ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ
Team Udayavani, Oct 28, 2021, 5:52 PM IST
ಪಣಜಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಹಲವು ಫಲಕಗಳನ್ನು ಗೋವಾದಲ್ಲಿ ವಿರೂಪಗೊಳಿಸಲಾಗಿದ್ದು,ಕೃತ್ಯವನ್ನು ಖಂಡಿಸಿರುವ ಗೋವಾ ತೃಣಮೂಲ ಕಾಂಗ್ರೆಸ್ ಇದು ಬಿಜೆಪಿಯ ಅಸಹಿಷ್ಣುತೆಯನ್ನು ಬಿಂಬಿಸುತ್ತದೆ ಎಂದಿದೆ.
ಟಿಎಂಸಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ರವರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರನ್ನು ತುಳಿಯಲು ಪ್ರಯತ್ನಿಸುತ್ತಿರುವ ಕಾರ್ಟೂನನ್ನು ತೃಣಮೂಲ ಕಾಂಗ್ರೆಸ್ನ ಗೋವಾ ಘಟಕವು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ ಎಂದು ಬಿಜೆಪಿ ಭಾನುವಾರ ಆರೋಪಿಸಿತ್ತು.
ಈ ಕುರಿತ ಟ್ವೀಟ್ ನ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆಯೇ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಹಲವು ಫಲಕಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ.
ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಪಕ್ಷದ ರಾಜ್ಯಸಭಾ ಸದಸ್ಯ ಡೇರಿಕ್ ಓಬ್ರಿಯಾನ್,”ದೇಶದಲ್ಲಿರುವ ಏಕೈಕ ಮಹಿಳಾ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ” ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.