ಸ್ನೇಹಿತರ ವಿರುದ್ಧವೇ ನಟಿ ಸಂಜನಾ ದೂರು
Team Udayavani, Oct 28, 2021, 10:14 AM IST
ಬೆಂಗಳೂರು: ಹಣ ಹೂಡಿಕೆ ಮಾಡಿಸಿಕೊಂಡು ಮೂರು ವರ್ಷಗಳಿಂದ ಯಾವುದೇ ಲಾಭಾಂಶ ಹಾಗೂ ಅಸಲಿ ಹಣ ಕೊಡದೇ ವಂಚಿಸಿದ ಆರೋಪದ ಮೇಲೆ ತಮ್ಮ ಆಪ್ತ ಮೂವರು ಸ್ನೇಹಿತರ ವಿರುದ್ಧ ನಟಿ ಸಂಜನಾ ಗಲ್ರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಈ ಸಂಬಂಧ ಇಂದಿರಾನಗರ ಠಾಣೆಗೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ನೀಡಿ, ತಮ್ಮ ಆಪ್ತಪರಾದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದ ರಾಹುಲ್ ಟೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ಮತ್ತು ಸಹಚರರಾದ ರಾಮಕೃಷ್ಣ ಹಾಗೂ ರಾಘವೇಶ್ವರಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮೂರು ವರ್ಷಗಳ ಹಿಂದೆ ರಾಹುಲ್ ಟೋನ್ಸೆ ಸಲಹೆ ಮೇರೆಗೆ ಇತರೆ ಇಬ್ಬರು ಆರೋಪಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ:- ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ
ಮೂವರು ಆರೋ ಪಿಗಳು ಹೆಚ್ಚು ಹಣ ಸಂಪಾದನೆ ಮಾಡಬಹುದು ಎಂದು ಆಮಿಷವೊಡ್ಡಿ ಲಕ್ಷಾಂತರ ರೂ. ಹಣವನ್ನು ಪಡೆ ದುಕೊಂಡಿದ್ದಾರೆ. ಆದರೆ, ಯಾವುದೇ ಲಾಭಾಂಶ ಕೊಡುತ್ತಿಲ್ಲ. ಅಸಲಿ ಹಣ ಸಹ ನೀಡುತ್ತಿಲ್ಲ ಎಂದು ನಟಿ ಕೋರ್ಟ್ ಮೊರೆ ಹೋಗಿದ್ದರು.
ಈ ಸಂಬಂಧ ಕೋರ್ಟ್ ಸೂಚನೆ ಮೇರೆಗೆ ಇಂದಿರಾನಗರ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.ಈ ಸಂಬಂಧ ಠಾಣೆಗೆ ಹಾಜರಾಗಿ ಹಣ ವರ್ಗಾವಣೆ ಕುರಿತ ಬ್ಯಾಂಕ್ ದಾಖಲೆ, ಹಣ ಹೂಡಿಕೆ ಮಾಡಿರುವ ಕುರಿತ ಪೂರಕ ದಾಖಲಾತಿ ಪತ್ರಗಳನ್ನು ತನಿಖಾಧಿಕಾರಿಗಳಿಗೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.