
Team Udayavani, Oct 27, 2021, 10:45 PM IST
ವಿಜಯಪುರ: ಇನ್ನೂ ಆರು ದಿನ ತಡೆಯಿರಿ, ನ. 2ರಂದು ಉಪಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಆಗ ಯಾರು ಫಸ್ಟ್, ಯಾರು ಸೆಕೆಂಡ್, ಯಾರು ಲಾಸ್ಟ್, ಯಾರ ಠೇವಣಿ ಜಪ್ತಿ ಆಗುತ್ತದೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿದರು.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯುತ್ತಿರುವುದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ತೆರವಾದ ಕ್ಷೇತ್ರಗಳಿಗೆ. ಸಿಂದಗಿ ಜೆಡಿಎಸ್ ಶಾಸಕರಿದ್ದ ಕ್ಷೇತ್ರ, ಹಾನಗಲ್ ಬಿಜೆಪಿ ಶಾಸಕರಿದ್ದ ಕ್ಷೇತ್ರ. ಈ ಎರಡೂ ಕ್ಷೇತ್ರಗಳು ನಮ್ಮ ವಿರೋಧ ಪಕ್ಷಗಳ ಶಾಸಕರಿದ್ದ ಕ್ಷೇತ್ರಗಳು. ಎರಡೂ ಕಡೆ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನ ಸಾಮರ್ಥ್ಯ ತೋರಲಿದೆ. ಈ ಎರಡು ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. 2023ರಲ್ಲಿ ಕಾಂಗ್ರೆಸ್ ಮತ್ತೆ 150 ಸ್ಥಾನ ಗೆಲ್ಲುವುದರೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು.
ಬಿಜೆಪಿ ಆಡಳಿತದಿಂದ ದೇಶ ಹಾಗೂ ರಾಜ್ಯದ ಜನರು ರೋಸಿ ಹೋಗಿದ್ದಾರೆ. ನಿತ್ಯವೂ ಏರುತ್ತಿರುವ ಇಂಧನ ಬೆಲೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಪರಿಣಾಮ ಜನರು ಈ ಉಪಚುನಾವಣೆಯಲ್ಲಿ ಅದಕ್ಕೆ ತಕ್ಕ ಉತ್ತರವನ್ನೂ ಕೊಡಲಿದ್ದಾರೆ ಎಂದರು.
ಸಿಂದಗಿ ಚುನಾವಣೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಎಲ್ಲರೂ ವ್ಯವಸ್ಥಿತವಾಗಿ ಕೆಲಸ ಮಾಡಿದ್ದಾರೆ. ಹೊರಗಿನಿಂದ ಬಂದ ಶಾಸಕರೂ ಸಹಿತ ಒಂದೊಂದು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಮತಯಾಚನೆ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಜನರು ಕಾಂಗ್ರೆಸ್ ಪಕ್ಷದತ್ತ ಒಲವು ತೋರಿರುವುದು ಸ್ಪಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು.
ಇದನ್ನೂ ಓದಿ:ಕನ್ನಡಕ್ಕಾಗಿ ಲಾಠಿ ಏಟು ತಿಂದು 15 ದಿನ ಆಸ್ಪತ್ರೆಯಲ್ಲಿದ್ದೆ: ಸಚಿವ ಆರ್.ಅಶೋಕ್
ಸಿಂದಗಿ ಕಾಂಗ್ರೆಸ್‌ದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮಾಜಿ ಶಾಸಕ ಶರಣಪ್ಪ ಸುಣಗಾರ ಕಾಂಗ್ರೆಸ್ ಟಿಕೆಟ್ ಕೇಳುತ್ತಿದ್ದರು. ಇದೀಗ ನಮ್ಮೊಂದಿಗೇ ಇದ್ದು ಅಶೋಕ ಮನಗೂಳಿ ಗೆಲುವಿಗಾಗಿ ಮತಯಾಚನೆ ಮಾಡಿದ್ದಾರೆ.
ಹೀಗಾಗಿ ಮೆಲ್ನೋಟ ಒಳನೋಟ ಅಂತಾ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಳ ಮಟ್ಟದ ಕಾರ್ಯಕರ್ತರಿಂದ ಹಿಡಿದು ದೊಡ್ಡ ಮಟ್ಟದ ನಾಯಕರವರೆಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎಂದರು.
ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಕುರಿತು ಈಗ ಪ್ರತಿಕ್ರಿಯಿಸುವುದಿಲ್ಲ. ಚುನಾವಣೆ ಮುಗಿದ ಮೇಲೆ ಮಾತನಾಡುವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.