ಬೈಲಹೊಂಗಲ: ಟ್ರಾಫಿಕ್ ಇನ್ಸ್ ಪೆಕ್ಟರ್ ವಿರುದ್ಧ ಬಸ್ ತಡೆದು ಎಬಿವಿಪಿ ಪ್ರತಿಭಟನೆ
Team Udayavani, Oct 28, 2021, 6:45 PM IST
ಬೈಲಹೊಂಗಲ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಟ್ರಾಫಿಕ್ ಇನ್ಸ್ ಪೆಕ್ಟರ್ ಬಿ.ಜಿ.ಪುಡಲಕಟ್ಟಿ ಅವರು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ, ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕೆಂದು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಬಸ್ ನಿಲ್ದಾಣದ ಮುಂಭಾಗದ ಗೇಟನಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಬಸ್ ಹೊರಗೆ ಬಿಡದೆ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕಿತ್ತೂರ ಚೆನ್ನಮ್ಮ ಸಮಾಧಿ ಬಳಿ ನೂರಾರು ಎಬಿವಿಪಿ ಕಾರ್ಯಕರ್ತರು ಜಮಾವಣೆಗೊಂಡು ಮೆರವಣಿಗೆ ಮೂಲಕ ಕೇಂದ್ರ ಬಸ್ ನಿಲ್ದಾಣದ ಗೇಟ್‌ನಲ್ಲಿ ಕುಳಿತು ಪ್ರತಿಭಟಿಸಿ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಜಿಲ್ಲಾ ಸಾರಿಗೆ ಘಟಕದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕೆಂದು ಪಟ್ಟು ಹಿಡಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಸಾರಿಗೆ ಘಟಕದ ವ್ಯವಸ್ಥಾಪಕ ಚೇತನ ಸಾಣಿಕೊಪ್ಪ, ವಿದ್ಯಾರ್ಥಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸುವ ಭರವಸೆ ನೀಡಿದರೂ ಸಹ ವಿದ್ಯಾರ್ಥಿಗಳು ಮನವಿಗೆ ಸ್ಪಂದಿಸದೆ ಹೋರಾಟವನ್ನು ಮುಂದುವರೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಚಿತ್ರನಟ ಶಿವರಂಜನ್ ಬೊಳನ್ನವರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನಿನ ಅಡಿಯಲ್ಲಿ ಹೋರಾಟ ಮಾಡುವುದು ಪ್ರತಿಯೊಬ್ಬನ ನಾಗರಿಕನ ಕರ್ತವ್ಯವಾಗಿದ್ದು ಕಳೆದ ಎರಡು ದಿನಗಳ ಹಿಂದೆ ಎಬಿವಿಪಿ ಜಿಲ್ಲಾ ಸಹಸಂಚಾಲಕ ಅಪ್ಪಣ್ಣ ಹಡಪದ ಇವರು ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸಾರಿಗೆ ಘಟಕದ ಟ್ರಾಫಿಕ್ ಇನ್ಸ್ಪೆಕ್ಟರ್ ಬಿ.ಜಿ.ಪುಡಕಲಕಟ್ಟಿ ಇವರನ್ನು ಬಸ್ಸಿನ ಅನಾನುಕೂಲತೆ ಇದ್ದು ವಿಚಾರಿಸಿದಾಗ ಸಾರಿಗೆ ಬಸ್ ಚಾಲಕ ಏಕಾಏಕಿ ವಿದ್ಯಾರ್ಥಿಗಳ ಮೈಮಲೆ ಬಸ್ ಹಾಯಿಸಲು ಪ್ರಯತ್ನಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿ, ವಿದ್ಯಾರ್ಥಿ ಮುಖಂಡನ ಮೇಲೆ ವಿನಾಕಾರಣ ಸುಳ್ಳು ಆರೋಪ ಹೊರಿಸಿ ಪೋಲಿಸ್‌ರಿಗೆ ದೂರು ನೀಡಿದ್ದು ಸರಿಯಾದ ಕ್ರಮವಲ್ಲ. ಪೋಲಿಸ್ ಇಲಾಖೆಯ ಅಧಿಕಾರಿಗಳು ಸಹ ವಿದ್ಯಾರ್ಥಿಯ ಸಮಸ್ಯೆಯನ್ನು ಆಲಿಸದೆ ಅವನನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಸುಮಾರು ಎಂಟು ಗಂಟೆ ಕಾಲ ಠಾಣೆಯಲ್ಲಿ ಕುಳ್ಳಿರಿಸಿ ಪ್ರತಿಭಟನಾ ಶಕ್ತಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದು ಸರಿಯಲ್ಲ. ಟ್ರಾಫಿಕ್ ಇನ್ಸ್ಪೆಕ್ಟರ್ ಇತನನ್ನು ೮ ದಿನಗಳ ಒಳಗಾಗಿ ವರ್ಗಾವಣೆ ಮಾಡದಿದ್ದರೆ ಕನ್ನಡ ಪರ ಸಂಘಟನೆಗಳು ಎಬಿವಿಪಿಗೆ ಬೆಂಬಲ ವ್ಯಕ್ತಪಡಿಸಿ ಬೀದಿಗಿಳಿದು ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.
ಕರ್ನಾಟಕ ನವ ನಿರ್ಮಾಣ ಪಡೆ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ತುರಮರಿ, ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ ಮಾತನಾಡಿ, ಎಬಿವಿಪಿ ಕಾರ್ಯಕರ್ತರ ಬೇಡಿಕೆ ನ್ಯಾಯಸಮ್ಮತವಾಗಿದ್ದು ಕೂಡಲೇ ಅವರ ಬೇಡಿಕೆಯನ್ನು ಇಡೇರಿಸಬೇಕು ತಪ್ಪಿತಸ್ಥ ಅಧಿಕಾರಿ ಪುಡಕಲಟ್ಟಿಯವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಸಹ ಸಂಚಾಲಕ ಅಪ್ಪಣ್ಣ ಹಡಪದ, ಸಿದ್ದಾರೂಡ ಹೊಂಡಪ್ಪನವನ್ನವರ ಮಾತನಾಡಿ, ಎಬಿವಿಪಿ ಕಾರ್ಯಕರ್ತರ ಬೇಡಿಕೆ ಇಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಸಾರಿಗೆ ಘಟಕ ವ್ಯವಸ್ಥಾಪಕ ಚೇತನ್ ಸಾಣಿಕೊಪ್ಪ ಮಾತನಾಡಿ,ಎಬಿವಿಪಿ ಕಾರ್ಯಕರ್ತರ ಬೇಡಿಕೆಯನ್ನು ಆದಷ್ಟು ಬೇಗ ಇತ್ಯರ್ಥಪಡಿಸಿ, ಟ್ರಾಫಿಕ್ ಇನ್ಸ್ಪೆಕ್ಟರ್ ವರ್ಗಾವಣೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಮುಖಂಡರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.
ಈ ಸಂದರ್ಭದಲ್ಲಿ ರಫೀಕ್ ಬಡೇಘರ್, ಶ್ರವಣ ಭಜಂತ್ರಿ, ಕಾರ್ತಿಕ ಗುಂಡ್ಲೂರ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.