ಚೀನಾ ಗಡಿ ಬಂದ್: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು, ಕಡಿಮೆ ಊಟ ಮಾಡಿ ಎಂದ ಕಿಮ್!
ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ.
Team Udayavani, Oct 28, 2021, 3:20 PM IST
ಸಿಯೋಲ್: ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪ್ರವಾಸಿಗರೇ ಎಚ್ಚರ : ಚಿಕ್ಕಮಗಳೂರಿನ ಎತ್ತಿನಭುಜ ಪ್ರವಾಸಿ ತಾಣದಲ್ಲಿವೆ ಕಾಡಾನೆ ಹಿಂಡು
ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವರದಿ ವಿವರಿಸಿದೆ.
2025ರಲ್ಲಿ ಚೀನಾ ಜತೆಗಿನ ಗಡಿಯನ್ನು ಪುನರಾರಂಭಿಸುವವರೆಗೆ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕೆಂದು ಕಿಮ್ ಎಚ್ಚರಿಕೆಯ ಸಂದೇಶವನ್ನು ಹೊರಡಿಸಿದ್ದಾರೆ. ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ. ಅದೇ ರೀತಿ ಇನ್ನು ಮೂರು ವರ್ಷಗಳ ಕಾಲ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಕೊರಿಯಾ 2020ರ ಜನವರಿಯಲ್ಲಿ ಚೀನಾ ಜತೆಗೆ ಹೊಂದಿಕೊಂಡಿದ್ದ ಗಡಿಯನ್ನು ಮುಚ್ಚಿತ್ತು. ಆದರೆ ಉತ್ತರ ಕೊರಿಯಾದ ಈ ನಿರ್ಧಾರದಿಂದಾಗಿ ದೇಶದ ಆರ್ಥಿಕತೆ ಮೇಲೆ ಭಾರೀ ಪರಿಣಾಮ ಬೀರಿತ್ತು. ಅಷ್ಟೇ ಅಲ್ಲ ಪ್ರತಿದಿನ ದಿನಬಳಕೆ ವಸ್ತುಗಳ ಬೆಲೆಯೂ ಗಗನಕ್ಕೇರತೊಡಗಿರುವುದಾಗಿ ವರದಿ ವಿವರಿಸಿದೆ.
ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ ಮಾಡಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ. ಚೀನಾ ಜತೆಗಿನ ವ್ಯಾಪಾರ, ವಹಿವಾಟು ಬಂದ್ ಮಾಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಉತ್ತರಕೊರಿಯಾದಲ್ಲಿ ಬಿರುಗಾಳಿ ಮತ್ತು ಪ್ರವಾಹದಿಂದಾಗಿ ಬೆಳೆಗಳು ನಾಶವಾದ ಪರಿಣಾಮ ಆಹಾರ ಬಿಕ್ಕಟ್ಟು ವಿಕೋಪಕ್ಕೆ ಹೋಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.